ಆದಿಕಾಂಡ 34:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆ ಯೌವನಸ್ಥನು ಯಾಕೋಬನ ಮಗಳನ್ನು ಮೆಚ್ಚಿಕೊಂಡಿದ್ದರಿಂದ ಅವರು ಹೇಳಿದಂತೆ ಮಾಡುವುದಕ್ಕೆ ತಡಮಾಡಲಿಲ್ಲ. ಅವನು ತನ್ನ ತಂದೆಯ ಮನೆಯವರೆಲ್ಲರಿಗಿಂತ ಗೌರವವುಳ್ಳವನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆ ಯುವಕನು ಯಕೋಬನ ಮಗಳಲ್ಲಿ ಅನುರಕ್ತನಾಗಿದ್ದುದರಿಂದ ಅವರು ಹೇಳಿದಂತೆ ಮಾಡಲು ಹಿಂಜರಿಯಲಿಲ್ಲ; ಅಪ್ಪನ ಮನೆಗೆ ಅವನೇ ಮುಖ್ಯಸ್ಥನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆ ಯೌವನಸ್ಥನು ಯಾಕೋಬನ ಮಗಳಲ್ಲಿ ಅನುರಕ್ತನಾಗಿದ್ದದರಿಂದ ಅವರು ಹೇಳಿದಂತೆ ಮಾಡುವದಕ್ಕೆ ತಡೆಮಾಡಲಿಲ್ಲ. ಅವನೇ ತನ್ನ ತಂದೆಯ ಮನೆಯವರೆಲ್ಲರಲ್ಲಿ ಘನವಂತನಾಗಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ದೀನಳ ಅಣ್ಣಂದಿರು ಹೇಳಿದ್ದನ್ನು ಮಾಡಲು ಶೆಕೆಮನು ಸಂತೋಷದಿಂದ ಒಪ್ಪಿಕೊಂಡನು. ಶೆಕೆಮನಿಗೆ ಅವರ ಕುಟುಂಬದಲ್ಲಿ ತುಂಬ ಗೌರವವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆ ಯೌವನಸ್ಥನು ಯಾಕೋಬನ ಮಗಳನ್ನು ಮೆಚ್ಚಿದ್ದರಿಂದ, ಆ ಕಾರ್ಯವನ್ನು ಮಾಡುವುದಕ್ಕೆ ಹಿಂಜರಿಯಲಿಲ್ಲ. ಅವನು ತನ್ನ ತಂದೆಯ ಮನೆಯವರೆಲ್ಲರಿಗಿಂತ ಗೌರವವುಳ್ಳವನಾಗಿದ್ದನು. ಅಧ್ಯಾಯವನ್ನು ನೋಡಿ |