Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 38:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ತಾಮಾರಳಿಗೆ, “ಮಾವನು ತನ್ನ ಕುರಿಗಳ ಉಣ್ಣೇ ಕತ್ತರಿಸುವುದಕ್ಕೋಸ್ಕರ ತಿಮ್ನಾ ಊರಿಗೆ ಹೋಗುತ್ತಿದ್ದಾನೆ” ಎಂದು ತಿಳಿದು ಬಂದಿತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಮಾವನು ತನ್ನ ಕುರಿಗಳ ಉಣ್ಣೇ ಕತ್ತರಿಸುವುದಕ್ಕಾಗಿ ತಿಮ್ನಾ ಊರಿಗೆ ಹೊರಟಿದ್ದಾರೆಂಬ ಸಮಾಚಾರ ತಾಮಾರಳಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮಾವನು ತನ್ನ ಕುರಿಗಳ ಉಣ್ಣೇ ಕತ್ತರಿಸುವದಕ್ಕೋಸ್ಕರ ತಿಮ್ನಾ ಊರಿಗೆ ಹೋಗುತ್ತಾನೆಂಬ ವರ್ತಮಾನವು ತಾಮಾರಳಿಗೆ ತಿಳಿದು ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಮಾವನು ಉಣ್ಣೆ ಕತ್ತರಿಸುವುದಕ್ಕಾಗಿ ತಿಮ್ನಾ ಊರಿಗೆ ಹೋಗುತ್ತಿರುವುದು ತಾಮಾರಳಿಗೆ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ತಾಮಾರಳಿಗೆ, “ನಿನ್ನ ಮಾವನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವುದಕ್ಕೆ ತಿಮ್ನಾ ಊರಿಗೆ ಹೋಗುತ್ತಿದ್ದಾನೆ,” ಎಂದು ತಿಳಿಸಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 38:13
7 ತಿಳಿವುಗಳ ಹೋಲಿಕೆ  

ಅಲ್ಲಿಂದ ಪಶ್ಚಿಮದಲ್ಲಿರುವ ಸೇಯೀರ್ ಬೆಟ್ಟದ ಕಡೆಗೆ ತಿರುಗಿಕೊಂಡು ಕೆಸಾಲೋನ್ ಎನ್ನಿಸಿಕೊಳ್ಳುವ ಯಾರೀಮ್ ಬೆಟ್ಟದ ಉತ್ತರಮಾರ್ಗವಾಗಿ ಇಳಿಯುತ್ತಾ ಬೇತ್ ಷೆಮೆಷಿಗೂ ಅಲ್ಲಿಂದ ತಿಮ್ನಾ ಊರಿಗೂ ಬಂದು


ಇಜ್ರೇಲ್, ಯೊಗ್ದೆಯಾಮ್, ಜನೋಹ, ಕಯಿನ್, ಗಿಬೆಯಾ, ತಿಮ್ನಾ ಎಂಬ ಹತ್ತು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.


ಸಂಸೋನನು ಗಟ್ಟಾ ಇಳಿದು ತಿಮ್ನಾ ಊರಿಗೆ ಹೋಗಿ ಅಲ್ಲಿನ ಫಿಲಿಷ್ಟಿಯರ ಹೆಣ್ಣುಗಳಲ್ಲಿ ಒಬ್ಬಳನ್ನು ನೋಡಿ, ತಿರುಗಿ ತಂದೆತಾಯಿಗಳ ಬಳಿಗೆ ಬಂದು


ಕರ್ಮೆಲಿನಲ್ಲಿ ಸ್ವಂತ ಸೊತ್ತು ಹೊಂದಿದ್ದ ಒಬ್ಬ ಮನುಷ್ಯನಿದ್ದನು. ಅವನು ಮಾವೋನಿನಲ್ಲಿ ವಾಸಿಸುತ್ತಿದ್ದನು. ಅವನ ಹೆಸರು ನಾಬಾಲ್.


ಯೆಹೂದನ ಸೊಸೆಯಾದ ತಾಮಾರಳು ಅವನಿಂದ ಪೆರೆಚ್ ಮತ್ತು ಜೆರಹ ಎಂಬವರನ್ನು ಹೆತ್ತಳು.


ಆಗ ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವುದಕ್ಕೋಸ್ಕರ ಹೋಗಿದ್ದನು. ಹೀಗಿರುವಲ್ಲಿ ರಾಹೇಲಳು ತನ್ನ ತಂದೆಯ ಮನೆಯಲ್ಲಿದ್ದ ವಿಗ್ರಹಗಳನ್ನು ಕದ್ದುಕೊಂಡಳು.


ನಾಬಾಲನು ಉಣ್ಣೆ ಕತ್ತರಿಸುತ್ತಿದ್ದಾನೆಂಬ ವರ್ತಮಾನವು ಅಲ್ಲಿ ಮರುಭೂಮಿಯಲ್ಲಿದ್ದ ದಾವೀದನಿಗೆ ಮುಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು