ಆದಿಕಾಂಡ 33:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ದೇವರು ನನಗೆ ಕೃಪೆಯನ್ನು ತೋರಿದ್ದರಿಂದ ನನಗೆ ಸಮೃದ್ಧಿಯುಂಟಾಯಿತು. ಆದಕಾರಣ ನಾನು ಸಮರ್ಪಿಸುವ ಉಡುಗೊರೆಯನ್ನು ನೀನು ದಯವಿಟ್ಟು ಅಂಗೀಕರಿಸಬೇಕು” ಎಂದು ಹೇಳಿ ಏಸಾವನನ್ನು ಬಲವಂತ ಮಾಡಿದ್ದರಿಂದ ಅವನು ಆ ಉಡುಗೊರೆಯನ್ನು ತೆಗೆದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ದೇವರ ಕೃಪೆಯಿಂದ ನನಗೆ ಬೇಕಾದುದೆಲ್ಲ ಇದೆ; ಆದಕಾರಣ ನಾನು ಸಮರ್ಪಿಸುವ ಕಾಣಿಕೆಯನ್ನು ತಾವು ದಯವಿಟ್ಟು ಅಂಗೀಕರಿಸಬೇಕು,” ಎಂದು ಹೇಳಿ ಒತ್ತಾಯಪಡಿಸಿದ್ದರಿಂದ ಏಸಾವನು ಆ ಕಾಣಿಕೆಯನ್ನು ತೆಗೆದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ದೇವರು ನನಗೆ ಕೃಪೆಯನ್ನು ಮಾಡಿದ್ದರಿಂದ ನನಗೆ ಸಮೃದ್ಧಿಯುಂಟು; ಆದಕಾರಣ ನಾನು ಸಮರ್ಪಿಸುವ ಕಾಣಿಕೆಯನ್ನು ನೀನು ದಯವಿಟ್ಟು ಅಂಗೀಕರಿಸಬೇಕು ಎಂದು ಹೇಳಿ ಏಸಾವನನ್ನು ಬಲವಂತಮಾಡಿದ್ದರಿಂದ ಅವನು ಆ ಕಾಣಿಕೆಯನ್ನು ತೆಗೆದುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆದ್ದರಿಂದ ನಾನು ಕೊಡುವ ಈ ಉಡುಗೊರೆಗಳನ್ನು ಸ್ವೀಕರಿಸಿಕೊಳ್ಳಬೇಕೆಂದು ಬೇಡಿಕೊಳ್ಳುತ್ತಿರುವೆ. ದೇವರು ನನಗೆ ತುಂಬ ಒಳ್ಳೆಯವನಾಗಿದ್ದನು. ನನಗೆ ಬೇಕಾದದ್ದಕ್ಕಿಂತಲೂ ಹೆಚ್ಚಾಗಿ ನನ್ನಲ್ಲಿದೆ” ಎಂದು ಹೇಳಿದನು. ಹೀಗೆ ಯಾಕೋಬನು ಉಡುಗೊರೆಗಳನ್ನು ತೆಗೆದುಕೊಳ್ಳುವಂತೆ ಏಸಾವನನ್ನು ಬೇಡಿಕೊಂಡನು. ಆದ್ದರಿಂದ ಏಸಾವನು ಉಡುಗೊರೆಗಳನ್ನು ಸ್ವೀಕರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಿನಗೋಸ್ಕರ ತಂದಿರುವ ನನ್ನ ಕಾಣಿಕೆಯನ್ನು ಸ್ವೀಕರಿಸಬೇಕೆಂದು ಬೇಡುತ್ತೇನೆ. ದೇವರು ನನ್ನೊಂದಿಗೆ ಕೃಪೆಯಿಂದ ವರ್ತಿಸಿದ್ದರಿಂದ ನನಗೆ ಬೇಕಾದಷ್ಟು ಇವೆ,” ಎಂದು ಹೇಳಿ, ಅವನನ್ನು ಬಲವಂತ ಮಾಡಿದ್ದರಿಂದ ಏಸಾವನು ಅದನ್ನು ತೆಗೆದುಕೊಂಡನು. ಅಧ್ಯಾಯವನ್ನು ನೋಡಿ |