Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅಷ್ಟರಲ್ಲಿ ಮಿದ್ಯಾನ್ಯರಾದ ವರ್ತಕರು ಹಾದುಹೋಗುತ್ತಿದ್ದರು. ಅವರು ಯೋಸೇಫನನ್ನು ಗುಂಡಿಯೊಳಗಿಂದ ಮೇಲೆ ಎತ್ತಿ ಆ ಇಷ್ಮಾಯೇಲ್ಯರಿಗೆ ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಅವನನ್ನು ಮಾರಿದರು. ಅವರು ಅವನನ್ನು ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅಷ್ಟರಲ್ಲಿ, ಮಿದ್ಯಾನಿನ ವರ್ತಕರು ಹಾದುಹೋಗುತ್ತಿದ್ದರು. ಅವರು ಜೋಸೆಫನನ್ನು ಬಾವಿಯೊಳಗಿಂದ ಎತ್ತಿ ಈ ಇಷ್ಮಾಯೇಲರಿಗೆ ಇಪ್ಪತ್ತು ಬೆಳ್ಳಿನಾಣ್ಯಗಳಿಗೆ ಮಾರಿಬಿಟ್ಟರು. ಇವರು ಅವನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 (ಅಷ್ಟರಲ್ಲಿ ವಿುದ್ಯಾನ್ಯರಾದ ವರ್ತಕರು ಹಾದುಹೋಗುತ್ತಿದ್ದರು.) ಅವರು ಯೋಸೇಫನನ್ನು ಗುಂಡಿಯೊಳಗಿಂದ ಎತ್ತಿ ಆ ಇಷ್ಮಾಯೇಲ್ಯರಿಗೆ ಇಪ್ಪತ್ತು ರೂಪಾಯಿಗಳಿಗೆ ಮಾರಿಬಿಟ್ಟರು. ಇವರು ಅವನನ್ನು ಐಗುಪ್ತದೇಶಕ್ಕೆ ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಮಿದ್ಯಾನಿನ ವ್ಯಾಪಾರಿಗಳು ಸಮೀಪಿಸಿದಾಗ, ಅಣ್ಣಂದಿರು ಯೋಸೇಫನನ್ನು ಬಾವಿಯೊಳಗಿಂದ ಹೊರತೆಗೆದು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು. ವ್ಯಾಪಾರಿಗಳು ಯೋಸೇಫನನ್ನು ಈಜಿಪ್ಟಿಗೆ ಕೊಂಡೊಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಈ ಪ್ರಕಾರ ಮಿದ್ಯಾನ್ಯರ ವರ್ತಕರು ಹಾದುಹೋಗುತ್ತಿದ್ದಾಗ, ಅವರು ಯೋಸೇಫನನ್ನು ಗುಂಡಿಯಿಂದ ಮೇಲೆತ್ತಿ, ಇಷ್ಮಾಯೇಲರಿಗೆ ಅವನನ್ನು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು. ಅವರು ಯೋಸೇಫನನ್ನು ಈಜಿಪ್ಟಿಗೆ ಕರೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:28
25 ತಿಳಿವುಗಳ ಹೋಲಿಕೆ  

“ಪೂರ್ವಿಕರು ಹೊಟ್ಟೆಕಿಚ್ಚಿನಿಂದ ಯೋಸೇಫನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಚರು. ಅಲ್ಲಿ ದೇವರು ಅವನ ಸಂಗಡ ಇದ್ದು,


ಆತನು ಅವರ ಮುಂದಾಗಿ ಒಬ್ಬನನ್ನು ಕಳುಹಿಸಿದನು; ದಾಸತ್ವಕ್ಕೆ ಮಾರಲ್ಪಟ್ಟ ಯೋಸೇಫನೇ ಅವನು.


ಆಕೆ ಅವನಿಗೆ ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಇವರನ್ನು ಹೆತ್ತಳು.


“ನಾನು ಆತನನ್ನು ಹಿಡಿಯಲು ನಿಮಗೆ ಸಹಾಯಮಾಡಿದರೆ ನನಗೆ ಏನು ಕೊಡುತ್ತೀರಿ?” ಅಂದನು. ಅವರು ಅವನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ತೂಗಿ ಕೊಟ್ಟರು.


ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ತೆಗೆದುಕೊಂಡು ಹೋಗಿ ಐಗುಪ್ತ ದೇಶದ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದರು. ಇವನು ಅರಸನ ಮೈಗಾವಲಿನವರ ದಳಪತಿಯೂ ಆಗಿದ್ದನು.


ಆ ಮೇಲೆ ಅವರು ಊಟಕ್ಕೆ ಕುಳಿತುಕೊಂಡಾಗ ಅವರು ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ, ಇಷ್ಮಾಯೇಲರ ಗುಂಪು ಒಂಟೆಗಳ ಮೇಲೆ ಪರಿಮಳ ದ್ರವ್ಯ, ಸುಗಂಧ ತೈಲ, ರಕ್ತಬೋಳ, ಇವುಗಳನ್ನು ಹೇರಿಕೊಂಡು ಗಿಲ್ಯಾದಿನಿಂದ ಐಗುಪ್ತದೇಶಕ್ಕೆ ಪ್ರಯಾಣಮಾಡುತ್ತಾ ಬರುವುದನ್ನು ಕಂಡರು.


ಅದೇನೆಂದರೆ, “ಇಸ್ರಾಯೇಲ್ ಜನರಿಂದ ಅವನಿಗೆ ನಿರ್ಣಯಿಸಿದಂಥ ಕ್ರಯವಾದ ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡು, ಕರ್ತನು ನನಗೆ ಅಪ್ಪಣೆಮಾಡಿದಂತೆ


ಉಷ್ಟ್ರಸಮೂಹವೂ, ಮಿದ್ಯಾನಿನ ಮತ್ತು ಏಫದ ಪ್ರಾಯದ ಒಂಟೆಗಳೂ ನಿನ್ನಲ್ಲಿ ತುಂಬಿರುವವು; ಅವೆಲ್ಲವೂ ಬಂಗಾರವನ್ನೂ, ಧೂಪವನ್ನೂ ತೆಗೆದುಕೊಂಡು ಶೆಬದಿಂದ ಬಂದು ಯೆಹೋವನ ಸ್ತುತ್ಯಕೃತ್ಯಗಳನ್ನು ಸಾರುವರು.


ನೀನು ಮಿದ್ಯಾನ್ಯರನ್ನು ಸಂಹರಿಸಿದಂತೆ ಇವರನ್ನೂ ಸಂಹರಿಸು. ಕೀಷೋನ್ ಹಳ್ಳದ ಬಳಿಯಲ್ಲಿ ಸೀಸೆರ್, ಯಾಬೀನ್ ಎಂಬುವವರಿಗೆ ಮಾಡಿದಂತೆ, ಇವರಿಗೂ ಮಾಡು.


ಆದರೆ ನಿಮಗೆ ಒಂದು ಬಿನ್ನಹ ಮಾಡುತ್ತೇನೆ; ಪ್ರತಿಯೊಬ್ಬನು ತಾನು ಕೊಳ್ಳೆಹೊಡೆದ ಬಂಗಾರದ ಓಲೆಗಳನ್ನು ನನಗೆ ಕೊಡಲಿ” ಅಂದನು. ಮಿದ್ಯಾನ್ಯರು ಇಷ್ಮಾಯೇಲ್ಯರಾಗಿದ್ದರಿಂದ ಅವರ ಬಳಿಯಲ್ಲಿ ಬಂಗಾರದ ಓಲೆಗಳು ಇದ್ದವು.


ತರುವಾಯ ಇಸ್ರಾಯೇಲ್ಯರು ಗಿದ್ಯೋನನಿಗೆ, “ನೀನು ನಮ್ಮನ್ನು ಮಿದ್ಯಾನ್ಯರ ಕೈಯಿಂದ ಬಿಡಿಸಿದ್ದೀಯಲ್ಲಾ; ನೀನೂ, ನಿನ್ನ ಮಗನೂ, ಮೊಮ್ಮಗನೂ ವಂಶಪಾರಂಪರ್ಯವಾಗಿ ನಮ್ಮ ಮೇಲೆ ಅರಸರಾಗಿರಬೇಕು” ಎಂದರು.


“ನೀನು ಮಿದ್ಯಾನ್ಯರನ್ನು ವೈರಿಯೆಂದು ತಿಳಿದು ಸಂಹರಿಸಬೇಕು.


ಹತವಾದ ಆ ಮಿದ್ಯಾನ್ ಸ್ತ್ರೀಯ ಹೆಸರು ಕೊಜ್ಬೀ, ಅವಳು ಮಿದ್ಯಾನ್ಯರಲ್ಲಿ ಗೋತ್ರ ಪ್ರಧಾನನಾದ ಚೂರ್ ಎಂಬುವನ ಮಗಳು.


ಮಿದ್ಯಾನರ ಯಾಜಕನಿಗೆ ಏಳು ಮಂದಿ ಹೆಣ್ಣು ಮಕ್ಕಳಿದ್ದರು. ಅವರು ಬಂದು ತಮ್ಮ ತಂದೆಯ ಕುರಿ ಮಂದೆಗಳಿಗೆ ನೀರು ಕುಡಿಸುವುದಕ್ಕಾಗಿ, ನೀರನ್ನು ಸೇದಿ ತೊಟ್ಟಿಗಳಲ್ಲಿ ತುಂಬಿಸುತ್ತಿದ್ದರು.


ಯೋಸೇಫನನ್ನು ಕ್ರಯಕ್ಕೆ ತೆಗೆದುಕೊಂಡು ಹೋಗಿದ್ದ ಇಷ್ಮಾಯೇಲರು ಐಗುಪ್ತ ದೇಶಕ್ಕೆ ಹೋದರು. ಅಲ್ಲಿ ಒಬ್ಬ ಐಗುಪ್ತ್ಯನು ಅವನನ್ನು ಅವರಿಂದ ಕ್ರಯಕ್ಕೆ ತೆಗೆದುಕೊಂಡನು. ಇವನು ಫರೋಹನ ಉದ್ಯೋಗಸ್ಥನು, ಐಗುಪ್ತರ ದಂಡಿನ ಮುಖ್ಯಸ್ಥನು ಆಗಿದ್ದ ಪೋಟೀಫರನು ಎಂಬುವನಾಗಿದ್ದನು.


ಯೋಸೇಫನ ಅಣ್ಣತಮ್ಮಂದಿರು ತಂದೆ ಸತ್ತದ್ದನ್ನು ಕಂಡು, “ಒಂದು ವೇಳೆ ಯೋಸೇಫನು ನಮ್ಮನ್ನು ದ್ವೇಷಿಸಿ ನಾವು ಅವನಿಗೆ ಮಾಡಿದ ಎಲ್ಲಾ ಕೇಡಿಗೆ ಪ್ರತಿಯಾಗಿ ನಮಗೆ ಶಿಕ್ಷೆಯನ್ನು ಕೊಡಬಹುದು” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ಏಕೆಂದರೆ ನಾನು ಇಬ್ರಿಯ ದೇಶದವನು. ಕೆಲವರು ನನ್ನನ್ನು ಕದ್ದು ಈ ದೇಶಕ್ಕೆ ತಂದರು. ಇಲ್ಲಿಯೂ ನಾನು ಯಾವ ತಪ್ಪು ಮಾಡದೆ ಸೆರೆಯಲ್ಲಿ ಬಿದ್ದಿರುವೆನು” ಅಂದನು.


ಯಾರಾದರೂ ಒಬ್ಬ ಮನುಷ್ಯನನ್ನು ಅಪಹರಿಸಿಕೊಂಡು ಹೋಗಿ ಮಾರಿದರೆ ಅಥವಾ ಅವನು ಬಂಧಿಸಲ್ಪಟ್ಟಾಗ, ಅಪಹರಿಸಲ್ಪಟ್ಟವನು ಅವನೊಂದಿಗಿದ್ದರೆ ಅವನಿಗೆ ಮರಣಶಿಕ್ಷೆಯಾಗಬೇಕು.


ಐದು ವರ್ಷದ ವಯಸ್ಸಿನಿಂದ ಇಪ್ಪತ್ತು ವರ್ಷದ ವಯಸ್ಸಿನ ವರೆಗೆ ಪುರುಷನಿಗೋಸ್ಕರ ಇಪ್ಪತ್ತು ಶೆಕೆಲ್ ಬೆಳ್ಳಿಯನ್ನು ಮತ್ತು ಸ್ತ್ರೀಗೋಸ್ಕರ ಹತ್ತು ಶೆಕೆಲ್ ಬೆಳ್ಳಿಯನ್ನು ಕೊಡಬೇಕು.


ಈ ಪ್ರಕಾರ ಅವರು ಯೆರೆಮೀಯನನ್ನು ಹಗ್ಗಗಳ ಮೂಲಕ ನೀರು ಸೇದಿಕೊಳ್ಳುವ ಹಾಗೆ ಬಾವಿಯಿಂದ ಮೇಲಕ್ಕೆ ಎತ್ತಿದರು; ಆ ಮೇಲೆ ಯೆರೆಮೀಯನು ಹಿಂದಿನಂತೆ ಕಾರಾಗೃಹದ ಅಂಗಳದಲ್ಲಿ ವಾಸಿಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು