Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 34:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಮೂರನೆಯ ದಿನದಲ್ಲಿ ಅವರು ಗಾಯದಿಂದ ಬಹು ಬಾಧೆಪಡುತ್ತಿರುವಾಗ ಯಾಕೋಬನ ಮಕ್ಕಳೂ, ದೀನಳ ಅಣ್ಣಂದಿರಾದ ಸಿಮೆಯೋನ್, ಲೇವಿ ಎಂಬ ಇಬ್ಬರು ಕೈಯಲ್ಲಿ ಕತ್ತಿಯನ್ನು ತೆಗೆದುಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು ಗಂಡಸರನ್ನೆಲ್ಲಾ ಕೊಂದು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಮೂರನೆಯ ದಿನ ಆ ಗಂಡಸರೆಲ್ಲರು ಗಾಯದಿಂದ ಇನ್ನು ಬಹಳ ಬಾಧೆಪಡುತ್ತಿದ್ದರು. ಆಗ, ಯಕೋಬನ ಮಕ್ಕಳಲ್ಲಿ ದೀನಳ ಸಹೋದರರಾದ ಸಿಮೆಯೋನ್ ಮತ್ತು ಲೇವಿ ಎಂಬ ಇಬ್ಬರು ಕೈಯಲ್ಲಿ ಕತ್ತಿಹಿಡಿದು ನಿಶ್ಚಿಂತೆ ಇಂದಿದ್ದ ಆ ಊರಿನವರ ಮೇಲೆ ಬಿದ್ದರು. ದಯೆದಾಕ್ಷಿಣ್ಯವಿಲ್ಲದೆ ಗಂಡಸರೆಲ್ಲರನ್ನು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಮೂರನೆಯ ದಿನದಲ್ಲಿ ಅವರು ಗಾಯದಿಂದ ಬಹು ಬಾಧೆಪಡುತ್ತಿರುವಾಗ ಯಾಕೋಬನ ಮಕ್ಕಳಲ್ಲಿ ದೀನಳ ಅಣ್ಣಂದಿರಾದ ಸಿಮೆಯೋನ್, ಲೇವಿ ಎಂಬ ಇಬ್ಬರು ಕೈಯಲ್ಲಿ ಕತ್ತಿಹಿಡುಕೊಂಡು ನಿರ್ಭಯವಾಗಿದ್ದ ಆ ಊರಿನವರ ಮೇಲೆ ಬಿದ್ದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಮೂರು ದಿನಗದರೂ ಸುನ್ನತಿ ಮಾಡಿಸಿಕೊಂಡಿದ್ದ ಗಂಡಸರು ಇನ್ನೂ ಗಾಯದ ನೋವಿನಲ್ಲಿದ್ದರು. ಈ ಸಮಯದಲ್ಲಿ ಗಂಡಸರು ಬಲಹೀನರಾಗಿರುತ್ತಾರೆ ಎಂಬುದು ಯಾಕೋಬನ ಇಬ್ಬರು ಗಂಡುಮಕ್ಕಳಾದ ಸಿಮೆಯೋನ್ ಮತ್ತು ಲೇವಿಗೆ ತಿಳಿದಿತ್ತು. ಆದ್ದರಿಂದ ಅವರು ಪಟ್ಟಣಕ್ಕೆ ಹೋಗಿ ಅಲ್ಲಿದ್ದ ಎಲ್ಲಾ ಗಂಡಸರನ್ನು ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಮೂರನೆಯ ದಿನದಲ್ಲಿ ಅವರಿಗೆ ನೋವುಂಟಾದಾಗ, ಯಾಕೋಬನ ಮಕ್ಕಳಲ್ಲಿ ಇಬ್ಬರು ಅಂದರೆ, ದೀನಳ ಸಹೋದರರಾದ ಸಿಮೆಯೋನನೂ, ಲೇವಿಯೂ ತಮ್ಮ ತಮ್ಮ ಖಡ್ಗಗಳನ್ನು ತೆಗೆದುಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು, ಗಂಡಸರನ್ನೆಲ್ಲಾ ಕೊಂದುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 34:25
10 ತಿಳಿವುಗಳ ಹೋಲಿಕೆ  

ಕೇಡುಮಾಡದಿದ್ದರೆ ಅವರಿಗೆ ನಿದ್ರೆಬಾರದು; ಯಾರನ್ನಾದರೂ ಎಡವಿಬೀಳಿಸದಿದ್ದರೆ ಅವರ ನಿದ್ರೆಗೆ ಭಂಗವಾಗುವುದು.


ಆದರೆ ಹಿಜ್ಕೀಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದನು. ಆದುದರಿಂದ ಯೆಹೂದದ ಮೇಲೆಯೂ ಯೆರೂಸಲೇಮಿನವರ ಮೇಲೆಯೂ ದೇವರ ಕೋಪವುಂಟಾಯಿತು.


ಸುನ್ನತಿಯಾದ ಮೇಲೆ ಆ ಜನರು ವಾಸಿಯಾಗುವ ತನಕ ತಮ್ಮ ತಮ್ಮ ಪಾಳೆಯಗಳಲ್ಲಿಯೇ ಇದ್ದರು.


ಐಗುಪ್ತದಿಂದ ಬಂದ ಇಸ್ರಾಯೇಲ್ಯರು ಯೆಹೋವನ ಮಾತನ್ನು ಕೇಳದೆ ಹೋಗಿದ್ದರಿಂದ ಅವರು ತಮ್ಮ ಭಟರೆಲ್ಲರು ಸಂಹಾರವಾಗುವ ತನಕ ನಲವತ್ತು ವರ್ಷ ಅರಣ್ಯದಲ್ಲೇ ಅಲೆಯುತ್ತಿರಬೇಕಾಯಿತು. ಯೆಹೋವನು ತಾನು ಆ ಜನರ ಪೂರ್ವಿಕರಿಗೆ ವಾಗ್ದಾನ ಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಆಣೆಯಿಟ್ಟನು.


ಆದಕಾರಣ ನೀವು ಈ ಗುಂಪಿನಲ್ಲಿರುವ ಎಲ್ಲಾ ಗಂಡು ಮಕ್ಕಳನ್ನೂ, ಪುರುಷ ಸಂಗಮಾಡಿದ ಎಲ್ಲಾ ಹೆಂಗಸರನ್ನೂ ಕೊಲ್ಲಬೇಕು.


ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಅವರು ಮಿದ್ಯಾನ್ಯರೊಡನೆ ಯುದ್ಧಮಾಡಿ ಗಂಡಸರೆಲ್ಲರನ್ನೂ ಸಂಹಾರಮಾಡಿದರು.


ಊರಿನವರ ಮೇಲೆ ಬಿದ್ದು ಹಮೋರ ಮತ್ತು ಅವನ ಮಗನಾದ ಶೆಕೆಮ್ ಸಹಿತವಾಗಿ ಪುರುಷರೆಲ್ಲರನ್ನೂ ದಾಕ್ಷಿಣ್ಯವಿಲ್ಲದೆ ಕತ್ತಿಯಿಂದ ಕೊಂದು ಶೆಕೆಮನ ಮನೆಯಿಂದ ದೀನಳನ್ನು ಕರೆದುಕೊಂಡು ಹೊರಟುಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು