ಆದಿಕಾಂಡ 33:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯಾಕೋಬನು ಪ್ರಯಾಣಮಾಡಿ ಸುಕ್ಕೋತಿಗೆ ಬಂದನು. ಅಲ್ಲಿ ತನಗೋಸ್ಕರ ಮನೆಯನ್ನೂ ದನಗಳಿಗೆ ಆಶ್ರಯವನ್ನೂ ಮಾಡಿಸಿದನು. ಆದುದರಿಂದ ಆ ಸ್ಥಳಕ್ಕೆ “ಸುಕ್ಕೋತ್” ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಇತ್ತ ಯಕೋಬನು ಪ್ರಯಾಣ ಬೆಳೆಸುತ್ತಾ ಸುಕ್ಕೋತಿಗೆ ಬಂದನು. ಅಲ್ಲಿ ತನಗೋಸ್ಕರ ಮನೆಯನ್ನೂ ಮಂದೆಗಳಿಗೋಸ್ಕರ ಕೊಟ್ಟಿಗೆಗಳನ್ನೂ ಕಟ್ಟಿಸಿದನು. ಈ ಕಾರಣ ಆ ಸ್ಥಳಕ್ಕೆ ‘ಸುಕ್ಕೋತ್’ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಯಾಕೋಬನು ಪ್ರಯಾಣ ಮಾಡಿ ಸುಕ್ಕೋತಿಗೆ ಬಂದನು. ಅಲ್ಲಿ ತನಗೋಸ್ಕರ ಮನೆಯನ್ನೂ ದನಗಳಿಗೆ ಚಪ್ಪರಗಳನ್ನೂ ಮಾಡಿಸಿದನು; ಆದದರಿಂದ ಆ ಸ್ಥಳಕ್ಕೆ ಸುಕ್ಕೋತ್ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆದರೆ ಯಾಕೋಬನು ಸುಕ್ಕೋತಿಗೆ ಹೋದನು. ಆ ಸ್ಥಳದಲ್ಲಿ ಅವನು ತನಗಾಗಿ ಒಂದು ಮನೆಯನ್ನೂ ತನ್ನ ದನಕುರಿಗಳಿಗಾಗಿ ಚಿಕ್ಕ ಕೊಟ್ಟಿಗೆಗಳನ್ನೂ ಕಟ್ಟಿಸಿದನು. ಆದ್ದರಿಂದ ಆ ಸ್ಥಳಕ್ಕೆ “ಸುಕ್ಕೋತ್” ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಯಾಕೋಬನು ಪ್ರಯಾಣಮಾಡಿ, ಸುಕ್ಕೋತಿಗೆ ಹೋಗಿ, ಮನೆಯನ್ನು ಕಟ್ಟಿಸಿಕೊಂಡನು. ಇದಲ್ಲದೆ ತನ್ನ ಪಶುಗಳಿಗೆ ಹಟ್ಟಿಗಳನ್ನು ಮಾಡಿಸಿದನು. ಆದ್ದರಿಂದ ಆ ಸ್ಥಳಕ್ಕೆ ಸುಕ್ಕೋತ್ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿ |