Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 33:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಏಸಾವನು ಅವನನ್ನು ಎದುರುಗೊಳ್ಳುವುದಕ್ಕೆ ಓಡಿ ಬಂದು ಅವನ ಕೊರಳನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವರಿಬ್ಬರೂ ಅತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆದರೆ ಏಸಾವನು ಅವನನ್ನು ಎದುರುಗೊಳ್ಳಲು ಓಡಿ ಬಂದು ಅವನ ಕೊರಳನ್ನು ಅಪ್ಪಿಕೊಂಡು ಮುದ್ದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆದರೆ ಏಸಾವನು ಅವನನ್ನು ಎದುರುಗೊಳ್ಳುವದಕ್ಕೆ ಓಡಿ ಬಂದು ಅವನ ಕೊರಳನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವರಿಬ್ಬರೂ ಕಣ್ಣೀರು ಸುರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಏಸಾವನು ಯಾಕೋಬನನ್ನು ಕಂಡಾಗ, ಓಡಿಬಂದು ತನ್ನ ಕೈಗಳಿಂದ ತಬ್ಬಿಕೊಂಡು ಅವನ ಕೊರಳಿನ ಮೇಲೆ ಮುದ್ದಿಟ್ಟನು; ಅವರಿಬ್ಬರೂ ಕಣ್ಣೀರು ಸುರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಏಸಾವನು ಅವನನ್ನು ಎದುರುಗೊಳ್ಳುವುದಕ್ಕೆ ಓಡಿಬಂದು, ಅವನನ್ನು ಅಪ್ಪಿಕೊಂಡು, ಅವನ ಕೊರಳಿನ ಮೇಲೆ ಬಿದ್ದು, ಅವನಿಗೆ ಮುದ್ದಿಟ್ಟನು. ಅವರಿಬ್ಬರೂ ಅತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 33:4
18 ತಿಳಿವುಗಳ ಹೋಲಿಕೆ  

ನಾನು ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳಲು, ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು.


ಎದ್ದು ತನ್ನ ತಂದೆಯ ಕಡೆಗೆ ಬಂದನು. “ಅವನು ಇನ್ನೂ ದೂರದಲ್ಲಿರುವಾಗ ಅವನ ತಂದೆಯು ಅವನನ್ನು ಕಂಡು, ಕನಿಕರಪಟ್ಟು, ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು, ಅವನಿಗೆ ಬಹಳವಾಗಿ ಮುದ್ದಿಟ್ಟನು.


ಅವನು ಯಾಕೋಬನಿಗೆ, “ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಲ್ಪಡುವುದಿಲ್ಲ; ನೀನು ದೇವರ ಸಂಗಡಲೂ, ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದುದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರಾಗುವುದು” ಎಂದು ಹೇಳಿದನು.


ಬಳಿಕ ಪೌಲನು; “ನೀವು ನನ್ನ ಮುಖವನ್ನು ಇನ್ನೆಂದೂ ಕಾಣಲಾರಿರಿ” ಅನ್ನಲು, ಅವರೆಲ್ಲರು ವ್ಯಥೆಪಟ್ಟು, ದುಃಖದಿಂದ ಅಳುತ್ತಾ, ಅವನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು.


ಯೆಹೋವನು ಒಬ್ಬನ ನಡತೆಗೆ ಮೆಚ್ಚಿದರೆ, ಅವನ ಶತ್ರುಗಳನ್ನೂ ಮಿತ್ರರನ್ನಾಗಿ ಮಾಡುವನು.


ಯೋಸೇಫನು ತನ್ನ ರಥವನ್ನು ಸಿದ್ಧಪಡಿಸಿಕೊಂಡು ತನ್ನ ತಂದೆಯಾದ ಇಸ್ರಾಯೇಲನನ್ನು ಎದುರುಗೊಳ್ಳುವುದಕ್ಕೋಸ್ಕರ ಗೋಷೆನಿಗೆ ಹೋಗಿ ಅವನನ್ನು ಸಂಧಿಸಿ, ತಂದೆಯನ್ನು ಬಹಳ ಹೊತ್ತಿನ ವರೆಗೆ ಅಪ್ಪಿಕೊಂಡು ಅತ್ತನು.


ಅವನು ಗಟ್ಟಿಯಾಗಿ ಅತ್ತದ್ದರಿಂದ ಐಗುಪ್ತರಿಗೂ, ಫರೋಹನ ಮನೆಯವರಿಗೂ ಆ ಶಬ್ದವು ಕೇಳಿಸಿತು.


ಅವರು ದೂರದಿಂದ ಕಣ್ಣೆತ್ತಿ ನೋಡಿ ಯೋಬನ ಗುರುತನ್ನು ಹಿಡಿಯಲಾರದೆ ಹೋದ ಕಾರಣ ಗಟ್ಟಿಯಾಗಿ ಅತ್ತು ತಮ್ಮ ತಮ್ಮ ಮೇಲಂಗಿಗಳನ್ನು ಹರಿದುಕೊಂಡು, ಮಣ್ಣನ್ನು ಮೇಲಕ್ಕೆ ತೂರಿ ತಮ್ಮ ತಲೆಯ ಮೇಲೆ ಸುರಿದುಕೊಂಡರು.


ಯೆಹೋವನೇ, ಕೃಪೆಮಾಡು; ನಿನ್ನ ಸೇವಕನಾದ ನನ್ನ ಪ್ರಾರ್ಥನೆಗೂ, ನಿನ್ನ ನಾಮ ಸ್ಮರಣೆಯಲ್ಲಿ ಆನಂದಿಸುವ ನಿನ್ನ ಭಕ್ತರ ಪ್ರಾರ್ಥನೆಗೂ ಕಿವಿಗೊಡು. ನಿನ್ನ ಸೇವಕನು ಈಹೊತ್ತು ಈ ಮನುಷ್ಯನ ದಯೆಗೆ ಪಾತ್ರನಾಗಿ ಸಫಲನಾಗುವಂತೆ ಅನುಗ್ರಹಿಸಬೇಕು” ಎಂದು ಪ್ರಾರ್ಥಿಸಿದೆನು.


ಯೋಸೇಫನು ಅವಸರವಾಗಿ ಎದ್ದು ತನ್ನ ಕೋಣೆಯೊಳಗೆ ಹೋದನು. ಏಕೆಂದರೆ ತನ್ನ ಕರಳು ತಮ್ಮನ ಮೇಲೆ ಮರುಗಿದ್ದರಿಂದ ಅವನು ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು.


ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ಇರುವ ನೀರಿನ ಕಾಲುವೆಗಳಂತೆ ಇವೆ, ಆತನು ತನಗೆ ಬೇಕಾದ ಕಡೆಗೆ ಅದನ್ನು ತಿರುಗಿಸುತ್ತಾನೆ.


ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರಗಳಲ್ಲಿ ಭಾಗಗಳನ್ನು ಕಳುಹಿಸಿದಾಗ, ಬೆನ್ಯಾಮೀನನಿಗೆ ಬಂದ ಭಾಗವು ಮಿಕ್ಕಾದವರ ಭಾಗಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಪಾನಮಾಡಿ ಅವನ ಸಂಗಡ ಸಂತೋಷದಿಂದ ಇದ್ದರು.


ಯಾಕೋಬನು ರಾಹೇಲಳಿಗೆ ಮುದ್ದಿಟ್ಟು ಜೋರಾಗಿ ಅತ್ತು ಆಕೆಗೆ,


ಲಾಬಾನನು ತನ್ನ ಸಹೋದರಿಯ ಮಗನಾದ ಯಾಕೋಬನು ಬಂದಿರುವ ವರ್ತಮಾನವನ್ನು ಕೇಳಿದಾಗ ಅವನನ್ನು ಎದುರುಗೊಳ್ಳುವುದಕ್ಕೆ ಓಡಿಬಂದು ಅಪ್ಪಿಕೊಂಡು ಮುದ್ದಿಟ್ಟು ತನ್ನ ಮನೆಗೆ ಕರೆದುಕೊಂಡು ಬಂದನು.


ನನ್ನ ಅಣ್ಣನಾದ ಏಸಾವನು ಬಂದು ನನ್ನನ್ನೂ, ನನ್ನ ಮಕ್ಕಳನ್ನೂ, ಅವರ ತಾಯಿಯರನ್ನೂ ಕೊಂದುಹಾಕುವನೋ ಎಂದು ನನಗೆ ಭಯವಿದೆ. ಅವನ ಕೈಗೆ ಸಿಕ್ಕದಂತೆ ನಮ್ಮನ್ನು ಕಾಪಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ,


ಯೋವಾಬನು ಹೋಗಿ ಇದನ್ನು ಅರಸನಿಗೆ ತಿಳಿಸಿದಾಗ ಅರಸನು ಅಬ್ಷಾಲೋಮನನ್ನು ಕರೇಕಳುಹಿಸಿದನು. ಅವನು ಅರಸನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರ ಮಾಡಿದನು. ಅರಸನು ಅವನನ್ನು ಮುದ್ದಿಟ್ಟನು.


ಹುಡುಗನು ಹೋಗುತ್ತಲೇ ದಾವೀದನು ಕಲ್ಲುಕುಪ್ಪೆಯ ಬಳಿಯಿಂದ ಎದ್ದುಬಂದು ಮೂರು ಸಾರಿ ಸಾಷ್ಟಾಂಗವಾಗಿ ಯೋನಾತಾನನನ್ನು ವಂದಿಸಿದನು. ಅವರು ಒಬ್ಬರಿಗೊಬ್ಬರು ಮುದ್ದಿಟ್ಟುಕೊಂಡು ಅತ್ತರು. ದಾವೀದನು ಬಹಳವಾಗಿ ಅತ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು