Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 39:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವಳು ಯೋಸೇಫನ ಸಂಗಡ ಪ್ರತಿದಿನವೂ ಈ ಮಾತನ್ನು ಆಡಿದ್ದಾಗ್ಯೂ ಅವನು ಅದಕ್ಕೆ ಕಿವಿಗೊಡದೆ ಆಕೆಯನ್ನು ಮೋಹಿಸುವುದಕ್ಕಾಗಲಿ, ಆಕೆಯ ಬಳಿಯಲ್ಲಿರುವುದಕ್ಕಾಗಲೀ ಒಪ್ಪಿಕೊಳ್ಳಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಕೆ ಜೋಸೆಫನ ಸಂಗಡ ದಿನದಿನವೂ ಅದೇ ಮಾತನ್ನು ಎತ್ತುತ್ತಿದ್ದಳು. ಆದರೆ ಅವನು ಅವಳಿಗೆ ಕಿವಿಗೊಡಲಿಲ್ಲ. ಇವಳ ಸಂಸರ್ಗಕ್ಕಾಗಲಿ ಅವಳ ಬಳಿ ಇರುವುದಕ್ಕಾಗಲಿ ಒಪ್ಪಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಕೆ ಯೋಸೇಫನ ಸಂಗಡ ಪ್ರತಿ ದಿನವೂ ಈ ಮಾತನ್ನು ಆಡಿದಾಗ್ಯೂ ಅವನು ಅದಕ್ಕೆ ಕಿವಿಗೊಡದೆ ಆಕೆಯಲ್ಲಿ ಸಂಗಮಮಾಡುವದಕ್ಕಾಗಲಿ ಆಕೆಯ ಬಳಿಯಲ್ಲಿರುವದಕ್ಕಾಗಲಿ ಒಪ್ಪಿಕೊಳ್ಳಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆ ಸ್ತ್ರೀಯು ಪ್ರತಿದಿನವೂ ಯೋಸೇಫನನ್ನು ಒತ್ತಾಯಿಸಿದಳು. ಆದರೆ ಯೋಸೇಫನು ಆಕೆಯೊಂದಿಗೆ ಮಲಗಿಕೊಳ್ಳಲು ಒಪ್ಪಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವಳು ಪ್ರತಿದಿನ ಯೋಸೇಫನ ಸಂಗಡ ಮಾತನಾಡಿದರೂ, ಅವನು ಅವಳ ಕೂಡ ಮಲಗುವುದಕ್ಕಾಗಲಿ, ಅವಳ ಹತ್ತಿರ ಇರುವುದಕ್ಕಾಗಲಿ ಒಪ್ಪಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 39:10
21 ತಿಳಿವುಗಳ ಹೋಲಿಕೆ  

ಆದರೆ ಅವನು ಒಪ್ಪದೆ, “ನನ್ನ ದಣಿಯು ತನ್ನ ಆಸ್ತಿಯನ್ನೆಲ್ಲಾ ನನ್ನ ವಶಕ್ಕೆ ಒಪ್ಪಿಸಿರುವುದಲ್ಲದೆ ನಾನು ಇಲ್ಲಿ ಇರುವುದರಿಂದ ಮನೆಯೊಳಗೆ ನಡೆಯುವ ಯಾವ ಕೆಲಸವನ್ನೂ ಚಿಂತಿಸದೇ ಇದ್ದಾನೆ.


ಪ್ರಿಯರೇ, ಪ್ರವಾಸಿಗಳು ಮತ್ತು ಪರದೇಶಸ್ಥರು ಆಗಿರುವ ನೀವು ನಿಮ್ಮ ಆತ್ಮದ ವಿರುದ್ಧವಾಗಿ ಯುದ್ಧ ಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ನೀನು ಯೌವನದ ಮೋಹಗಳಿಗೆ ದೂರವಾಗಿರು. ಶುದ್ಧಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳುವವರ ಸಂಗಡ ನೀತಿ, ನಂಬಿಕೆ, ಪ್ರೀತಿ ಮತ್ತು ಸಮಾಧಾನಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.


ಸಕಲವಿಧವಾದ ಕೆಟ್ಟತನಕ್ಕೆ ದೂರವಾಗಿರಿ.


ಮೋಸಹೋಗಬೇಡಿರಿ; “ಕೆಟ್ಟ ಸಹವಾಸವು ಸದಾಚಾರವನ್ನು ಕೆಡಿಸುತ್ತವೆ.”


ಜಾರತ್ವವನ್ನು ಬಿಟ್ಟು ದೂರ ಓಡಿಹೋಗಿರಿ. “ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹದ ಹೊರಗಿವೆ”, ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.


ಸೂಳೆಯು ಆಳವಾದ ಹಳ್ಳ, ಜಾರಸ್ತ್ರೀಯು ಇಕ್ಕಟ್ಟಾದ ಗುಂಡಿ.


ಜಾರಸ್ತ್ರೀಯ ಬಾಯಿ ಆಳವಾದ ಹಳ್ಳ, ಯೆಹೋವನಿಗೆ ಸಿಟ್ಟನ್ನೆಬ್ಬಿಸಿದವನು ಅದರಲ್ಲಿ ಬೀಳುವನು.


ಅವು ಜಾರಳಿಂದ ಮತ್ತು ಸವಿಮಾತನಾಡುವ ಪರಸ್ತ್ರೀಯಿಂದ ನಿನ್ನನ್ನು ರಕ್ಷಿಸುವವು.


ನಿನ್ನ ಮಾರ್ಗವು ಅವಳಿಗೆ ದೂರವಾಗಿರಲಿ ಅವಳ ಮನೆಬಾಗಿಲ ಹತ್ತಿರ ಹೋದೆಯಾ, ಎಚ್ಚರಿಕೆ!


ವೇಶ್ಯಸ್ತ್ರೀಯ ತುಟಿಗಳಲ್ಲಾದರೋ ಜೇನುಗರೆಯುವುದು, ಅವಳ ಮಾತು ಎಣ್ಣೆಗಿಂತಲೂ ನಯವಾಗಿದೆ.


ವಿವೇಕವು ನಿನ್ನನ್ನು ಜಾರಳಿಂದ ಅಂದರೆ ಸವಿಮಾತನಾಡುವ ಪರಸ್ತ್ರೀಯಿಂದ ತಪ್ಪಿಸುವುದು.


ಮಗನೇ, ಅವರೊಡನೆ ದಾರಿಯಲ್ಲಿ ನಡೆಯಬಾರದು, ಅವರ ಮಾರ್ಗದಲ್ಲಿ ನೀನು ಹೆಜ್ಜೆಯಿಡಬೇಡ.


“ಮೂಢನಾಗಿರುವವನು ಈ ಕಡೆಗೆ ತಿರುಗಲಿ” ಎಂದು ಕೂಗಿ,


ಅವಳು ತನ್ನ ಮನೆಯ ಬಾಗಿಲಿನಲ್ಲಿ, ಪಟ್ಟಣದ ರಾಜಮಾರ್ಗಗಳಲ್ಲಿ ಪೀಠದ ಮೇಲೆ ಕುಳಿತುಕೊಂಡವಳಾಗಿ,


ಅವನನ್ನು ಹಿಡಿದು, ಮುದ್ದಾಡಿ ನಾಚಿಕೆಗೆಟ್ಟವಳಾಗಿ,


ಆದ್ದರಿಂದ ಯೌವನ ಪ್ರಾಯದ ವಿಧವೆಯರು ಮದುವೆಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯನ್ನು ನಿರ್ವಹಿಸುವವರಾಗಿರುವುದು ನನಗೆ ಒಳ್ಳೆಯದಾಗಿ ತೋಚುತ್ತದೆ. ಹಾಗೆ ಮಾಡುವುದರಿಂದ ವಿರೋಧಿಗಳ ನಿಂದೆಗೆ ಆಸ್ಪದಕೊಡದೆ ಇರುವರು.


ಈ ಮನೆಯಲ್ಲಿ ನನಗಿಂತ ಯಾರೂ ದೊಡ್ಡವರಲ್ಲ. ನೀನು ಅವನ ಧರ್ಮಪತ್ನಿಯಾದುದರಿಂದ ನಿನ್ನನ್ನು ಮಾತ್ರ ನನಗೆ ಅಧೀನ ಮಾಡಲಿಲ್ಲ. ಹೀಗಿರುವಲ್ಲಿ ನಾನು ಇಂಥಾ ಮಹಾ ದುಷ್ಟ ಕಾರ್ಯವನ್ನು ಮಾಡಿ ದೇವರಿಗೆ ವಿರೋಧವಾಗಿ ಹೇಗೆ ಪಾಪ ಮಾಡಲಿ?” ಎಂದು ತನ್ನ ದಣಿಯ ಹೆಂಡತಿಗೆ ಉತ್ತರ ಹೇಳಿದನು.


ಹೀಗಿರಲು ಒಂದು ದಿನ ಅವನು ತನ್ನ ಕೆಲಸದ ಮೇಲೆ ಮನೆಗೆ ಬಂದಾಗ ಮನೆಯೊಳಗೆ ಯಾವ ಸೇವಕರೂ ಇರಲಿಲ್ಲ.


ಹೌದು, ಕಳ್ಳನಂತೆ ಹೊಂಚುಹಾಕುತ್ತಾಳೆ, ಜನರಲ್ಲಿ ದ್ರೋಹಿಗಳನ್ನು ಹೆಚ್ಚಿಸುತ್ತಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು