ಆದಿಕಾಂಡ 39:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವನು ತನ್ನ ಆಸ್ತಿಯನ್ನೆಲ್ಲಾ ಯೋಸೇಫನ ವಶಕ್ಕೆ ಒಪ್ಪಿಸಿದನು. ಇವನು ತನ್ನ ಬಳಿಯಲ್ಲೇ ಇದ್ದುದರಿಂದ ತಾನು ತಿನ್ನುವ ಆಹಾರ ಒಂದನ್ನೇ ಹೊರತು ಬೇರೆ ಯಾವ ವಿಷಯದಲ್ಲೂ ಚಿಂತಿಸುತ್ತಿರಲಿಲ್ಲ. ಯೋಸೇಫನು ರೂಪವಂತನೂ, ಸುಂದರನೂ ಆಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಪೋಟೀಫರನು ಹೀಗೆ ತನ್ನದನ್ನೆಲ್ಲ ಜೋಸೆಫನ ವಶಕ್ಕೆ ಒಪ್ಪಿಸಿ, ‘ಅವನು ಇದ್ದಾನಲ್ಲಾ’ ಎಂದುಕೊಂಡು, ತಾನು ತಿನ್ನುತ್ತಿದ್ದ ಆಹಾರ ಒಂದನ್ನು ಬಿಟ್ಟು, ಬೇರೆ ಏನನ್ನೂ ಕುರಿತು ಚಿಂತಿಸದೆ ಇದ್ದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವನು ತನ್ನ ಆಸ್ತಿಯನ್ನೆಲ್ಲಾ ಯೋಸೇಫನ ವಶಕ್ಕೆ ಒಪ್ಪಿಸಿದನು; ಇವನು ತನ್ನ ಬಳಿಯಲ್ಲೇ ಇದ್ದದರಿಂದ ತಾನು ತಿನ್ನುವ ಆಹಾರ ಒಂದನ್ನೇ ಹೊರತು ಬೇರೆ ಯಾವದನ್ನೂ ಚಿಂತಿಸಲಿಲ್ಲ. ಇದಲ್ಲದೆ ಯೋಸೇಫನು ರೂಪದಲ್ಲಿಯೂ ಮುಖಭಾವದಲ್ಲಿಯೂ ಸುಂದರನಾಗಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದ್ದರಿಂದ ಪೋಟೀಫರನು ತಾನು ಊಟಮಾಡುವ ಆಹಾರವೊಂದನ್ನು ಬಿಟ್ಟು ಉಳಿದೆಲ್ಲದರ ಜವಾಬ್ದಾರಿಯನ್ನು ಯೋಸೇಫನಿಗೆ ವಹಿಸಿ ನಿಶ್ಚಿಂತೆಯಿಂದ ಇದ್ದನು. ಯೋಸೇಫನು ನೋಡಲು ಸುಂದರನಾಗಿಯೂ ರೂಪವಂತನಾಗಿಯೂ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಹೀಗಿರುವುದರಿಂದ ಅವನು ತನಗಿದ್ದದ್ದನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿ, ತನ್ನ ಊಟದ ವಿಷಯದಲ್ಲಿ ಹೊರತು ಬೇರೆ ಯಾವುದರ ವಿಷಯದಲ್ಲಿಯೂ ಚಿಂತಿಸದೆ ಇದ್ದನು. ಯೋಸೇಫನು ಸುರೂಪಿಯೂ ಸುಂದರನೂ ಆಗಿದ್ದನು. ಅಧ್ಯಾಯವನ್ನು ನೋಡಿ |