Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 34:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಬಳಿಕ ಶೆಕೆಮನು ಆ ಹುಡುಗಿಯ ತಂದೆಗೂ ಅಣ್ಣಂದಿರಿಗೂ, “ನಿಮ್ಮ ದಯೆ ನನ್ನ ಮೇಲೆ ಇರಲಿ, ನೀವು ಹೇಳುವಷ್ಟು ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಬಳಿಕ ಶೆಕೆಮನು ಆ ಹುಡುಗಿಯ ತಂದೆ ಮತ್ತು ಸಹೋದರರಿಗೆ , “ನನ್ನ ಮೇಲೆ ನಿಮಗೆ ಕೃಪೆಯಿರಲಿ; ನೀವು ಹೇಳುವಷ್ಟನ್ನು ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಶೆಕೆಮನು ಆ ಹುಡುಗಿಯ ತಂದೆಗೂ ಅಣ್ಣಂದಿರಿಗೂ - ನಿಮ್ಮ ದಯೆ ನನ್ನ ಮೇಲೆ ಇರಲಿ; ನೀವು ಹೇಳುವಷ್ಟು ಕೊಡುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಶೆಕೆಮನು ಸಹ ಯಾಕೋಬನೊಡನೆ ಮತ್ತು ದೀನಳ ಅಣ್ಣಂದಿರೊಡನೆ ಮಾತಾಡಿದನು. ಶೆಕೆಮನು ಅವರಿಗೆ, “ದಯವಿಟ್ಟು ನನ್ನನ್ನು ಸ್ವೀಕಾರಮಾಡಿ ನೀವು ಏನೇ ಹೇಳಿದರೂ ನಾನು ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಬಳಿಕ ಶೆಕೆಮನು ಆಕೆಯ ತಂದೆಗೂ, ಆಕೆಯ ಸಹೋದರರಿಗೂ, “ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ, ನೀವು ಕೇಳಿದ್ದನ್ನು ನಾನು ನಿಮಗೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 34:11
5 ತಿಳಿವುಗಳ ಹೋಲಿಕೆ  

ಏಸಾವನು, “ನನ್ನ ಆಳುಗಳಲ್ಲಿ ಕೆಲವರನ್ನು ನಿನ್ನ ಸಂಗಡ ಬಿಟ್ಟು ಹೋಗುತ್ತೇನೆ” ಎನ್ನಲು ಯಾಕೋಬನು, “ಅದರ ಅಗತ್ಯವೇನು? ಒಡೆಯನೇ, ತಮ್ಮ ದಯೆ ನನ್ನ ಮೇಲಿದ್ದರೆ ಸಾಕು” ಎಂದು ಹೇಳಿದನು.


“ಕರ್ತನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರೆತಿದ್ದರೆ; ದಾಸನ ಗುಡಾರಕ್ಕೆ ದಯಮಾಡದೆ ಮುಂದೆ ಹೋಗಬೇಡಿರಿ. ನೀವು ದಾಸನಿರುವ ಸ್ಥಳದ ಹತ್ತಿರ ಹಾದು ಹೋಗುತ್ತೀರಲ್ಲಾ.


ದೇಶವೆಲ್ಲಾ ನಿಮ್ಮ ಮುಂದೆ ಇದೆ ಅಲ್ಲಿ ವಾಸಮಾಡಿಕೊಂಡು ವ್ಯಾಪಾರ ಮಾಡಿ, ಆಸ್ತಿಯನ್ನು ಸಂಪಾದಿಸಿಕೊಳ್ಳಬಹುದು” ಎಂದು ಹೇಳಿದನು.


ನೀವು ಹೇಳುವ ಮೇರೆಗೆ ಎಷ್ಟಾದರೂ ತೆರವನ್ನೂ ಕಾಣಿಕೆಯನ್ನೂ ಹೆಣ್ಣಿಗಾಗಿ ಕೊಡುತ್ತೇನೆ. ಆದರೆ ಆ ಹುಡುಗಿಯನ್ನು ನನಗೆ ಹೆಂಡತಿಯಾಗಿ ಕೊಡಿರಿ” ಎಂದನು.


ತರುವಾಯ ಆ ಸೇವಕರು ಯಾಕೋಬನ ಬಳಿಗೆ ಹಿಂತಿರುಗಿ ಬಂದು, “ನಾವು ನಿನ್ನ ಅಣ್ಣನಾದ ಏಸಾವನ ಹತ್ತಿರಕ್ಕೆ ಹೋಗಿ ಬಂದಿದ್ದೇವೆ, ಅವನು ನಾನೂರು ಜನರ ಸಮೇತ ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಾನೆ” ಎಂದು ಹೇಳಿದಾಗ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು