Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 39:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಮನೆಯ ಸೇವಕರನ್ನು ಕರೆದು ಅವರಿಗೆ, “ನೋಡಿರಿ, ನನ್ನ ಯಜಮಾನನು ಒಬ್ಬ ಇಬ್ರಿಯನನ್ನು ನಮ್ಮೊಳಗೆ ಸೇರಿಸಿ ನಮ್ಮನ್ನು ಅವಮಾನಕ್ಕೆ ಗುರಿಮಾಡಿದ್ದಾನೆ. ಅವನು ನನ್ನನ್ನು ಮಾನಭಂಗಪಡಿಸುವುದಕ್ಕೆ ನನ್ನ ಹತ್ತಿರ ಬಂದನು. ನಾನು ಗಟ್ಟಿಯಾಗಿ ಕೂಗಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ನೋಡಿ, ನನ್ನ ಯಜಮಾನರು ಮಾಡಿರುವ ಕೆಲಸ, ಒಬ್ಬ ಹಿಬ್ರಿಯನನ್ನು ಮನೆಗೆ ಸೇರಿಸಿಕೊಂಡು ನಮ್ಮನ್ನು ಅವಮಾನಕ್ಕೆ ಗುರಿಮಾಡಿದ್ದಾರೆ. ಅವನು ಅತ್ಯಾಚಾರಕ್ಕಾಗಿ ನನ್ನ ಹತ್ತಿರಕ್ಕೆ ಬಂದ; ನಾನು ಗಟ್ಟಿಯಾಗಿ ಕೂಗಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಕರೆದು ಅವರಿಗೆ - ನೋಡಿರಿ, ನನ್ನ ಯಜಮಾನರು ಒಬ್ಬ ಇಬ್ರಿಯನನ್ನು ನಮ್ಮೊಳಗೆ ಸೇರಿಸಿ ನಮ್ಮನ್ನು ಅವಮಾನಕ್ಕೆ ಗುರಿಮಾಡಿದ್ದಾರೆ. ಅವನು ನನ್ನನ್ನು ಮಾನಭಂಗಪಡಿಸುವದಕ್ಕೆ ನನ್ನ ಹತ್ತಿರ ಬಂದನು. ನಾನು ಗಟ್ಟಿಯಾಗಿ ಕೂಗಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಮನೆಯ ಹೊರಗಿದ್ದ ಸೇವಕರನ್ನು ಕರೆದು, “ನೋಡಿ, ನಮಗೆ ಅವಮಾನ ಮಾಡುವುದಕ್ಕಾಗಿ ಈ ಇಬ್ರಿಯ ಗುಲಾಮನನ್ನು ಇಲ್ಲಿಗೆ ತರಲಾಗಿದೆ. ಅವನು ಮನೆಯೊಳಗೆ ಬಂದು ನನ್ನ ಮೇಲೆ ಬಲಾತ್ಕಾರ ಮಾಡಲು ಪ್ರಯತ್ನಿಸಿದ. ಆಗ ನಾನು ಗಟ್ಟಿಯಾಗಿ ಕೂಗಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ತನ್ನ ಮನೆಯ ಸೇವಕರನ್ನು ಕರೆದು ಅವರಿಗೆ, “ನೋಡಿರಿ, ನಮ್ಮನ್ನು ಅವಮಾನ ಮಾಡುವುದಕ್ಕೆ ಈ ಹಿಬ್ರಿಯನು ನಮ್ಮಲ್ಲಿಗೆ ಬಂದಿದ್ದಾನೆ. ಅವನು ನನ್ನ ಮೇಲೆ ಅತ್ಯಾಚಾರಮಾಡುವುದಕ್ಕೆ ನನ್ನ ಹತ್ತಿರ ಬಂದನು. ಆಗ ನಾನು ಗಟ್ಟಿಯಾಗಿ ಕೂಗಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 39:14
21 ತಿಳಿವುಗಳ ಹೋಲಿಕೆ  

ತಪ್ಪುಮಾಡಿ ಗುದ್ದು ತಿನ್ನುವುದರಲ್ಲಿ ನೀವು ಸಹಿಸಿಕೊಂಡರೆ ಅದರಿಂದೇನು ಕೀರ್ತಿ? ಆದರೆ ಒಳ್ಳೆಯದನ್ನು ಮಾಡಿ ಬಾಧೆಪಡುವುದರಲ್ಲಿ ನೀವು ಸಹಿಸಿಕೊಂಡರೆ ಅದು ದೇವರ ಮುಂದೆ ಶ್ಲಾಘ್ಯವಾಗಿದೆ.


“ಇವನು ತಾನೇ ಕ್ರಿಸ್ತನು, ಅರಸನಾಗಿದ್ದೇನೆಂದು ಹೇಳುತ್ತಾ, ಕೈಸರನಿಗೆ ಸುಂಕ ಕೊಡಬಾರದೆಂದು ಬೋಧಿಸುತ್ತಾ, ನಮ್ಮ ದೇಶದವರ ಮನಸ್ಸು ಕೆಡಿಸುವುದನ್ನು ನಾವು ಕಂಡಿದ್ದೇವೆ” ಎಂಬುದಾಗಿ ಆತನ ಮೇಲೆ ದೂರು ಹೇಳುವುದಕ್ಕೆ ತೊಡಗಿದರು.


ಆಗ ಮುಖ್ಯಯಾಜಕರೂ ಹಿರೀಸಭೆಯವರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನ ಮೇಲೆ ಸುಳ್ಳುಸಾಕ್ಷಿಯನ್ನು ಹುಡುಕಿದರು; ಆದರೆ ಬಹು ಮಂದಿ ಸುಳ್ಳುಸಾಕ್ಷಿಗಳು ಮುಂದೆ ಬಂದರೂ ಏನೂ ಸಿಕ್ಕಲಿಲ್ಲ.


“ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ ಹಿಂಸೆಪಡಿಸಿ ನಿಮ್ಮ ಮೇಲೆ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು.


ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ, ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ” ಎಂದು ಯೆಹೋವನು ಅನ್ನುತ್ತಾನೆ.


ಧರ್ಮವನ್ನರಿತು ನನ್ನ ಉಪದೇಶವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ ಕಿವಿಗೊಡಿರಿ, ಮನುಷ್ಯರ ದೂರಿಗೆ ಹೆದರಬೇಡಿರಿ, ಅವರ ದೂಷಣೆಗೆ ಅಂಜದಿರಿ.


ಹೊಟ್ಟೆಯಲ್ಲಿ ಹಗೆಯನ್ನಿಟ್ಟುಕೊಂಡವನು ಸುಳ್ಳುಗಾರ, ಚಾಡಿಗಾರನು ಜ್ಞಾನಹೀನ.


ವಂಚಿಸುವ ನಾಲಿಗೆಯೇ, ದೇವರು ನಿನಗೇನು ಕೊಡಬೇಕು? ಯಾವ ಹೆಚ್ಚಿನ ಶಿಕ್ಷೆಯನ್ನು ಒದಗಿಸಬೇಕು?


ಶತ್ರುಗಳ ಅಬ್ಬರ, ದುಷ್ಟರ ಹಿಂಸೆ ಇವುಗಳ ದೆಸೆಯಿಂದ ಪ್ರಲಾಪಿಸುವವನಾಗಿ, ಹೊಯ್ದಾಡುತ್ತಾ ನರಳುತ್ತಿದ್ದೇನೆ. ಅವರು ನನ್ನ ಮೇಲೆ ಅಪಾಯವನ್ನು ಬರಮಾಡಿ, ಕೋಪದಿಂದ ನನ್ನನ್ನು ದ್ವೇಷಿಸುತ್ತಾರೆ.


ನ್ಯಾಯವಿರುದ್ಧ ಸಾಕ್ಷಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ; ನಾನರಿಯದ ಸಂಗತಿಗಳ ವಿಷಯದಲ್ಲಿ ನನ್ನನ್ನು ವಿಚಾರಿಸುತ್ತಾರೆ.


ಏಕೆಂದರೆ ನಾನು ಇಬ್ರಿಯ ದೇಶದವನು. ಕೆಲವರು ನನ್ನನ್ನು ಕದ್ದು ಈ ದೇಶಕ್ಕೆ ತಂದರು. ಇಲ್ಲಿಯೂ ನಾನು ಯಾವ ತಪ್ಪು ಮಾಡದೆ ಸೆರೆಯಲ್ಲಿ ಬಿದ್ದಿರುವೆನು” ಅಂದನು.


ಯಜಮಾನನು ಬಂದಾಗ ಆಕೆಯು ಅದೇ ಮಾತನ್ನು ಹೇಳಿ ಅವನಿಗೆ, “ನೀನು ನಮ್ಮಲ್ಲಿ ಸೇರಿಸಿಕೊಂಡ ಆ ಇಬ್ರಿಯ ಸೇವಕನು ನನ್ನನ್ನು ಮಾನಭಂಗಪಡಿಸುವುದಕ್ಕೆ ನನ್ನ ಬಳಿಗೆ ಬಂದನು.


ಹೀಗಿರುವಲ್ಲಿ ಯೋಸೇಫನ ದಣಿಯ ಹೆಂಡತಿಯು ಅವನನ್ನು ಮೋಹಿಸಿ “ನನ್ನ ಸಂಗಡ ಸಂಗಮಿಸಲು ಬಾ” ಎಂದಳು.


ತಪ್ಪಿಸಿಕೊಂಡವನೊಬ್ಬನು, ಇಬ್ರಿಯನಾದ ಅಬ್ರಾಮನ ಬಳಿಗೆ ಬಂದು ಈ ಸಂಗತಿಯನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ಮೋರೆ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆಯನಿಗೆ ಎಷ್ಕೋಲ ಮತ್ತು ಆನೇರ ಎಂಬ ಸಹೋದರರಿದ್ದರು; ಇವರಿಬ್ಬರಿಗೂ ಅಬ್ರಾಮನಿಗೂ ಒಡಂಬಡಿಕೆಯಿತ್ತು.


ಇಬ್ರಿಯರೆಲ್ಲರಿಗೆ ಮೂಲಪುರುಷನನೂ, ಯೆಫೆತನ ಅಣ್ಣನೂ ಆಗಿದ್ದ ಶೇಮನಿಗೂ ಮಕ್ಕಳು ಹುಟ್ಟಿದರು.


ನಾವು ಮಾನ ಮತ್ತು ಅವಮಾನ, ಕೀರ್ತಿ ಮತ್ತು ಅಪಕೀರ್ತಿಗಳಲ್ಲಿಯೂ ಸೇವೆಮಾಡಿದ್ದೇವೆ. ಸತ್ಯವಂತರಾದರೂ ಮೋಸಗಾರರೆನಿಸಿಕೊಂಡಿದ್ದೇವೆ.


ಅಶುದ್ಧವಾದ ನಗರವೇ, ಗದ್ದಲಕ್ಕೆ ಪ್ರಸಿದ್ಧವಾದ ನಗರಿಯೇ, ಹತ್ತಿರದವರೂ, ದೂರದವರೂ ನಿನ್ನನ್ನು ಹಾಸ್ಯಮಾಡುವರು.


ಅವನು ತನ್ನ ಬಟ್ಟೆಯನ್ನು ಅವಳ ಕೈಯಲ್ಲಿ ಬಿಟ್ಟು ತಪ್ಪಿಸಿಕೊಂಡು ಹೋದದ್ದನ್ನು ಆಕೆಯು ನೋಡಿ,


ನಾನು ಕೂಗುವುದನ್ನು ಕೇಳಿ ಅವನು ತನ್ನ ಬಟ್ಟೆಯನ್ನು ನನ್ನ ಬಳಿಯಲ್ಲೇ ಬಿಟ್ಟು ತಪ್ಪಿಸಿಕೊಂಡು ಓಡಿಹೋದನು” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು