Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 37:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಕನಸಿನಲ್ಲಿ ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು. ಆಗ ನನ್ನ ಸಿವುಡು ಎದ್ದು ನಿಂತಿತು. ನಿಮ್ಮ ಸಿವುಡುಗಳು ಸುತ್ತಲೂ ಬಂದು ನನ್ನ ಸಿವುಡಿಗೆ ಅಡ್ಡಬಿದ್ದದ್ದನ್ನು ಕಂಡೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಈ ಕನಸಿನಲ್ಲಿ ನಾವು ಹೊಲದಲ್ಲಿ ಬೆಳೆಕೊಯ್ದು ಕಂತೆಗಳನ್ನು ಕಟ್ಟುತ್ತಾ ಇದ್ದೆವು. ಆಗ ನನ್ನ ಕಂತೆ ಎದ್ದುನಿಂತಿತು. ನಿಮ್ಮ ಕಂತೆಗಳು ಸುತ್ತಲೂ ಬಂದು ನನ್ನ ಕಂತೆಗೆ ಅಡ್ಡಬಿದ್ದುದನ್ನು ಕಂಡೆ,” ಎಂದು ಹೇಳಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆ ಕನಸಿನಲ್ಲಿ ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು; ಆಗ ನನ್ನ ಸಿವುಡು ಎದ್ದು ನಿಲ್ಲಲು ನಿಮ್ಮ ಸಿವುಡುಗಳು ಸುತ್ತಲೂ ಬಂದು ನನ್ನ ಸಿವುಡಿಗೆ ಅಡ್ಡಬಿದ್ದದ್ದನ್ನು ಕಂಡೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾವೆಲ್ಲರು ಹೊಲದಲ್ಲಿ ಗೋಧಿಯ ಸಿವುಡುಗಳನ್ನು ಕಟ್ಟುತ್ತಿದ್ದೆವು. ಆಗ ನನ್ನ ಸಿವುಡು ಎದ್ದುನಿಂತಿತು; ನನ್ನ ಸಿವುಡಿನ ಸುತ್ತಲೂ ನಿಮ್ಮ ಸಿವುಡುಗಳೆಲ್ಲಾ ಎದ್ದುನಿಂತುಕೊಂಡು ನನ್ನ ಸಿವುಡಿಗೆ ಅಡ್ಡಬಿದ್ದವು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು. ನನ್ನ ಸಿವುಡು ಎದ್ದುನಿಂತಿತು. ಆಗ ನಿಮ್ಮ ಸಿವುಡುಗಳು ತಿರುಗಿ ನನ್ನ ಸಿವುಡಿಗೆ ಅಡ್ಡಬಿದ್ದವು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 37:7
12 ತಿಳಿವುಗಳ ಹೋಲಿಕೆ  

ಯೆಹೂದನೂ ಅವನ ಅಣ್ಣತಮ್ಮಂದಿರೂ ಯೋಸೇಫನ ಮನೆಗೆ ಬಂದಾಗ ಅವನು ಇನ್ನು ಅಲ್ಲೇ ಇದ್ದನು. ಅವರು ಅವನೆದುರಿಗೆ ಅಡ್ಡಬಿದ್ದರು.


ಐಗುಪ್ತ ದೇಶದ ಮೇಲೆ ಅಧಿಕಾರವನ್ನು ನಡಿಸಿ ಜನರಿಗೆ ಧಾನ್ಯವನ್ನು ಮಾರುವವನು ಯೋಸೇಫನೇ ಆಗಿದ್ದನು. ಹೀಗಿರುವುದರಿಂದ ಅವನ ಅಣ್ಣಂದಿರು ಬಂದು ಅವನ ಮುಂದೆಯೇ ಅಡ್ಡಬಿದ್ದರು.


ಯೋಸೇಫನು ಮನೆಗೆ ಬಂದಾಗ, ಅವರು ತಮ್ಮ ಕೈಯಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತಂದು, ಅವನಿಗೆ ಕೊಟ್ಟು, ಅವನ ಮುಂದೆ ಅಡ್ಡಬಿದ್ದರು.


ಯೋಸೇಫನು ಅವರ ವಿಷಯದಲ್ಲಿ ತನಗೆ ಬಿದ್ದ ಕನಸುಗಳನ್ನು ನೆನಪಿಗೆ ತಂದುಕೊಂಡನು. ಅವರಿಗೆ ಅವನು, “ನೀವು ಗೂಢಚಾರರು. ನಮ್ಮ ದೇಶದ ಭದ್ರತೆಯಿಲ್ಲದ ಸ್ಥಳಗಳನ್ನು ನೋಡುವುದಕ್ಕಾಗಿ ಬಂದವರು” ಎಂದು ಹೇಳಿದನು.


ಸಭೆಯೆಂಬ ದೇಹಕ್ಕೆ ಆತನು ತಲೆಯಾಗಿದ್ದಾನೆ, ಆತನೇ ಆದಿಸಂಭೂತನು, ಎಲ್ಲಾದರಲ್ಲಿ ಆತನು ಮೊದಲಿಗನಾಗುವುದಕ್ಕಾಗಿ ಸತ್ತವರೊಳಗಿಂದ ಮೊದಲು ಎದ್ದು ಬಂದವನು ಆತನೇ.


ಆದ್ದರಿಂದ ಸ್ವರ್ಗ ಮರ್ತ್ಯ ಪಾತಾಳಗಳಲ್ಲಿರುವವರೆಲ್ಲರೂ ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ ಅಡ್ಡಬಿದ್ದು,


ತಾವು ತಮ್ಮ ಸೇವಕರಾದ ನಮ್ಮನ್ನು ಕುರಿತು, ‘ನಿಮಗೆ ತಂದೆಯಾಗಲಿ, ತಮ್ಮನಾಗಲಿ ಇದ್ದಾನೋ?’ ಎಂದು ಕೇಳಲು,


ಜನಗಳು ನಿನ್ನನ್ನು ಆರಾಧಿಸಲಿ, ಜನಾಂಗಗಳು ನಿನಗೆ ಅಧೀನವಾಗಲಿ. ನಿನ್ನ ಅಣ್ಣತಮ್ಮಂದಿರಿಗೆ ನೀನು ದೊರೆಯಾಗಿರು, ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವೂ, ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಉಂಟಾಗಲಿ” ಎಂದನು.


ಅವನು ಅವರಿಗೆ, “ನಾನು ಕನಸಿನಲ್ಲಿ ಕಂಡದ್ದನ್ನು ಹೇಳುತ್ತೇನೆ, ದಯವಿಟ್ಟು ಕೇಳಿರಿ.


ಅವರು ಅದಕ್ಕೆ, “ನಿನ್ನ ಸೇವಕನಾದ ನಮ್ಮ ತಂದೆ ಕ್ಷೇಮವಾಗಿದ್ದಾನೆ. ಅವನು ಇನ್ನೂ ಬದುಕಿದ್ದಾನೆ” ಎಂದು ಹೇಳಿ, ತಮ್ಮ ತಲೆಗಳನ್ನು ಬಾಗಿಸಿ ಅವನಿಗೆ ಅಡ್ಡಬಿದ್ದರು.


ಯೆಹೂದನು ಹತ್ತಿರಕ್ಕೆ ಬಂದು, “ನನ್ನ ಒಡೆಯನೇ, ನಿನ್ನ ಸೇವಕನಾದ ನಾನು ಒಂದು ಮಾತನ್ನು ನನ್ನ ಒಡೆಯನಿಗೆ ಬಿಡಿಸಿ ಹೇಳುವುದಕ್ಕೆ ಅಪ್ಪಣೆಯಾಗಬೇಕು. ನಿನ್ನ ದಾಸನ ಮೇಲೆ ಕೋಪಗೊಳ್ಳಬಾರದು. ಏಕೆಂದರೆ ನೀನು ಫರೋಹನಿಗೆ ಸಮಾನನು ಎಂದು ನಾನು ಬಲ್ಲೇ.


ಇದಲ್ಲದೆ ಅಣ್ಣಂದಿರು ತಾವೇ ಬಂದು ಅವನ ಮುಂದೆ ಅಡ್ಡಬಿದ್ದು, “ಇಗೋ ನಾವು ನಿನಗೆ ಗುಲಾಮರು” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು