Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇದು ಯಾಕೋಬನ ವಂಶದವರ ಚರಿತ್ರೆ: ಯೋಸೇಫನು ಹದಿನೇಳು ವರ್ಷದವನಾಗಿದ್ದಾಗ ತನ್ನ ಅಣ್ಣಂದಿರ ಜೊತೆಯಲ್ಲಿ ಅಂದರೆ, ತನ್ನ ತಂದೆಯ ಹೆಂಡತಿಯರಾದ ಬಿಲ್ಹಾ ಮತ್ತು ಜಿಲ್ಪಾರ ಮಕ್ಕಳ ಜೊತೆಯಲ್ಲಿ ಆಡು ಕುರಿಗಳನ್ನು ಮೇಯಿಸುತ್ತಿದ್ದನು. ಅವರು ಏನಾದರೂ ಕೆಟ್ಟ ಕೆಲಸ ಮಾಡುವಾಗ ಅವನು ತಂದೆಗೆ ತಿಳಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ಜೋಸೆಫನಿಗೆ ಹದಿನೇಳು ವರ್ಷ, ಇನ್ನೂ ಯುವಕ, ತನ್ನ ಅಣ್ಣಂದಿರ ಜೊತೆಯಲ್ಲಿ, ಅಂದರೆ ತನ್ನ ಮಲತಾಯಿಯರಾದ ಬಿಲ್ಹಾ, ಜಿಲ್ಪಾ ಎಂಬುವರ ಮಕ್ಕಳ ಜೊತೆಯಲ್ಲಿ, ಆಡುಕುರಿಗಳನ್ನು ಮೇಯಿಸುತ್ತಿದ್ದ, ಅಣ್ಣಂದಿರು ಏನಾದರೂ ತಪ್ಪಿ ನಡೆದರೆ ತಂದೆಗೆ ವರದಿ ಮಾಡುತ್ತಿದ್ದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯಾಕೋಬನ ಮಕ್ಕಳ ಚರಿತ್ರೆ. ಯೋಸೇಫನು ಹದಿನೇಳು ವರುಷದವನಾಗಿ ಇನ್ನೂ ಹುಡುಗನಾಗಿದ್ದು ತನ್ನ ಅಣ್ಣಂದಿರ ಜೊತೆಯಲ್ಲಿ ಅಂದರೆ ತನ್ನ ಮಲತಾಯಿಗಳಾದ ಬಿಲ್ಹಾ, ಜಿಲ್ಪಾ ಎಂಬವರ ಮಕ್ಕಳ ಜೊತೆಯಲ್ಲಿ ಆಡುಕುರಿಗಳನ್ನು ಮೇಯಿಸುತ್ತಿದ್ದನು. ಅವರು ಏನಾದರೂ ಕೆಟ್ಟ ಕೆಲಸ ಮಾಡುವಾಗ ಅವನು ತಂದೆಗೆ ತಿಳಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯಾಕೋಬನ ಕುಟುಂಬದ ಚರಿತ್ರೆಯಿದು: ಯೋಸೇಫನು ಹದಿನೇಳು ವರ್ಷದ ಯೌವನಸ್ಥನಾಗಿದ್ದನು. ಆಡುಕುರಿಗಳನ್ನು ಸಾಕುವುದು ಅವನ ಕಸುಬಾಗಿತ್ತು. ತನ್ನ ಅಣ್ಣಂದಿರೊಡನೆ ಅಂದರೆ ಬಿಲ್ಹಾ ಮತ್ತು ಜಿಲ್ಪಾ ಎಂಬ ತನ್ನ ಮಲತಾಯಿಗಳ ಮಕ್ಕಳೊಡನೆ ಯೋಸೇಫನು ಆಡುಕುರಿಗಳನ್ನು ಮೇಯಿಸುತ್ತಿದ್ದನು. ಅವರೇನಾದರೂ ಕೆಟ್ಟದ್ದನ್ನು ಮಾಡಿದರೆ ಯೋಸೇಫನು ತಂದೆಗೆ ತಿಳಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇದು ಯಾಕೋಬನ ವಂಶದವರ ಚರಿತ್ರೆ: ಯೋಸೇಫನು ಹದಿನೇಳು ವರ್ಷದವನಾಗಿದ್ದಾಗ, ತನ್ನ ಸಹೋದರರ ಸಂಗಡ ಅಂದರೆ, ತನ್ನ ತಂದೆಯ ಹೆಂಡತಿಯರಾಗಿದ್ದ ಬಿಲ್ಹಳ ಮತ್ತು ಜಿಲ್ಪಳ ಮಕ್ಕಳ ಸಂಗಡ ಕುರಿಮಂದೆಗಳನ್ನು ಕಾಯುತ್ತಿದ್ದನು. ಯೋಸೇಫನು ಅವರ ಕೆಟ್ಟತನದ ಸುದ್ದಿಯನ್ನು ತನ್ನ ತಂದೆಗೆ ತಿಳಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:2
17 ತಿಳಿವುಗಳ ಹೋಲಿಕೆ  

ಹೇಗೆಂದರೆ ಮೊದಲನೆಯದಾಗಿ ನೀವು ಸಭೆಯಾಗಿ ಸೇರಿಬರುವಾಗ ನಿಮ್ಮಲ್ಲಿ ಭಿನ್ನತೆ, ಭೇದಗಳು ಉಂಟಾಗುತ್ತವೆಂದು ಕೇಳಿದ್ದೇನೆ. ಮತ್ತು ಇದು ನಿಜವೆಂದು ಸ್ವಲ್ಪ ಮಟ್ಟಿಗೆ ನಂಬುತ್ತೇನೆ.


ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳನ್ನು ಸಂಗಮಿಸಿದನು. ಈ ಸಂಗತಿಯು ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಗಂಡು ಮಕ್ಕಳಿದ್ದರು.


ನಿಮ್ಮಲ್ಲಿ ಜಾರತ್ವವುಂಟೆಂಬ ಸುದ್ದಿಯನ್ನು ನಾನು ಕೇಳಿದ್ದೇನೆ. ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ. ಅಂಥ ಜಾರತ್ವವು ಅನ್ಯಜನರಲ್ಲಿಯೂ ಸಹ ಇಲ್ಲ.


ಯಾಕೆಂದರೆ ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಜಗಳಗಳುಂಟೆಂದು ನಿಮ್ಮ ಬಗ್ಗೆ ಖ್ಲೋಯೆಯ ಜನರಿಂದ ನನಗೆ ತಿಳಿದು ಬಂದಿತು.


ಲೋಕವು ನಿಮ್ಮನ್ನು ದ್ವೇಷಿಸಲಾರದು, ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ.


ಲೇಯಳು ತನಗೆ ಹೆರಿಗೆ ನಿಂತುಹೋಗಿರುವುದನ್ನು ತಿಳಿದು ತನ್ನ ದಾಸಿಯಾದ ಜಿಲ್ಪಳನ್ನು ಯಾಕೋಬನ ಹೆಂಡತಿಯಾಗುವುದಕ್ಕೆ ಒಪ್ಪಿಸಿದಳು.


ತನ್ನ ದಾಸಿಯಾದ ಬಿಲ್ಹಳನ್ನು ಯಾಕೋಬನಿಗೆ ಹೆಂಡತಿಯಾಗುವುದಕ್ಕೆ ಒಪ್ಪಿಸಿದಳು.


ನೋಹನ ಮಕ್ಕಳಾದ ಶೇಮ್, ಹಾಮ್, ಯೆಫೆತ್ ಎಂಬುವವರ ಸಂತಾನದವರ ಚರಿತ್ರೆ: ಜಲಪ್ರಳಯದ ನಂತರ ಅವರಿಗೆ ಮಕ್ಕಳು ಹುಟ್ಟಿದರು.


ನೋಹನ ಚರಿತ್ರೆ: ನೋಹನು ಸತ್ಯವಂತನೂ ಎಲ್ಲಾ ಜನರಲ್ಲಿ ನೀತಿವಂತನು ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು.


ಆದಾಮನ ವಂಶದವರ ದಾಖಲೆ: ದೇವರು ಸೃಷ್ಟಿಕಾಲದಲ್ಲಿ ಮನುಷ್ಯನನ್ನು ತನ್ನ ಹೋಲಿಕೆಗನುಸಾರವಾಗಿ ಸೃಷ್ಟಿ ಮಾಡಿದನು.


ಯೆಹೋವನಾದ ದೇವರು ಭೂಮಿಯು ಆಕಾಶಗಳನ್ನು ನಿರ್ಮಾಣ ಮಾಡಿದ ಚರಿತ್ರೆ ಇದೇ.


ಯೋಸೇಫನು ಐಗುಪ್ತ ದೇಶದ ಅರಸನಾದ ಫರೋಹನ ಸನ್ನಿಧಿಯಲ್ಲಿ ನಿಂತಾಗ ಮೂವತ್ತು ವರ್ಷದವನಾಗಿದ್ದನು. ಅವನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶದಲ್ಲೆಲ್ಲಾ ಸಂಚಾರಮಾಡಿದನು.


ಅಣ್ಣಂದಿರ ಗುರುತು ಯೋಸೇಫನಿಗೆ ತಿಳಿದಿದ್ದರೂ ಅವನ ಗುರುತು ಅವರಿಗೆ ತಿಳಿಯಲಿಲ್ಲ.


ದೇಶಕ್ಕೆ ಬರ ಬಂದು ಎರಡು ವರ್ಷವಾಗಿದೆಯಷ್ಟೆ. ಇನ್ನೂ ಐದು ವರ್ಷಗಳ ಪರ್ಯಂತರ ಬಿತ್ತುವುದಕ್ಕಾಗಲಿ, ಕೊಯ್ಯುವುದಕ್ಕಾಗಲಿ, ಅವಕಾಶವಿಲ್ಲ.


“ನೀವು ಚಿಕ್ಕಂದಿನಿಂದ ಇದುವರೆಗೂ ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಪದ್ಧತಿಯ ಮೇರೆಗೆ ಪಶುಪಾಲಕರು ಎಂದು ಹೇಳಿರಿ. ಪಶುಪಾಲಕರು ಐಗುಪ್ತರಿಗೆ ಅಸಹ್ಯವಾಗಿರುವುದರಿಂದ, ಗೋಷೆನ್ ಸೀಮೆಯನ್ನು ನಿಮ್ಮ ನಿವಾಸಕ್ಕಾಗಿ ನೇಮಿಸುವನು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು