Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 35:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯಾಕೋಬನಿಗೆ ಲೇಯಳಲ್ಲಿ ಹುಟ್ಟಿದವರು ಯಾರೆಂದರೆ: ಯಾಕೋಬನ ಚೊಚ್ಚಲ ಮಗನಾದ ರೂಬೇನ್ ಮತ್ತು ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಯಕೋಬನ ಹನ್ನೆರಡು ಗಂಡು ಮಕ್ಕಳ ಹೆಸರು ಇವು: ಯಕೋಬನ ಚೊಚ್ಚಲಮಗ ರೂಬೇನ್, ಸಿಮೆಯೋನ್, ಲೇವಿ, ಯೆಹೂದಾ, ಇಸ್ಸಾಕಾರ್, ಜೆಬುಲೂನ್ - ಇವರು ಲೇಯಳಲ್ಲಿ ಹುಟ್ಟಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವರು ಯಾರಾರಂದರೆ - ಯಾಕೋಬನ ಚೊಚ್ಚಲಮಗನಾದ ರೂಬೇನ್; ಆಮೇಲೆ ಸಿಮೆಯೋನ್, ಲೇವಿ, ಯೆಹೂದಾ, ಇಸ್ಸಾಕಾರ್, ಜೆಬುಲೂನ್; ಇವರು ಲೇಯಳಲ್ಲಿ ಹುಟ್ಟಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಲೇಯಳ ಗಂಡುಮಕ್ಕಳು: ಯಾಕೋಬನ ಚೊಚ್ಚಲ ಮಗನಾದ ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್ ಮತ್ತು ಜೆಬುಲೂನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವರಲ್ಲಿ ಲೇಯಳ ಪುತ್ರರು: ಯಾಕೋಬನ ಚೊಚ್ಚಲ ಮಗ ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್ ಮತ್ತು ಜೆಬುಲೂನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 35:23
33 ತಿಳಿವುಗಳ ಹೋಲಿಕೆ  

ಮುಂದುಗಡೆಯಲ್ಲಿ ದಾಸಿಯರನ್ನೂ ಅವರ ಮಕ್ಕಳನ್ನೂ ಅವರ ಹಿಂದೆ ಲೇಯಳನ್ನೂ ಆಕೆಯ ಮಕ್ಕಳನ್ನೂ ಕಡೆಯಲ್ಲಿ ರಾಹೇಲಳನ್ನೂ ಯೋಸೇಫನನ್ನೂ ನಿಲ್ಲಿಸಿದನು.


ಇದಲ್ಲದೆ ದೇವರು ಅವನ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅದಕ್ಕೆ ಗುರುತಾಗಿ ಸುನ್ನತಿಯನ್ನು ಏರ್ಪಡಿಸಿದನು. ಅದಕ್ಕನುಸಾರವಾಗಿ ಅಬ್ರಹಾಮನು ಇಸಾಕನನ್ನು ಪಡೆದು ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿದನು. ಮುಂದೆ ಇಸಾಕನು ಯಾಕೋಬನನ್ನು ಪಡೆದನು, ಯಾಕೋಬನು ಹನ್ನೆರಡು ಮಂದಿ ಪೂರ್ವಿಕರನ್ನು ಪಡೆದನು.


ಲೇಯಳು ಯಾಕೋಬನಿಗೆ ಅಲಕ್ಷ್ಯವಾಗಿದ್ದಾಳೆಂಬುದನ್ನು ಯೆಹೋವನು ನೋಡಿ, ಆಕೆಯು ಗರ್ಭಧರಿಸುವಂತೆ ಅನುಗ್ರಹಿಸಿದನು; ಆದರೆ ರಾಹೇಲಳು ಬಂಜೆಯಾಗಿದ್ದಳು.


ಯಾಕೋಬನೊಂದಿಗೆ ಐಗುಪ್ತದೇಶಕ್ಕೆ ತಮ್ಮತಮ್ಮ ಮನೆಯವರ ಸಂಗಡ ಬಂದ ಇಸ್ರಾಯೇಲರ ಮಕ್ಕಳ ಹೆಸರುಗಳು:


ಲಾಬಾನನಿಗೆ ಇಬ್ಬರು ಹೆಣ್ಣುಮಕ್ಕಳಿದ್ದರು; ದೊಡ್ಡವಳ ಹೆಸರು ಲೇಯಾ, ಚಿಕ್ಕವಳ ಹೆಸರು ರಾಹೇಲ್.


ರೂಬೇನನೇ, ನೀನು ನನ್ನ ಚೊಚ್ಚಲಮಗನೂ, ನನ್ನ ಚೈತನ್ಯಸ್ವರೂಪನೂ, ನನ್ನ ಪ್ರಥಮಫಲವೂ, ಗೌರವದಲ್ಲಿಯೂ, ಅಧಿಕಾರದಲ್ಲಿಯೂ ಪ್ರಮುಖನೂ ಆಗಿದ್ದೀ.


ನಿಮಗೆ ಸಹಾಯಮಾಡಬೇಕಾದ ಪುರುಷರು ಯಾರಾರೆಂದರೆ: ರೂಬೇನ್ ಕುಲದಿಂದ ಶೆದೇಯೂರನ ಮಗನಾದ ಎಲೀಚೂರ್,


ಇಸ್ರಾಯೇಲಿನ ಚೊಚ್ಚಲ ಮಗನಾದ ರೂಬೇನನ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಲೆಕ್ಕಮಾಡಲ್ಪಟ್ಟರು.


ದೇವದರ್ಶನ ಗುಡಾರದ ಪೂರ್ವದಿಕ್ಕಿನಲ್ಲಿ ಸೂರ್ಯೋದಯವಾಗುವ ಕಡೆಗೆ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ದಂಡಿನ ಧ್ವಜದ ಹತ್ತಿರ ಡೇರೆಗಳನ್ನು ಹಾಕಿಕೊಳ್ಳಬೇಕು. ಯೆಹೂದ ಕುಲದ ಸೈನ್ಯಾಧಿಪತಿಯು ಅಮ್ಮೀನಾದಾಬನ ಮಗನಾದ ನಹಶೋನನು.


ಮೊದಲನೆಯ ದಿನದಲ್ಲಿ ಕಾಣಿಕೆಯನ್ನು ಅರ್ಪಿಸಿದವನು ಯೆಹೂದ ಕುಲಾಧಿಪತಿಯಾದ ಅಮ್ಮೀನಾದಾಬನ ಮಗನಾದ ನಹಶೋನ.


ಮುಂಭಾಗದಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಅಮ್ಮೀನಾದಾಬನ ಮಗನಾದ ನಹಶೋನನು.


ಅವರ ಹೆಸರುಗಳು ಯಾವುವೆಂದರೆ: ರೂಬೇನ್ ಕುಲದ ಜಕ್ಕೂರನ ಮಗನಾದ ಶಮ್ಮೂವ,


ಇಸ್ರಾಯೇಲನ ಚೊಚ್ಚಲು ಮಗನಾದ ರೂಬೇನನಿಂದುಂಟಾದ ಕುಟುಂಬಗಳು ಯಾವುವೆಂದರೆ: ಹನೋಕನ ವಂಶಸ್ಥರಾದ ಹನೋಕ್ಯರು, ಪಲ್ಲೂವಿನ ವಂಶಸ್ಥರಾದ ಪಲ್ಲೂವಿನವರು,


ನೀವು ಆಯಾ ಕುಲಗಳಿಂದ ನೇಮಿಸಬೇಕಾದವರು ಯಾರೆಂದರೆ: ಯೆಹೂದ ಕುಲದಿಂದ ಯೆಫುನ್ನೆಯ ಮಗನಾದ ಕಾಲೇಬ್,


ಮೋಶೆ ಆ ದಿನದಲ್ಲಿ ಜನರಿಗೆ ಆಜ್ಞಾಪಿಸಿದ್ದೇನೆಂದರೆ,


“ರೂಬೇನ್ ಕುಲದ ವಿಷಯದಲ್ಲಿ, ‘ರೂಬೇನ್ ಕುಲವು ನಾಶವಾಗದೆ ಉಳಿಯಲಿ; ಆದರೆ ಅದು ಸ್ವಲ್ಪ ಜನರುಳ್ಳದ್ದಾಗಿರುವುದು’ ಎಂದು ಹೇಳಿದನು.


ಮೋಶೆಯು ರೂಬೇನ್ಯರ ಮಕ್ಕಳ ಗೋತ್ರಗಳಿಗೆ ಸ್ವತ್ತಾಗಿ ಕೊಟ್ಟ ಪ್ರದೇಶಗಳು ಯಾವುವೆಂದರೆ:


ಎದೋಮ್ ಸೀಮೆಯೂ, ಚಿನ್ ಅರಣ್ಯದ ಮೇರೆಯಾಗಿರುವ ಕಾನಾನ ದೇಶದ ದಕ್ಷಿಣ ಭಾಗವು ಯೆಹೂದ ಕುಲದ ಗೋತ್ರಗಳಿಗೆ ಸ್ವತ್ತಾಗಿ ಸಿಕ್ಕಿತು.


ಚೀಟು ಎರಡನೆಯ ಸಾರಿ ಸಿಮೆಯೋನನ ಕುಲದವರಿಗೆ ಬಿದ್ದಿತು. ಸಿಮೆಯೋನನ ಕುಲದ ಗೋತ್ರಗಳ ಸ್ವತ್ತು ಯೆಹೂದ ಕುಲದವರ ಸ್ವತ್ತಿನ ಮಧ್ಯದಲ್ಲಿತ್ತು.


ಚೀಟು ಮೂರನೆಯ ಸಾರಿ ಜೆಬುಲೂನ್ಯರಿಗೆ ಬಿದ್ದಿತು. ಆ ಕುಲದ ಗೋತ್ರಗಳಿಗೆ ಸಿಕ್ಕಿದ ಸ್ವತ್ತಿನ ಮೇರೆಯು


ಚೀಟು ನಾಲ್ಕನೆಯ ಸಾರಿ ಇಸ್ಸಾಕಾರ್ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಪಟ್ಟಣಗಳು ಯಾವುವೆಂದರೆ:


ಅಮಾಲೇಕ್ಯರ ಪ್ರದೇಶದಲ್ಲಿ ನೆಲೆಗೊಂಡಿರುವ ಎಫ್ರಾಯೀಮ್ಯರೂ ಅವರ ಜೊತೆಯಲ್ಲಿ ಬೆನ್ಯಾಮೀನ್ಯರೂ ಬಂದರು. ಮಾಕೀರನ ಗೋತ್ರದಿಂದ ಪ್ರಧಾನರೂ ಜೆಬುಲೂನ್ ಕುಲದಿಂದ ದಂಡಧಾರಿಗಳಾದ ಸೇನಾನಾಯಕರೂ


ದೆಬೋರಳ ಜೊತೆಯಲ್ಲಿ ಇಸ್ಸಾಕಾರ್ ಕುಲಪ್ರಭುಗಳೂ ಇಸ್ಸಾಕಾರರೊಡನೆ ಬಾರಾಕನೂ ಆಗಮಿಸಿದರು. ಇವರೆಲ್ಲರೂ ಬಾರಾಕನ ಹೆಜ್ಜೆಹಿಡಿದು ತಟ್ಟನೆ ತಗ್ಗಿನ ಪ್ರದೇಶಕ್ಕೆ ಬಂದರು. ರೂಬೇನ್ಯರ ಗೋತ್ರದವರು ಬಹಳಷ್ಟು ತಮ್ಮ ಹೃದಯಗಳಲ್ಲಿ ವಿಶ್ಲೇಷಿಸಿದರೂ ತೀರ್ಮಾನಿಸಲಾಗಲ್ಲಿಲ್ಲ


ಜೆಬುಲೂನ್ಯರು ತಮ್ಮ ಜೀವವನ್ನು ಮರಣದ ಆಪತ್ತಿಗೆ ಒಪ್ಪಿಸಲು ಸಿದ್ಧರಿದರು, ನಫ್ತಾಲ್ಯರು ಸಹ ರಣರಂಗದಲ್ಲಿಯೇ ಇದ್ದರು.


ಅದಕ್ಕೆ ಊರ ಬಾಗಿಲಲ್ಲಿ ಕೂಡಿ ಬಂದಿದ್ದ ಹಿರಿಯರೂ, ಎಲ್ಲಾ ಜನರೂ “ಹೌದು, ನಾವೇ ಸಾಕ್ಷಿಗಳು; ಯೆಹೋವನು ಇಸ್ರಾಯೇಲನ ಮನೆಯನ್ನು ಕಟ್ಟಿದ. ರಾಹೇಲ್, ಲೇಯಾ ಎಂಬ ಸ್ತ್ರೀಯರನ್ನು ಹೇಗೋ ಹಾಗೆಯೇ ನಿನ್ನ ಮನೆಗೆ ಬರುವ ಈ ಸ್ತ್ರೀಯನ್ನೂ ಅಭಿವೃದ್ಧಿಪಡಿಸಲಿ. ಎಫ್ರಾತದಲ್ಲಿ ಅಭಿವೃದ್ಧಿ ಹೊಂದು, ಬೇತ್ಲೆಹೇಮಿನಲ್ಲಿ ಪ್ರಸಿದ್ಧನಾಗು.


ಸಿಮೆಯೋನ್ಯರಿಂದ ಏಳು ಸಾವಿರದ ನೂರು ಯುದ್ಧವೀರರು.


ಇಸ್ರಾಯೇಲಿನ ಕುಲ ಪ್ರಭುಗಳು: ರೂಬೇನ್ಯರಲ್ಲಿ ಜಿಕ್ರೀಯ ಮಗನಾದ ಎಲೀಯೆಜೆರನು; ಸಿಮೆಯೋನ್ಯರಲ್ಲಿ ಮಾಕನ ಮಗನಾದ ಶೆಪಟ್ಯನು;


ಪಟ್ಟಣದ ನಿರ್ಗಮನ ಹೀಗಿರಬೇಕು: ಉತ್ತರದ ಕಡೆಯ ಉದ್ದ ನಾಲ್ಕು ಸಾವಿರದ ಐನೂರು ಮೊಳವಾಗಿದೆ.


ಸಿಮೆಯೋನನ ಕುಲದವರಲ್ಲಿ ಹನ್ನೆರಡು ಸಾವಿರ, ಲೇವಿಯ ಕುಲದವರಲ್ಲಿ ಹನ್ನೆರಡು ಸಾವಿರ, ಇಸ್ಸಕಾರನ ಕುಲದವರಲ್ಲಿ ಹನ್ನೆರಡು ಸಾವಿರ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು