ಆದಿಕಾಂಡ 34:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ, “ನೀವು ಈ ದೇಶದ ನಿವಾಸಿಗಳಾದ ಕಾನಾನ್ಯರಲ್ಲಿಯೂ ಪೆರಿಜೀಯರಲ್ಲಿಯೂ ನನ್ನ ಹೆಸರನ್ನು ಕೆಡಿಸಿದ್ದರಿಂದ ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಸ್ವಲ್ಪವೇ. ಈ ದೇಶದವರು ಒಟ್ಟಾಗಿ ನನ್ನ ವಿರುದ್ಧ ಯುದ್ಧಕ್ಕೆ ಬಂದು ನನ್ನನ್ನು ಹೊಡೆದರೆ ನಾನೂ ನನ್ನ ಮನೆಯವರೆಲ್ಲರೂ ನಾಶವಾಗುವೆವು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಆಗ ಯಕೋಬನು, ಸಿಮೆಯೋನ್ ಮತ್ತು ಲೇವಿಯರಿಗೆ, “ನೀವು ನನ್ನ ಹೆಸರನ್ನು ಈ ನಾಡಿನ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ಅಸಹ್ಯಮಾಡಿಬಿಟ್ಟರಿ; ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಕೆಲವರೇ. ಈ ನಾಡಿನವರೆಲ್ಲರು ಒಟ್ಟಿಗೆ ಬಂದು ನನ್ನ ಮೇಲೆ ಬಿದ್ದರೆ ನಾನು ಮಾತ್ರವಲ್ಲ, ನನ್ನ ಮನೆಯವರೆಲ್ಲರೂ ನಿರ್ಮೂಲವಾಗುತ್ತೇವೆ ಅಲ್ಲವೇ?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಯಾಕೋಬನು ಸಿಮೆಯೋನ್ ಲೇವಿಯರಿಗೆ - ನೀವು ಈ ದೇಶದ ನಿವಾಸಿಗಳಾದ ಕಾನಾನ್ಯರಲ್ಲಿಯೂ ಪೆರಿಜೀಯರಲ್ಲಿಯೂ ನನ್ನ ಹೆಸರು ದುರ್ವಾಸನೆಯಾಗುವಂತೆ ಮಾಡಿ ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಸ್ವಲ್ಪವೇ; ಈ ದೇಶದವರು ಒಟ್ಟಾಗಿ ನನ್ನ ಮೇಲೆ ಬಂದು ನನ್ನನ್ನು ಹೊಡೆದರೆ ನಾನೂ ನನ್ನ ಮನೆಯವರೆಲ್ಲರೂ ನಾಶವಾಗುವೆವು ಅಲ್ಲವೇ ಎಂದು ಹೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಆದರೆ ಯಾಕೋಬನು ಸಿಮೆಯೋನನಿಗೆ ಮತ್ತು ಲೇವಿಗೆ, “ನೀವು ನನ್ನನ್ನು ಅಪಾಯಕ್ಕೆ ಗುರಿಮಾಡಿದಿರಿ. ಈ ದೇಶದಲ್ಲಿರುವ ಎಲ್ಲಾ ಕಾನಾನ್ಯರು ಮತ್ತು ಪೆರಿಜೀಯರು ನನ್ನನ್ನು ದ್ವೇಷಿಸಿ ನನಗೆ ವಿರೋಧವಾಗುವರು. ನನಗಿರುವ ಜನರು ಕೆಲವರೇ. ಈ ದೇಶದಲ್ಲಿರುವ ಜನರು ಒಟ್ಟಾಗಿ ಸೇರಿಕೊಂಡು ನನಗೆ ವಿರೋಧವಾಗಿ ಹೋರಾಡಿದರೆ ನಾನೂ ನನ್ನ ಜನರೆಲ್ಲರೂ ನಾಶವಾಗುವೆವು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಆಗ ಯಾಕೋಬನು ಸಿಮೆಯೋನನಿಗೂ, ಲೇವಿಗೂ, “ನೀವು ನನ್ನನ್ನು ಈ ದೇಶದ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ಅಸಹ್ಯವಾಗುವಂತೆ ಮಾಡಿ, ನನ್ನನ್ನು ಕಳವಳಪಡಿಸಿದಿರಿ. ನಾವು ಸ್ವಲ್ಪ ಜನರು, ಹೀಗಿರುವಲ್ಲಿ ಅವರು ನನಗೆ ವಿರೋಧವಾಗಿ ಕೂಡಿಕೊಂಡು ನನ್ನನ್ನು ದಾಳಿಮಾಡುವರು. ಆಗ ನಾನೂ, ನನ್ನ ಮನೆಯವರೂ ನಾಶವಾಗುವೆವು,” ಎಂದನು. ಅಧ್ಯಾಯವನ್ನು ನೋಡಿ |