Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 33:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ತಾವು ದಯವಿಟ್ಟು ಸೇವಕನಿಗಿಂತಲೂ ಮುಂಚೆ ಹೋಗಬಹುದು ನಾನು ನನ್ನ ಮುಂದಿರುವ ಆಡುಕುರಿಗಳ ನಡಿಗೆಗೂ ಮಕ್ಕಳ ಶಕ್ತಿಗೂ ಸರಿಯಾಗಿ ಮೆಲ್ಲಮೆಲ್ಲನೆ ನಡೆದು ನನ್ನ ಪ್ರಭುವಿನ ಸೀಮೆಯಾಗಿರುವ ಸೇಯೀರಿಗೆ ಬರುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ತಾವು ದಯವಿಟ್ಟು ದಾಸನಿಗಿಂತಲು ಮುಂಚೆ ಹೊರಡಬಹುದು, ನಾನು ನನ್ನ ಮುಂದಿರುವ ಆಡುಕುರಿಗಳ ಹಾಗೂ ಮಕ್ಕಳ ನಡಿಗೆಗೆ ತಕ್ಕ ಹಾಗೆ ಮೆಲ್ಲಮೆಲ್ಲನೆ ನಡೆದು ನನ್ನೊಡೆಯರ ನಾಡಾದ ಎದೋಮಿಗೆ ಬರುತ್ತೇನೆ,” ಎಂದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ತಾವು ದಯವಿಟ್ಟು ಸೇವಕನಿಗಿಂತಲೂ ಮುಂಚೆ ಹೊರಡಬಹುದು. ನಾನು ನನ್ನ ಮುಂದಿರುವ ಆಡುಕುರಿಗಳ ನಡಿಗೆಗೂ ಮಕ್ಕಳ ಶಕ್ತಿಗೂ ಸರಿಯಾಗಿ ಮೆಲ್ಲಮೆಲ್ಲನೆ ನಡೆದು ನನ್ನ ಪ್ರಭುವಿನ ಸೀಮೆಯಾಗಿರುವ ಸೇಯೀರಿಗೆ ಬರುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದ್ದರಿಂದ ನೀನು ಮುಂದಾಗಿ ಹೋಗು. ನಾನು ನಿನ್ನನ್ನು ನಿಧಾನವಾಗಿ ಹಿಂಬಾಲಿಸುವೆನು. ದನಕುರಿಗಳು ಮತ್ತು ಇತರ ಪಶುಗಳು ಸುರಕ್ಷಿತವಾಗಿರುವಂತೆಯೂ ನನ್ನ ಮಕ್ಕಳು ತುಂಬ ಆಯಾಸಗೊಳ್ಳದಂತೆಯೂ ನಾನು ಸಾಕಷ್ಟು ನಿಧಾನವಾಗಿ ಬಂದು ನಿನ್ನನ್ನು ಸೇಯೀರ್‌ನಲ್ಲಿ ಭೇಟಿಯಾಗುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದ್ದರಿಂದ ನನ್ನ ಒಡೆಯನೇ, ನೀನು ನಿನ್ನ ಸೇವಕನಿಗಿಂತಲೂ ಮುಂಚೆ ಹೋಗಬಹುದು. ನಾನು ನನ್ನ ಒಡೆಯನ ಬಳಿಗೆ ಸೇಯೀರಿಗೆ ಬರುವವರೆಗೆ, ನನ್ನ ಮುಂದಿರುವ ಮಂದೆಗಳ ನಡಿಗೆಗೂ, ಮಕ್ಕಳ ನಡಿಗೆಗೂ ತಕ್ಕ ಹಾಗೆ ಮೆಲ್ಲಗೆ ನಡೆದು ಬರುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 33:14
13 ತಿಳಿವುಗಳ ಹೋಲಿಕೆ  

ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗಪ್ಪಿಕೊಳ್ಳುವನು. ಹಾಲು ಕುಡಿಸುವ ಕುರಿಮರಿಗಳನ್ನು ಮೆಲ್ಲನೆ ನಡೆಸುವನು” ಎಂದು ಸಾರು.


ಬಳಿಕ ಯಾಕೋಬನು ತನಗಿಂತ ಮೊದಲು ಎದೋಮ್ಯರ ಪ್ರದೇಶವಾಗಿರುವ ಸೇಯೀರ್ ಸೀಮೆಗೆ ತನ್ನ ಅಣ್ಣನಾದ ಏಸಾವನ ಬಳಿಗೆ ಸೇವಕರನ್ನು ಕಳುಹಿಸಿದನು.


ದೃಢವಾದ ನಂಬಿಕೆಯುಳ್ಳವರಾದ ನಾವು ಬಲಹೀನರಾದವರ ಭಾರಗಳನ್ನು ಹೊರುವುದಲ್ಲದೆ ಅದರಲ್ಲಿ ನಮ್ಮನ್ನು ನಾವೇ ಹೊಗಳಿಕೊಳ್ಳಬಾರದು.


ಆತನು ಈ ರೀತಿಯ ಅನೇಕ ಸಾಮ್ಯಗಳಿಂದ ಜನರಿಗೆ ಅರ್ಥವಾಗುವ ಹಾಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ಯೆಹೂದ ವಂಶವು ಎಲ್ಲಾ ಜನಾಂಗಗಳ ಹಾಗೆಯೇ ಇದೆ, ವಿಶೇಷವೇನು? ಎಂದು ಮೋವಾಬೂ ಮತ್ತು ಸೇಯೀರೂ ಅಂದುಕೊಂಡಿದೆ.


ಈ ಅಮ್ಮೋನಿಯರನ್ನೂ, ಮೋವಾಬ್ಯರನ್ನೂ ಸೇಯೀರ್ ಪರ್ವತ ಪ್ರದೇಶದವರನ್ನೂ ನೋಡು, ಇಸ್ರಾಯೇಲರು ಐಗುಪ್ತ ದೇಶದಿಂದ ಬರುತ್ತಿದ್ದಾಗ, ಇವರ ದೇಶದಲ್ಲಿ ನುಗ್ಗಬಾರದೆಂದು ನಿನ್ನಿಂದ ಅಪ್ಪಣೆಹೊಂದಿ, ಇವರನ್ನು ಸಂಹರಿಸದೆ ಬೇರೆ ಮಾರ್ಗವಾಗಿ ಹೋದರಲ್ಲಾ.


“ಯೆಹೋವನೇ, ನೀನು ಹೊರಟು ಎದೋಮ್ಯರ ಪ್ರಾಂತ್ಯವಾದ ಸೇಯೀರಿನ ಮಾರ್ಗವಾಗಿ ಪಯಣಮಾಡುತ್ತಾ ಬರುವಾಗ ಭೂಲೋಕವು ಕಂಪಿಸಿತು, ಆಕಾಶವು ನಡುಗಿತು; ಮೇಘಮಂಡಲವು ಮಳೆಗರೆಯಿತು.


ಆಗ ಯೆಹೋವನು ನನಗೆ ಆಜ್ಞಾಪಿಸಿದಂತೆ ನಾವು ಹಿಂದಿರುಗಿ ಅರಣ್ಯಕ್ಕೆ ಹೊರಟು ಕೆಂಪು ಸಮುದ್ರದ ಮಾರ್ಗದಲ್ಲಿ ನಡೆದು ಅನೇಕ ದಿನಗಳು ಸೇಯೀರ್ ಬೆಟ್ಟದ ಸೀಮೆಯನ್ನು ಸುತ್ತುತ್ತಿದ್ದೆವು.


ನಿಮಗೆ ಹಾಲು ಕುಡಿಸಿದೆನು ಆಹಾರ ಕೊಡಲಿಲ್ಲ. ಆಹಾರವನ್ನು ತಿನ್ನುವುದಕ್ಕೆ ನೀವು ಇನ್ನೂ ಸಮರ್ಥರಾಗಿರಲಿಲ್ಲ. ಈಗಲೂ ನೀವು ಸಮರ್ಥರಾಗಿಲ್ಲ.


ಅದಕ್ಕೆ ಯಾಕೋಬನು, “ನನ್ನ ಮಕ್ಕಳು ಎಳೇ ಪ್ರಾಯದವರು ಇದಲ್ಲದೆ ಎಳೆಯ ದನಕುರಿಗಳು ನನ್ನ ಬಳಿಯಲ್ಲಿರುವುದು ಪ್ರಭುವಿಗೆ ತಿಳಿದಿದೆ. ಒಂದು ದಿನ ಹೆಚ್ಚಾಗಿ ಅವುಗಳನ್ನು ನಡಿಸಿದರೆ ಆಡುಕುರಿಗಳ ಹಿಂಡುಗಳೆಲ್ಲವೂ ಸತ್ತು ಹೋದಾವು.


ಕಳುಹಿಸುವಾಗ ಅವರಿಗೆ “ನೀವು ನನ್ನ ಪ್ರಭುವಾದ ಏಸಾವನ ಬಳಿಗೆ ಹೋಗಿ ಅವನಿಗೆ, ‘ನಿನ್ನ ಸೇವಕನಾದ ಯಾಕೋಬನು ಇಷ್ಟು ದಿನ ಲಾಬಾನನ ಬಳಿಯಲ್ಲಿ ವಾಸವಾಗಿದ್ದನು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು