ಆದಿಕಾಂಡ 38:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವನು, “ಏನು ಒತ್ತೇ ಇಡಲಿ” ಎಂದು ಕೇಳಿದನು. ಆಗ ಆಕೆಯು “ನಿನ್ನ ಮುದ್ರೆ, ನಿನ್ನ ದಾರ, ನಿನ್ನ ಕೈಕೋಲು ಈ ಮೂರನ್ನು ಒತ್ತೆಯಾಗಿ ಇಡು” ಅಂದಳು. ಅವನು ಅವುಗಳನ್ನು ಕೊಟ್ಟು ಆಕೆಯನ್ನು ಸಂಗಮಿಸಲು ಆಕೆಯು ಅವನಿಗೆ ಗರ್ಭಿಣಿಯಾದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 “ಏನು ಒತ್ತೆಯಿಡಬೇಕು?” ಎಂದು ಅವನು ಕೇಳಲು ಆಕೆ, “ನಿನ್ನ ಮುದ್ರೆ ಉಂಗುರ, ಅದರ ದಾರ ಮತ್ತು ನಿನ್ನ ಕೈಕೋಲು, ಈ ಮೂರನ್ನೂ ಇಡು,” ಎಂದಳು. ಅವನು ಅವುಗಳನ್ನು ಕೊಟ್ಟು ಆಕೆಯನ್ನು ಸಂಭೋಗಿಸಿದನು. ಆಕೆ ಅವನಿಗೆ ಗರ್ಭವತಿ ಆದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅವನು - ಏನು ಒತ್ತೆ ಇಡಲಿ ಎಂದು ಕೇಳಲು ಆಕೆ - ನಿನ್ನ ಮುದ್ರೆ, ದಾರ, ಕೈಕೋಲು ಈ ಮೂರನ್ನು ಇಡು ಅಂದಳು. ಅವನು ಅವುಗಳನ್ನು ಕೊಟ್ಟು ಆಕೆಯ ಸಂಗಮ ಮಾಡಲು ಆಕೆ ಅವನಿಗೆ ಬಸುರಾದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಯೆಹೂದನು, “ಏನು ಒತ್ತೆಯಿಡಲಿ?” ಎಂದು ಕೇಳಿದನು. ತಾಮಾರಳು, “ನಿನ್ನ ಪತ್ರಗಳ ಮೇಲೆ ಉಪಯೋಗಿಸುವ ನಿನ್ನ ಮುದ್ರೆಯನ್ನೂ ಅದರ ದಾರವನ್ನೂ ಮತ್ತು ನಿನ್ನ ಊರುಗೋಲನ್ನೂ ಕೊಡು” ಎಂದು ಉತ್ತರಿಸಿದಳು. ಯೆಹೂದನು ಅವುಗಳನ್ನು ಆಕೆಗೆ ಕೊಟ್ಟನು. ಯೆಹೂದನು ಆಕೆಯನ್ನು ಕೂಡಿದನು; ಅವಳು ಗರ್ಭಿಣಿಯಾದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅದಕ್ಕೆ ಅವನು, “ನಿನಗೆ ಕೊಡತಕ್ಕ ಈಡು ಏನು?” ಎಂದಾಗ. ಅವಳು, “ನಿನ್ನ ಮುದ್ರೆಯೂ ನಿನ್ನ ದಾರವೂ ನಿನ್ನ ಕೈಯಲ್ಲಿರುವ ಕೋಲೂ,” ಎಂದಳು. ಆಗ ಅವನು ಅವುಗಳನ್ನು ಆಕೆಗೆ ಕೊಟ್ಟು, ಆಕೆಯನ್ನು ಕೂಡಿದನು. ಹೀಗೆ ಅವಳು ಅವನಿಂದ ಗರ್ಭಿಣಿಯಾದಳು. ಅಧ್ಯಾಯವನ್ನು ನೋಡಿ |