ಆದಿಕಾಂಡ 37:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವನು ಈ ಕನಸನ್ನು ತನ್ನ ತಂದೆಗೂ ಮತ್ತು ಅಣ್ಣಂದಿರಿಗೂ ತಿಳಿಸಿದಾಗ ತಂದೆಯು ಅವನಿಗೆ, “ಇದು ಎಂಥಾ ಕನಸು ನೀನು ಕಂಡದ್ದು? ನಾನೂ ನಿನ್ನ ತಾಯಿಯೂ, ಅಣ್ಣತಮ್ಮಂದಿರೂ ನಿನ್ನ ಮುಂದೆ ಅಡ್ಡ ಬೀಳುವುದಕ್ಕೆ ಬಂದೆವೋ?” ಎಂದು ಹೇಳಿ ಗದರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಈ ಕನಸನ್ನು ಅಣ್ಣಂದಿರಿಗೆ ಮಾತ್ರವಲ್ಲ, ತಂದೆಗೂ ತಿಳಿಸಿದ. ತಂದೆ ಅವನಿಗೆ, “ಇದೆಂಥ ಕನಸು, ನೀನು ಕಂಡದ್ದು! ನಾನು, ನಿನ್ನ ತಾಯಿ, ಹಾಗು ಅಣ್ಣತಮ್ಮಂದಿರು ನಿನಗೆ ಅಡ್ಡಬೀಳಲು ಬರುತ್ತೇವೋ” ಎಂದು ಹೇಳಿ ಅವನನ್ನು ಗದರಿಸಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವನು ಈ ಕನಸನ್ನು ತನ್ನ ತಂದೆಗೂ ಅಣ್ಣಂದಿರಿಗೂ ತಿಳಿಸಿದಾಗ ತಂದೆಯು ಅವನಿಗೆ - ಇದು ಎಂಥಾ ಕನಸು ನೀನು ಕಂಡದ್ದು? ನಾನೂ ನಿನ್ನ ತಾಯಿಯೂ ಅಣ್ಣತಮ್ಮಂದಿರೂ ನಿನ್ನ ಮುಂದೆ ಅಡ್ಡಬೀಳುವದಕ್ಕೆ ಬಂದೇವೋ ಎಂದು ಹೇಳಿ ಗದರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯೋಸೇಫನು ತನ್ನ ತಂದೆಗೂ ಸಹ ಈ ಕನಸಿನ ಬಗ್ಗೆ ತಿಳಿಸಿದನು. ಆದರೆ ಅವನ ತಂದೆ ಅವನನ್ನು ಗದರಿಸಿ, “ಇದೆಂಥಾ ಕನಸು? ನಾನೂ ನಿನ್ನ ತಾಯಿಯೂ ಮತ್ತು ನಿನ್ನ ಸಹೋದರರೂ ನಿನಗೆ ಅಡ್ಡಬೀಳುತ್ತೇವೆಂದು ನಂಬುತ್ತೀಯೋ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವನು ತನ್ನ ತಂದೆಗೂ ತನ್ನ ಸಹೋದರರಿಗೂ ತಿಳಿಸಿದಾಗ, ಅವನ ತಂದೆಯು ಅವನನ್ನು ಗದರಿಸಿ, “ನೀನು ಕಂಡ ಈ ಕನಸು ಏನು? ನಾನು, ನಿನ್ನ ತಾಯಿ, ನಿನ್ನ ಸಹೋದರರೂ ನಿಜವಾಗಿ ನಿನ್ನ ಮುಂದೆ ಅಡ್ಡ ಬೀಳುವುದಕ್ಕೆ ಬರಬೇಕೋ?” ಎಂದನು. ಅಧ್ಯಾಯವನ್ನು ನೋಡಿ |