Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 36:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರ ಸಂಪತ್ತು ಹೆಚ್ಚಿದ್ದದರಿಂದ ಅವರಿಬ್ಬರೂ ಒಂದೇ ಸ್ಥಳದಲ್ಲಿರುವುದಕ್ಕೆ ಸಾಧ್ಯವಿರಲಿಲ್ಲ. ಅವರಿಗೆ ಪಶುಪ್ರಾಣಿಗಳು ಬಹಳವಾಗಿದ್ದುದರಿಂದ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸಿರಿಸಂಪತ್ತು ಹೆಚ್ಚಾಗಿ ಇದ್ದುದರಿಂದ ಅವರಿಬ್ಬರೂ ಒಂದೇ ಸ್ಥಳದಲ್ಲಿ ವಾಸಮಾಡಲು ಅನುಕೂಲವಾಗಿರಲಿಲ್ಲ; ಪಶುಪ್ರಾಣಿಗಳು ಬಹಳ ಆಗಿದ್ದುದರಿಂದ ಅವರು ತಂಗಿದ್ದ ನಾಡು ಅವರಿಗೆ ಸಾಲದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರ ಸಂಪತ್ತು ಹೆಚ್ಚಿದ್ದರಿಂದ ಅವರಿಬ್ಬರೂ ಒಂದೇ ಸ್ಥಳದಲ್ಲಿರುವದಕ್ಕೆ ಅನುಕೂಲವಿರಲಿಲ್ಲ; ಅವರ ಪಶುಗಳು ಬಹಳವಾಗಿದ್ದದರಿಂದ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಏಕೆಂದರೆ ಅವರ ಸಂಪತ್ತು ಅವರು ಕೂಡಿ ಇರುವುದಕ್ಕೆ ಆಗದಷ್ಟು ಅಭಿವೃದ್ಧಿಯಾಗಿತ್ತು. ಅವರ ಪಶುಪ್ರಾಣಿಗಳಿಗೋಸ್ಕರ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 36:7
8 ತಿಳಿವುಗಳ ಹೋಲಿಕೆ  

ಆ ಸ್ಥಳವು ಅವರಿಬ್ಬರ ಜೀವನಕ್ಕೆ ಸಾಲದೆ ಹೋಯಿತು.


ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವತ್ತಾಗಿ ಕೊಟ್ಟು ಎಂದೆಂದಿಗೂ ಅವರಿಗೆ ದೇವರಾಗಿರುವೆನು” ಎಂದನು.


ದೇವರು ಅಬ್ರಹಾಮನಿಗೆ ಕೊಟ್ಟಿರುವ ಆಶೀರ್ವಾದವನ್ನು ನಿನಗೂ, ನಿನ್ನ ಸಂತತಿಗೂ ಕೊಡಲಿ, ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ ಹಾಗೆ, ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಸ್ವತ್ತಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ” ಎಂದನು.


ನಂಬಿಕೆಯಿಂದಲೇ ಅವನು ವಾಗ್ದಾನದ ದೇಶಕ್ಕೆ ಬಂದಾಗ, ಅಲ್ಲಿ ಅನ್ಯ ದೇಶದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿ ಬದುಕಿದನು. ಅದೇ ವಾಗ್ದಾನಕ್ಕೆ ಸಹಭಾಧ್ಯರಾಗಿದ್ದ ಇಸಾಕನೂ, ಯಾಕೋಬನೂ ಅವನಂತೆಯೇ ಗುಡಾರಗಳಲ್ಲಿ ವಾಸಿಸಿದರು.


ಆದುದರಿಂದ ಲೋಟನು ಯೊರ್ದನ್ ಹೊಳೆಯ ಸುತ್ತಣ ಪ್ರದೇಶವನ್ನು ಆರಿಸಿಕೊಂಡು ಮೂಡಣ ಕಡೆಗೆ ಹೊರಟನು.


ನಾವು ನಿನ್ನ ದೃಷ್ಟಿಯಲ್ಲಿ ಪರದೇಶಿಗಳೂ, ನಮ್ಮ ಪೂರ್ವಿಕರೆಲ್ಲರಂತೆ ಪ್ರವಾಸಿಗಳೂ ಆಗಿದ್ದೇವೆ. ನಮ್ಮ ಆಯುಷ್ಕಾಲವು ನೆರಳಿನಂತಿದೆ. ನಮಗೆ ಯಾವ ನಿರೀಕ್ಷೆಯೂ ಇಲ್ಲ.


ಯೆಹೋವನೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮೊರೆಗೆ ಕಿವಿಗೊಡು. ನನ್ನ ಕಣ್ಣೀರನ್ನು ನೋಡು, ಸುಮ್ಮನಿರಬೇಡ. ನನ್ನ ಪೂರ್ವಿಕರಂತೆಯೇ ನಾನು ನಿನ್ನ ಮರೆಹೊಕ್ಕಿರುವ ಪ್ರವಾಸಿಯೂ, ಪರದೇಶದವನೂ ಆಗಿದ್ದೇನಲ್ಲಾ.


ಮನೆಕಟ್ಟಬಾರದು, ಬೀಜ ಬಿತ್ತಬಾರದು, ದ್ರಾಕ್ಷಿತೋಟ ಮಾಡಬಾರದು, ಅನುಭವಿಸಲೂ ಬಾರದು, ನಿಮ್ಮ ಜೀವಮಾನವೆಲ್ಲಾ ಗುಡಾರಗಳಲ್ಲೇ ವಾಸಿಸಬೇಕು, ಇದರಿಂದ ನೀವು ತಂಗುವ ದೇಶದಲ್ಲಿ ನಿಮಗೆ ದೀರ್ಘಾಯುಷ್ಯವಾಗವುದು’” ಎಂದು ಅಪ್ಪಣೆಕೊಟ್ಟಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು