ಆದಿಕಾಂಡ 38:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಮಾರ್ಗದಿಂದ ಓರೆಯಾಗಿ ಆಕೆಯ ಬಳಿಗೆ ಹೋಗಿ, “ನಾನು ನಿನ್ನ ಬಳಿಗೆ ಬರಲೇ ಎಂದು ಕೇಳಿದನು” ಆಕೆ, “ನೀನು ನನ್ನಲ್ಲಿ ಬರಬೇಕಾದರೆ, ನನಗೆ ಏನು ಕೊಡುತ್ತೀ?” ಎಂದು ಕೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆಕೆ ವೇಶ್ಯೆ ಎಂದೇ ಭಾವಿಸಿ, ದಾರಿಯಿಂದ ಓರೆಯಾಗಿ, ಆಕೆಯ ಬಳಿಗೆ ಹೋಗಿ, “ಸಂಭೋಗಕ್ಕೆ ಬರುತ್ತೀಯಾ?" ಎಂದು ಕರೆದನು. “ಬರಬೇಕಾದರೆ ಏನು ಕೊಡುತ್ತೀಯಾ?" ಎಂದಳು ಆಕೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಾನು ನಿನ್ನ ಸಂಗಮ ಮಾಡುವದಕ್ಕೆ ಒಪ್ಪುತ್ತೀಯಾ ಅನ್ನಲು ಆಕೆ - ನನ್ನಲ್ಲಿ ಬರಬೇಕಾದರೆ ನೀನು ಏನು ಕೊಡುತ್ತೀ ಎಂದು ಕೇಳಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆದ್ದರಿಂದ ಯೆಹೂದನು ಆಕೆಯ ಬಳಿಗೆ ಹೋಗಿ, “ನಾನು ನಿನ್ನನ್ನು ಕೂಡಬಹುದೇ?” ಎಂದು ಕೇಳಿದನು. (ಆಕೆ ತನ್ನ ಸೊಸೆಯಾದ ತಾಮಾರಳೆಂದು ಯೆಹೂದನಿಗೆ ತಿಳಿದಿರಲಿಲ್ಲ.) ಅವಳು “ನೀನು ನನಗೆ ಏನು ಕೊಡುವೆ?” ಎಂದು ಕೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಮಾರ್ಗದಿಂದ ಆಕೆಯ ಕಡೆಗೆ ತಿರುಗಿಕೊಂಡು ಅವನು, “ನನ್ನನ್ನು ನಿನ್ನ ಬಳಿಗೆ ಬರಗೊಡಿಸು,” ಎಂದನು. ಏಕೆಂದರೆ ಅವಳು ತನ್ನ ಸೊಸೆಯೆಂದು ಅವನಿಗೆ ತಿಳಿದಿರಲಿಲ್ಲ. ಅವಳು, “ನೀನು ನನ್ನ ಬಳಿಗೆ ಬಂದರೆ, ನನಗೆ ಏನು ಕೊಡುವೆ?” ಎಂದಳು. ಅಧ್ಯಾಯವನ್ನು ನೋಡಿ |