Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 39:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಕೆ ಅವನ ಬಟ್ಟೆಯನ್ನು ಹಿಡಿದುಕೊಂಡು, “ನನ್ನೊಂದಿಗೆ ಸಂಗಮಿಸಲು ಬಾ” ಎಂದು ಕರೆಯಲು, ಅವನು ತನ್ನ ಬಟ್ಟೆಯನ್ನು ಆಕೆಯ ಕೈಯಲ್ಲೇ ಬಿಟ್ಟು ತಪ್ಪಿಸಿಕೊಂಡು ಹೊರಗೆ ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ಬಟ್ಟೆಯನ್ನು ನನ್ನ ಕೈಯಲ್ಲಿ ಬಿಟ್ಟು ತಪ್ಪಿಸಿಕೊಂಡು ಹೋಗಿಬಿಟ್ಟನಲ್ಲಾ!” ಎಂದುಕೊಂಡ ಆಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಕೆ ಅವನ ಬಟ್ಟೆಯನ್ನು ಹಿಡಿದುಕೊಂಡು - ನನ್ನ ಸಂಗಮಕ್ಕೆ ಬಾ ಅನ್ನಲು ಅವನು ತನ್ನ ಬಟ್ಟೆಯನ್ನು ಆಕೆಯ ಕೈಯಲ್ಲೇ ಬಿಟ್ಟು ತಪ್ಪಿಸಿಕೊಂಡು ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅವನ ಧಣಿಯ ಹೆಂಡತಿಯು ಅವನ ಮೇಲಂಗಿಯನ್ನು ಹಿಡಿದುಕೊಂಡು, “ಬಾ ನನ್ನೊಂದಿಗೆ ಮಲಗಿಕೊ” ಎಂದು ಕರೆದಳು. ಕೂಡಲೇ ಯೋಸೇಫನು ತನ್ನ ಮೇಲಂಗಿಯನ್ನೇ ಬಿಟ್ಟು ಅಲ್ಲಿಂದ ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಆಕೆಯು ಅವನ ಬಟ್ಟೆಯನ್ನು ಹಿಡಿದುಕೊಂಡು, “ನನ್ನ ಸಂಗಡ ಮಲಗು,” ಎಂದಳು. ಆದರೆ ಅವನು ತನ್ನ ವಸ್ತ್ರವನ್ನು ಅವಳ ಕೈಯಲ್ಲಿ ಬಿಟ್ಟು ಹೊರಗೆ ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 39:12
16 ತಿಳಿವುಗಳ ಹೋಲಿಕೆ  

ನೀನು ಯೌವನದ ಮೋಹಗಳಿಗೆ ದೂರವಾಗಿರು. ಶುದ್ಧಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳುವವರ ಸಂಗಡ ನೀತಿ, ನಂಬಿಕೆ, ಪ್ರೀತಿ ಮತ್ತು ಸಮಾಧಾನಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.


ಪ್ರಿಯರೇ, ಪ್ರವಾಸಿಗಳು ಮತ್ತು ಪರದೇಶಸ್ಥರು ಆಗಿರುವ ನೀವು ನಿಮ್ಮ ಆತ್ಮದ ವಿರುದ್ಧವಾಗಿ ಯುದ್ಧ ಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಆಗ ಮರಣಕ್ಕಿಂತ ಹೆಚ್ಚು ವಿಷವೊಂದು ಕಂಡುಬಂತು. ಯಾವುದೆಂದರೆ ಕೆಟ್ಟ ಹೆಂಗಸೇ. ಅವಳ ಹೃದಯವು ಉರುಲುಗಳೂ, ಬಲೆಗಳೂ, ಅವಳ ತೋಳುಗಳು ಸಂಕೋಲೆಗಳು. ದೇವರು ಒಲಿದವನು ಅವಳಿಂದ ತಪ್ಪಿಸಿಕೊಳ್ಳುವನು. ಆದರೆ ಪಾಪಿಯು ಅವಳ ಕೈಗೆ ಸಿಕ್ಕಿಬೀಳುವನು.


ಬೇಟೆಗಾರನ ಕೈಯಿಂದ ಜಿಂಕೆಯು ಓಡುವಂತೆಯೂ, ಪಕ್ಷಿಯು ಹಾರಿ ಹೋಗುವ ಹಾಗೂ ತಪ್ಪಿಸಿಕೋ.


ನಿನ್ನ ಮಾರ್ಗವು ಅವಳಿಗೆ ದೂರವಾಗಿರಲಿ ಅವಳ ಮನೆಬಾಗಿಲ ಹತ್ತಿರ ಹೋದೆಯಾ, ಎಚ್ಚರಿಕೆ!


ಮೋಸಹೋಗಬೇಡಿರಿ; “ಕೆಟ್ಟ ಸಹವಾಸವು ಸದಾಚಾರವನ್ನು ಕೆಡಿಸುತ್ತವೆ.”


ಅವಳು ಯೋಸೇಫನ ಸಂಗಡ ಪ್ರತಿದಿನವೂ ಈ ಮಾತನ್ನು ಆಡಿದ್ದಾಗ್ಯೂ ಅವನು ಅದಕ್ಕೆ ಕಿವಿಗೊಡದೆ ಆಕೆಯನ್ನು ಮೋಹಿಸುವುದಕ್ಕಾಗಲಿ, ಆಕೆಯ ಬಳಿಯಲ್ಲಿರುವುದಕ್ಕಾಗಲೀ ಒಪ್ಪಿಕೊಳ್ಳಲೇ ಇಲ್ಲ.


ಆದರೆ ಅವನು ಒಪ್ಪದೆ, “ನನ್ನ ದಣಿಯು ತನ್ನ ಆಸ್ತಿಯನ್ನೆಲ್ಲಾ ನನ್ನ ವಶಕ್ಕೆ ಒಪ್ಪಿಸಿರುವುದಲ್ಲದೆ ನಾನು ಇಲ್ಲಿ ಇರುವುದರಿಂದ ಮನೆಯೊಳಗೆ ನಡೆಯುವ ಯಾವ ಕೆಲಸವನ್ನೂ ಚಿಂತಿಸದೇ ಇದ್ದಾನೆ.


ಮಗನೇ, ಅವರೊಡನೆ ದಾರಿಯಲ್ಲಿ ನಡೆಯಬಾರದು, ಅವರ ಮಾರ್ಗದಲ್ಲಿ ನೀನು ಹೆಜ್ಜೆಯಿಡಬೇಡ.


ಸೌಲನು ಅವನ ಮೇಲಂಗಿಯ ಅಂಚನ್ನು ಹಿಡಿದು ಎಳೆದನು; ಅದು ಹರಿದುಹೋಯಿತು.


ಹೀಗಿರಲು ಒಂದು ದಿನ ಅವನು ತನ್ನ ಕೆಲಸದ ಮೇಲೆ ಮನೆಗೆ ಬಂದಾಗ ಮನೆಯೊಳಗೆ ಯಾವ ಸೇವಕರೂ ಇರಲಿಲ್ಲ.


ಅವನು ತನ್ನ ಬಟ್ಟೆಯನ್ನು ಅವಳ ಕೈಯಲ್ಲಿ ಬಿಟ್ಟು ತಪ್ಪಿಸಿಕೊಂಡು ಹೋದದ್ದನ್ನು ಆಕೆಯು ನೋಡಿ,


ಕೂಡಲೆ ಅವನು ಆಕೆಯನ್ನು ಹಿಡಿದು “ನನ್ನ ತಂಗಿಯೇ ಬಂದು ನನ್ನ ಸಂಗಡ ಮಲಗಿಕೋ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು