Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 36:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಬೆಲಗನು ಸತ್ತ ನಂತರ ಬೊಚ್ರದವನಾದ ಜೆರಹನ ಮಗನಾಗಿದ್ದ ಯೋಬಾಬನು ಅಧಿಪತ್ಯಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಬೆಲಗನು ಸತ್ತ ಮೇಲೆ ಬೊಚ್ರದವನಾದ ಚೆರಹನ ಮಗ ಯೋಬಾಬನು ಆಧಿಪತ್ಯಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಬೆಲಗನು ಸತ್ತ ಮೇಲೆ ಬೊಚ್ರದವನಾದ ಜೆರಹನ ಮಗನಾಗಿದ್ದ ಯೋಬಾಬನು ಆಧಿಪತ್ಯಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಬೆಲಗನು ಸತ್ತಮೇಲೆ, ಯೋಬಾಬನು ರಾಜನಾದನು. ಯೋಬಾಬನು ಬೊಚ್ರದವನಾದ ಚೆರಹನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಬೆಲಗನ ಮರಣದ ನಂತರ ಅವನ ಬದಲಾಗಿ ಬೊಚ್ರದವನಾದ ಜೆರಹನ ಮಗ ಯೋಬಾಬನು ಉತ್ತರಾಧಿಕಾರಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 36:33
9 ತಿಳಿವುಗಳ ಹೋಲಿಕೆ  

ಇಗೋ, ಬೊಚ್ರದ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ತನ್ನ ರೆಕ್ಕೆಗಳನ್ನು ಹರಡಿ ಹಾರಿ ಏರುವನು; ಆ ದಿನದಲ್ಲಿ ಎದೋಮಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವುದು.


ಬೊಚ್ರವು ಹಾಳುಬಿದ್ದು ಪರಿಹಾಸ್ಯಕ್ಕೂ, ನಿಂದೆಗೂ ಶಾಪಕ್ಕೂ ಗುರಿಯಾಗಿದೆ. ಅದಕ್ಕೆ ಸೇರಿದ ಊರುಗಳೆಲ್ಲಾ ನಿತ್ಯನಾಶವನ್ನು ಹೊಂದುವವು ಎಂದು ನನ್ನ ಮೇಲೆ ಆಣೆಯಿಟ್ಟಿದ್ದೇನೆ. ಇದು ಯೆಹೋವನ ನುಡಿ.”


ಯಾಕೋಬೇ ನಿನ್ನವರೆಲ್ಲರನ್ನು ಒಂದುಗೂಡಿಸುವೆನು. ಇಸ್ರಾಯೇಲಿನ ಉಳಿದ ಜನರನ್ನು ಒಟ್ಟಿಗೆ ಸೇರಿಸುವೆನು. ಅವರನ್ನು ಹಟ್ಟಿಯಲ್ಲಿನ ಕುರಿಗಳಂತೆ ಒಟ್ಟಿಗೆ ಇಡುವೆನು. ಹುಲ್ಲುಗಾವಲಿನ ಮಧ್ಯದಲ್ಲಿನ ಮಂದೆಯ ಹಾಗೆ ಗುಂಪು ಕೂಡಿಸುವೆನು. ಜನರು ದೊಡ್ಡ ಶಬ್ದಮಾಡುವರು.


ನಾನು ತೇಮಾನಿನ ಮೇಲೆ ಬೆಂಕಿಯನ್ನು ಸುರಿಸುವೆನು, ಮತ್ತು ಅದು ಬೊಚ್ರದ ಅರಮನೆಗಳನ್ನು ನುಂಗಿಬಿಡುವುದು.”


ಆಹಾ, ರಕ್ತವರ್ಣದ ಉಡುಪನ್ನಿಟ್ಟು, ಘನವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯಯುಕ್ತನಾಗಿ ಮೆರೆಯುತ್ತಾ, ಎದೋಮಿನ ಬೊಚ್ರದಿಂದ ಬರುವ ಇವನು ಯಾರು? ಸತ್ಯಾನುಸಾರವಾಗಿ ಮಾತನಾಡುವವನು, ರಕ್ಷಿಸಲು ಸಮರ್ಥನು ಆದ ನಾನೇ.


ಯೆಹೋವನ ಖಡ್ಗವು ರಕ್ತದಿಂದ ತುಂಬಿದೆ. ಅದು ಕುರಿ ಮತ್ತು ಹೋತಗಳ ರಕ್ತದಿಂದಲೂ, ಟಗರುಗಳ ಮೂತ್ರಪಿಂಡದ ಕೊಬ್ಬಿನಿಂದಲೂ ಲೇಪಿತವಾಗಿದೆ. ಏಕೆಂದರೆ ಯೆಹೋವನು ಬೊಚ್ರದಲ್ಲಿ ಬಲಿಯನ್ನೂ, ಎದೋಮ್ ಸೀಮೆಯಲ್ಲಿ ದೊಡ್ಡ ಹತ್ಯೆಯನ್ನೂ ಮಾಡಬೇಕೆಂದಿದ್ದಾನೆ.


ಬೆಯೋರನ ಮಗನಾದ ಬೆಲಗನು ಎದೋಮ್ಯರನ್ನು ಆಳಿದನು. ಅವನ ಪಟ್ಟಣದ ಹೆಸರು ದಿನ್ಹಾಬಾ.


ಯೋಬಾಬನು ಸತ್ತ ನಂತರ ತೇಮಾನೀಯರ ಹುಷಾಮನು ಅವನಿಗೆ ಬದಲಾಗಿ ಆಳಿದನು.


ಕೆರೀಯೋತ್, ಬೊಚ್ರ ಅಂತು ದೂರದ ಮತ್ತು ಹತ್ತಿರದ ಮೋವಾಬಿನ ಎಲ್ಲಾ ಪಟ್ಟಣಗಳಿಗೂ ದಂಡನೆಯಾಗದೆ ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು