Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ರೂಬೇನನು ಈ ಮಾತನ್ನು ಕೇಳಿ, “ನಾವು ಅವನ ಪ್ರಾಣವನ್ನು ತೆಗೆಯಬಾರದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ರೂಬೇನನು ಈ ಮಾತನ್ನು ಕೇಳಿಸಿಕೊಂಡು, ಅವನನ್ನು ಅವರ ಕೈಯಿಂದ ತಪ್ಪಿಸುವ ಉದ್ದೇಶದಿಂದ, “ನಾವು ಅವನ ಪ್ರಾಣ ತೆಗೆಯಬೇಕಾಗಿಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ರೂಬೇನನು ಈ ಮಾತನ್ನು ಕೇಳಿ - ನಾವು ಅವನ ಪ್ರಾಣವನ್ನು ತೆಗೆಯಬಾರದು ಎಂದು ಹೇಳಿ ಅವನನ್ನು ಅವರ ಕೈಗೆ ತಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆದರೆ ರೂಬೇನನು ಅವರಿಗೆ, “ಅವನನ್ನು ಕೊಲ್ಲಬೇಡಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದರೆ ರೂಬೇನನು ಅದನ್ನು ಕೇಳಿ, ಅವನನ್ನು ಅವರ ಕೈಗಳಿಂದ ತಪ್ಪಿಸಿ, “ಅವನನ್ನು ಕೊಲ್ಲುವುದು ಬೇಡ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:21
6 ತಿಳಿವುಗಳ ಹೋಲಿಕೆ  

ಅದಕ್ಕೆ ರೂಬೇನನು, “ಆ ಹುಡುಗನಿಗೆ ಏನೂ ಕೇಡು ಮಾಡಬೇಡಿರಿ ಎಂದು ನಾನು ಹೇಳಿದೆನಲ್ಲವೆ. ನೀವು ಕೇಳಲಿಲ್ಲ. ಆದುದರಿಂದ ಅವನಿಗಾದ ಪ್ರಾಣ ಹಾನಿಯ ವಿಷಯದಲ್ಲಿ ನಾವು ಈಗ ಉತ್ತರ ಹೇಳಬೇಕಾಗಿ ಬಂದಿದೆ” ಎಂದನು.


ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.


ಅದೇ ದಿನ ಯೆಹೋಶುವನು ಮಕ್ಕೇದವನ್ನು ಸ್ವಾಧೀನಪಡಿಸಿ ಕೊಂಡನು. ಅ ಊರಿನ ರಾಜ ಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದನು. ಒಬ್ಬನನ್ನೂ ಉಳಿಸಲಿಲ್ಲ. ಯೆರಿಕೋವಿನ ಅರಸನಿಗೆ ಮಾಡಿದಂತೆ ಈ ಅರಸನಿಗೂ ಮಾಡಿದನು.


ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳನ್ನು ಸಂಗಮಿಸಿದನು. ಈ ಸಂಗತಿಯು ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಗಂಡು ಮಕ್ಕಳಿದ್ದರು.


ಇದಲ್ಲದೆ ನಿಮ್ಮ ರಕ್ತ ಸುರಿಸಿ ಜೀವ ತೆಗೆಯುವವನಿಗೆ ಮುಯ್ಯಿತೀರಿಸುವೆನು. ಮೃಗವಾಗಿದ್ದರೆ, ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿ ತೀರಿಸುವೆನು. ನರಹತ್ಯವು ಸಹೋದರ ಹತ್ಯವಲ್ಲವೇ?


ರೂಬೇನನು ಅವನನ್ನು ಅವರ ಕೈಯಿಂದ ತಪ್ಪಿಸಿ ತಂದೆಗೆ ತಿರುಗಿ ಒಪ್ಪಿಸಬೇಕೆಂದು ನೆನಸಿ ಅವರಿಗೆ, “ಇವನ ರಕ್ತ ಸುರಿಸಬೇಡಿರಿ, ಅವನನ್ನು ಈ ಕಾಡಿನಲ್ಲಿರುವ ಈ ಗುಂಡಿಯೊಳಗೆ ಹಾಕಿರಿ, ಅವನ ಮೇಲೆ ಕೈಹಾಕಬೇಡಿರಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು