ಆದಿಕಾಂಡ 39:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೋಸೇಫನನ್ನು ಕ್ರಯಕ್ಕೆ ತೆಗೆದುಕೊಂಡು ಹೋಗಿದ್ದ ಇಷ್ಮಾಯೇಲರು ಐಗುಪ್ತ ದೇಶಕ್ಕೆ ಹೋದರು. ಅಲ್ಲಿ ಒಬ್ಬ ಐಗುಪ್ತ್ಯನು ಅವನನ್ನು ಅವರಿಂದ ಕ್ರಯಕ್ಕೆ ತೆಗೆದುಕೊಂಡನು. ಇವನು ಫರೋಹನ ಉದ್ಯೋಗಸ್ಥನು, ಐಗುಪ್ತರ ದಂಡಿನ ಮುಖ್ಯಸ್ಥನು ಆಗಿದ್ದ ಪೋಟೀಫರನು ಎಂಬುವನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅತ್ತ ಜೋಸೆಫನನ್ನು ತೆಗೆದುಕೊಂಡುಹೋದ ಇಷ್ಮಾಯೇಲ್ಯರು ಈಜಿಪ್ಟ್ ದೇಶವನ್ನು ಸೇರಿದಾಗ ಅವನನ್ನು ಈಜಿಪ್ಟಿನ ಪೋಟೀಫರ್ ಎಂಬವನಿಗೆ ಮಾರಿಬಿಟ್ಟರು. ಪೋಟೀಫರನು ಫರೋಹನ ಆಸ್ಥಾನದ ಒಬ್ಬ ಉದ್ಯೋಗಿ ಮತ್ತು ಅಂಗರಕ್ಷಕರ ದಳಪತಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೋಸೇಫನನ್ನು ತೆಗೆದುಕೊಂಡುಹೋದ ಇಷ್ಮಾಯೇಲ್ಯರು ಐಗುಪ್ತದೇಶಕ್ಕೆ ಸೇರಿದಾಗ ಒಬ್ಬ ಐಗುಪ್ತದವನು ಅವನನ್ನು ಅವರಿಂದ ಕ್ರಯಕ್ಕೆ ತೆಗೆದುಕೊಂಡನು; ಇವನು ಯಾರಂದರೆ ಫರೋಹನ ಉದ್ಯೋಗಸ್ಥನೂ ಮೈಗಾವಲಿನವರ ದಳವಾಯಿಯೂ ಆಗಿದ್ದ ಪೋಟೀಫರನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೋಸೇಫನನ್ನು ಖರೀದಿಮಾಡಿದ ವ್ಯಾಪಾರಿಗಳು ಅವನನ್ನು ಈಜಿಪ್ಟಿಗೆ ತೆಗೆದುಕೊಂಡು ಬಂದು ಫರೋಹನ ಕಾವಲುಗಾರರ ನಾಯಕನಾದ ಪೋಟೀಫರನಿಗೆ ಮಾರಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೋಸೇಫನನ್ನು ಕರೆದುಕೊಂಡುಹೋದ ಇಷ್ಮಾಯೇಲರು ಈಜಿಪ್ಟಿಗೆ ಸೇರಿದಾಗ ಅವನನ್ನು ಈಜಿಪ್ಟಿನ ಪೋಟೀಫರ್ ಎಂಬವನಿಗೆ ಮಾರಿಬಿಟ್ಟರು. ಪೋಟೀಫರನು ಫರೋಹನ ಉದ್ಯೋಗಸ್ಥನೂ ಮೈಗಾವಲಿನ ದಳಪತಿಯೂ ಆಗಿದ್ದನು. ಅಧ್ಯಾಯವನ್ನು ನೋಡಿ |