ಆದಿಕಾಂಡ 33:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯಾಕೋಬನು, “ಹಾಗಲ್ಲ, ನಿನಗೆ ನನ್ನ ಮೇಲೆ ದಯೆಯಿದ್ದರೆ, ನಾನು ಸಮರ್ಪಿಸುವ ಕಾಣಿಕೆಯನ್ನು ಅಂಗೀಕರಿಸಬೇಕು. ನಿನ್ನನ್ನು ನೋಡಿದ್ದು ದೇವರನ್ನು ನೋಡಿದ ಹಾಗಾಯಿತು, ನನ್ನನ್ನು ಪ್ರೀತಿಯಿಂದ ಅಂಗೀಕರಿಸಿದ್ದೇ ವಿಶೇಷ ಸಂಗತಿಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅದಕ್ಕೆ ಯಕೋಬನು, “ಇಲ್ಲ, ಹಾಗೆನ್ನಬಾರದು. ನಿಮಗೆ ನನ್ನ ಮೇಲೆ ದಯೆಯಿರುವುದು ನಿಜವಾಗಿದ್ದಲ್ಲಿ ನಾನು ಸಮರ್ಪಿಸುವ ಕಾಣಿಕೆಯನ್ನು ಅಂಗೀಕರಿಸಲೇಬೇಕು. ನಿಮ್ಮನ್ನು ನೋಡಿದ್ದು ದೇವರನ್ನು ನೋಡಿದ ಹಾಗಾಯಿತು. ನನ್ನನ್ನು ಪ್ರೀತಿಯಿಂದ ಸ್ವಾಗತಿಸಿದ್ದೇ ಸಾಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯಾಕೋಬನು - ಹಾಗೆ ಅಪ್ಪಣೆಕೊಡಕೂಡದು; ನೀನು ನನ್ನ ಮೇಲೆ ಕಟಾಕ್ಷವಿಟ್ಟು ನಾನು ಸಮರ್ಪಿಸುವ ಕಾಣಿಕೆಯನ್ನು ಅಂಗೀಕರಿಸಬೇಕು. ನಿನ್ನನ್ನು ನೋಡಿದ್ದು ದೇವರನ್ನು ನೋಡಿದ ಹಾಗಾಯಿತು. ನನ್ನನ್ನು ಪ್ರೀತಿಯಿಂದ ಅಂಗೀಕರಿಸಿದ್ದೇ ವಿಶೇಷ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯಾಕೋಬನು, “ಇಲ್ಲ! ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ; ನೀನು ನನ್ನನ್ನು ನಿಜವಾಗಿಯೂ ಸ್ವೀಕರಿಸಿಕೊಳ್ಳುವುದಾದರೆ, ನಾನು ಕೊಡುವ ಉಡುಗೊರೆಗಳನ್ನು ದಯವಿಟ್ಟು ಸ್ವೀಕರಿಸಬೇಕು. ನಿನ್ನ ಮುಖವನ್ನು ಮತ್ತೆ ನೋಡಿ ನನಗೆ ತುಂಬ ಸಂತೋಷವಾಗಿದೆ. ದೇವರ ಮುಖವನ್ನೇ ನೋಡಿದಂತಾಯಿತು. ನೀನು ನನ್ನನ್ನು ಸ್ವೀಕರಿಸಿಕೊಂಡದ್ದರಿಂದ ನನಗೆ ತುಂಬ ಸಂತೋಷವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಯಾಕೋಬನು, “ಹಾಗಲ್ಲ, ಈಗ ನಿನ್ನ ದೃಷ್ಟಿಯಲ್ಲಿ ನಾನು ದಯೆ ಹೊಂದಿದ್ದೆನಾದರೆ, ನನ್ನ ಕಾಣಿಕೆಯನ್ನು ನನ್ನ ಕೈಯಿಂದ ತೆಗೆದುಕೊಳ್ಳಬೇಕು. ಏಕೆಂದರೆ ನಾನು ದೇವರ ಮುಖವನ್ನು ಕಂಡಂತೆ, ನಿನ್ನ ಮುಖವನ್ನು ಕಂಡದ್ದಕ್ಕಾಗಿಯೂ, ನೀನು ನನ್ನನ್ನು ಮೆಚ್ಚಿದ್ದಕ್ಕಾಗಿಯೂ, ಅಧ್ಯಾಯವನ್ನು ನೋಡಿ |