Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 34:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆಗ ಪಟ್ಟಣದ ದ್ವಾರದಲ್ಲಿ ಹೋಗುವವರೆಲ್ಲಾ, ಹಮೋರನ ಮಗನಾದ ಶೆಕೆಮನೂ ಹೇಳಿದ ಮಾತಿಗೆ ಊರಿನವರೆಲ್ಲರೂ ಸಮ್ಮತಿಸಿದ್ದರಿಂದ ಅವರಲ್ಲಿದ್ದ ಪುರುಷರೆಲ್ಲರೂ ಸುನ್ನತಿಮಾಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಹಮೋರನ ಮತ್ತು ಅವನ ಮಗ ಶೆಕೆಮನ ಈ ಮಾತಿಗೆ ಊರಿನವರೆಲ್ಲರು ಸಮ್ಮತಿಸಿದರು. ಅಂತೆಯೇ ಅವರಲ್ಲಿದ್ದ ಗಂಡಸರೆಲ್ಲರು ಸುನ್ನತಿಮಾಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಹಮೋರನೂ ಅವನ ಮಗನಾದ ಶೆಕೆಮನೂ ಹೇಳಿದ ಮಾತಿಗೆ ಊರಿನವರೆಲ್ಲರೂ ಸಮ್ಮತಿಪಟ್ಟದ್ದರಿಂದ ಅವರಲ್ಲಿದ್ದ ಪುರುಷರೆಲ್ಲರೂ ಸುನ್ನತಿಮಾಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಸಭಾಸ್ಥಳದಲ್ಲಿದ್ದ ಗಂಡಸರೆಲ್ಲರೂ ಹಮೋರ ಮತ್ತು ಶೆಕೆಮರ ಮಾತಿಗೆ ಒಪ್ಪಿಕೊಂಡರು. ಬಳಿಕ ಎಲ್ಲಾ ಗಂಡಸರು ಸುನ್ನತಿ ಮಾಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಗ ಪಟ್ಟಣದ ದ್ವಾರದಲ್ಲಿ ಹೋಗುವ ಗಂಡಸರೆಲ್ಲರೂ ಹಮೋರನೂ, ಅವನ ಮಗ ಶೆಕೆಮನೂ ಹೇಳಿದ ಮಾತುಗಳನ್ನು ಕೇಳಿ, ಒಪ್ಪಿಕೊಂಡರು. ಹೀಗೆ ಪಟ್ಟಣದಲ್ಲಿದ್ದ ಎಲ್ಲಾ ಗಂಡಸರು ಸುನ್ನತಿ ಮಾಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 34:24
8 ತಿಳಿವುಗಳ ಹೋಲಿಕೆ  

ಎಫ್ರೋನನು ಅಲ್ಲಿ ಹಿತ್ತಿಯರ ನಡುವೆ ಕುಳಿತಿದ್ದನು. ಹೀಗಿರಲಾಗಿ ಹಿತ್ತಿಯನಾದ ಎಫ್ರೋನನು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಎದುರಿನಲ್ಲಿ ಅಬ್ರಹಾಮನಿಗೆ,


ಸುನ್ನತಿ ಇರುವುದೋ ಸುನ್ನತಿ ಇಲ್ಲದಿರುವುದೋ ಪ್ರಾಮುಖ್ಯವಲ್ಲ. ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವುದೇ ಮುಖ್ಯವಾಗಿದೆ.


“ಪವಿತ್ರವಾದುದನ್ನು ನಾಯಿಗಳಿಗೆ ನೀಡಬೇಡಿರಿ; ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿರಿ. ಬಹುಶಃ ಅವು ತಮ್ಮ ಕಾಲಿನಿಂದ ಅವುಗಳನ್ನು ತುಳಿದು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.


ಅಬ್ರಹಾಮನ ಸ್ವಂತ ಭೂಮಿಯೆಂದು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಮುಂದೆ ತೀರ್ಮಾನವಾಯಿತು.


ಅದೇ ದಿನದಲ್ಲಿ ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಎಲ್ಲಾ ಗಂಡಸರಿಗೂ, ಅಂದರೆ ಮನೆಯಲ್ಲಿ ಹುಟ್ಟಿದವರಿಗೆ ಮಾತ್ರವಲ್ಲದೆ, ತಾನು ಕ್ರಯಕ್ಕೆ ತೆಗೆದುಕೊಂಡವರಿಗೂ ದೇವರ ಅಪ್ಪಣೆಯಂತೆ ಸುನ್ನತಿಮಾಡಿಸಿದನು.


ಅವರ ಕುರಿದನಗಳೂ, ಅವರ ಆಸ್ತಿಯೂ ಅವರ ಎಲ್ಲಾ ಪಶುಪ್ರಾಣಿಗಳೂ ನಮ್ಮದಾಗುವುದಲ್ಲವೇ? ಆದುದರಿಂದ ಅವರು ನಮ್ಮಲ್ಲಿ ವಾಸಮಾಡುವ ಹಾಗೆ ನಾವು ಅವರ ಮಾತಿಗೆ ಒಪ್ಪಿಕೊಳ್ಳೋಣ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು