ಆದಿಕಾಂಡ 38:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅದಕ್ಕೆ ಯೆಹೂದನು, “ನಾವು ಅಪಹಾಸ್ಯಕ್ಕೆ ಒಳಗಾಗದ ಹಾಗೆ ಆ ವಸ್ತುಗಳನ್ನು ಅವಳೇ ಇಟ್ಟುಕೊಳ್ಳಲಿ. ನಾನಂತೂ ಹೋತಮರಿಯನ್ನು ಕಳುಹಿಸಿಕೊಟ್ಟೆನು. ಅವಳು ನಿನಗೆ ಸಿಕ್ಕಲಿಲ್ಲ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅದಕ್ಕೆ ಯೆಹೂದನು, “ಇನ್ನು ನಾವು ಪರಿಹಾಸ್ಯಕ್ಕೆ ಗುರಿಯಾದೇವು; ನಾನಿಟ್ಟ ಒತ್ತೆಯನ್ನು ಅವಳೇ ಇಟ್ಟುಕೊಳ್ಳಲಿ; ನಾನಂತೂ ಹೋತಮರಿಯನ್ನು ಕಳಿಸಿದ್ದಾಯಿತು; ನಿನ್ನಿಂದಲು ಅವಳನ್ನು ಕಂಡುಹಿಡಿಯಲಾಗಲಿಲ್ಲ,” ಎಂದು ಸುಮ್ಮನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅದಕ್ಕೆ ಯೆಹೂದನು - ಇನ್ನು ಹಾಸ್ಯಕ್ಕೆ ಗುರಿಯಾದೇವು; ನಾನಿಟ್ಟ ಒತ್ತೆಯನ್ನು ಅವಳೇ ಇಟ್ಟುಕೊಳ್ಳಲಿ; ನಾನಂತೂ ಹೋತಮರಿಯನ್ನು ಕಳುಹಿಸಿಕೊಟ್ಟೆನು; ಅವಳು ನಿನಗೆ ಸಿಕ್ಕಲಿಲ್ಲವಷ್ಟೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಅದಕ್ಕೆ ಯೆಹೂದನು, “ಆಕೆ ಆ ವಸ್ತುಗಳನ್ನು ಇಟ್ಟುಕೊಳ್ಳಲಿ. ಜನರು ನಮ್ಮನ್ನು ಕಂಡು ನಗುವುದು ನನಗೆ ಇಷ್ಟವಿಲ್ಲ. ನಾನು ಅವಳಿಗೆ ಆಡನ್ನು ಕೊಡಲು ಪ್ರಯತ್ನಿಸಿದೆ. ಆದರೆ ಅವಳು ನಿನಗೆ ಸಿಕ್ಕಲಿಲ್ಲವಷ್ಟೇ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆಗ ಯೆಹೂದನು, “ನಾವು ಅಪಹಾಸ್ಯಕ್ಕೆ ಒಳಗಾಗದ ಹಾಗೆ ಅವಳು ಅದನ್ನು ತೆಗೆದುಕೊಂಡು ಹೋಗಲಿ, ಈ ಮೇಕೆಯ ಮರಿಯನ್ನು ನಾನು ಕಳುಹಿಸಿದೆನು, ಆದರೆ ಆಕೆಯು ನಿನಗೆ ಸಿಕ್ಕಲಿಲ್ಲ,” ಎಂದನು. ಅಧ್ಯಾಯವನ್ನು ನೋಡಿ |