Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 4:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇಗೋ, ನೀನು ಈ ಹೊತ್ತು ನನ್ನನ್ನು ಸ್ವದೇಶದಿಂದ ಓಡಿಸಿ ಬಿಟ್ಟಿದ್ದೀಯಲ್ಲಾ! ನಿನ್ನ ಸಮ್ಮುಖದಿಂದ ಮರೆಯಾಗಿರುವೆನು. ಆದ್ದರಿಂದ ನಾನು ಭೂಮಿಯಲ್ಲಿ ಅಲೆಮಾರಿಯಾಗಿ ದೇಶಭ್ರಷ್ಟನೂ ಆಗಬೇಕಾಯಿತು; ಇದಲ್ಲದೆ ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಈ ನಾಡಿನಿಂದ ನನ್ನನ್ನು ಹೊರದೂಡುತ್ತಿರುವಿರಿ, ತಮ್ಮ ಸಾನ್ನಿಧ್ಯ ನನಗಿನ್ನು ದೊರಕದು; ನೆಲೆ ಇಲ್ಲದ ನಾನು ಲೋಕದಲ್ಲಿ ಅಲೆಮಾರಿಯಾಗಿರಬೇಕು; ಕಂಡಕಂಡವರೆಲ್ಲರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀನು ಈ ಹೊತ್ತು ನನ್ನನ್ನು ಸ್ವದೇಶದಿಂದ ಹೊರಡಿಸುತ್ತೀಯಲ್ಲಾ; ನಿನ್ನ ಸಾನ್ನಿಧ್ಯವು ತಪ್ಪಿತು; ನಾನು ಲೋಕದಲ್ಲಿ ಅಲೆಯುವವನೂ ದೇಶಭ್ರಷ್ಟನೂ ಆಗಬೇಕಾಯಿತು. ಇದಲ್ಲದೆ ನನ್ನನ್ನು ಕಂಡವರು ಕೊಲ್ಲುವರು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನೀನು ನನ್ನನ್ನು ನನ್ನ ದೇಶದಿಂದ ಬಲವಂತವಾಗಿ ಹೊರಡಿಸುತ್ತಿರುವೆ. ನಿನ್ನನ್ನು ನೋಡುವುದಕ್ಕಾಗಲಿ ನಿನ್ನ ಸಮೀಪದಲ್ಲಿ ಇರುವುದಕ್ಕಾಗಲಿ ನನಗೆ ಸಾಧ್ಯವಿರುವುದಿಲ್ಲ! ನನಗೆ ಮನೆಯೂ ಇಲ್ಲ! ನಾನು ಭೂಮಿಯ ಮೇಲೆ ಸ್ಥಳದಿಂದ ಸ್ಥಳಕ್ಕೆ ಬಲವಂತವಾಗಿ ಅಲೆದಾಡಬೇಕಾಗುವುದು. ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇಗೋ, ನೀವು ಈ ದಿನ ನನ್ನನ್ನು ಸ್ವದೇಶದಿಂದ ಓಡಿಸುತ್ತಿದ್ದೀರಲ್ಲಾ! ನಿಮ್ಮ ಸಮ್ಮುಖದಿಂದ ನಾನು ಮರೆಯಾಗಿರಬೇಕಾಯಿತು. ಭೂಮಿಯಲ್ಲಿ ಅಲೆಮಾರಿಯಾಗಿರಬೇಕು. ಇದಲ್ಲದೆ ನನ್ನನ್ನು ಕಂಡವರು ಕೊಲ್ಲುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 4:14
27 ತಿಳಿವುಗಳ ಹೋಲಿಕೆ  

ನರಹತ್ಯೆಮಾಡಿದವನು ಎಲ್ಲಿ ಸಿಕ್ಕಿದರೂ ಅವನನ್ನು ಕೊಲ್ಲಬೇಕಾದವನು ಯಾರೆಂದರೆ ಹತವಾದವನ ಸಮೀಪಬಂಧುವೇ.


ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು; ನನ್ನ ಆತ್ಮವು ಕುಂದಿಹೋಗಿದೆ. ನೀನು ವಿಮುಖನಾದರೆ ಸಮಾಧಿಯಲ್ಲಿ ಸೇರಿದವರಿಗೆ ನಾನು ಸಮಾನನಾಗಿರುವೆನು.


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು, ಶಿಷ್ಟನು ಸಿಂಹದಂತೆ ಧೈರ್ಯದಿಂದಿರುವನು.


ಆ ದೇಶಗಳಲ್ಲಿ ನಿಮಗೆ ಯಾವ ವಿಶ್ರಾಂತಿಯೂ ದೊರೆಯುವುದಿಲ್ಲ; ಸ್ವಲ್ಪ ಹೊತ್ತು ಅಂಗಾಲಿಡುವುದಕ್ಕೂ ನಿಮಗೆ ಸ್ಥಳಸಿಕ್ಕುವುದಿಲ್ಲ. ನೀವು ನಡುಗುವ ಹೃದಯವುಳ್ಳವರಾಗಿಯೂ, ದಿಕ್ಕುತೋರದೆ ಕಂಗೆಟ್ಟವರಾಗಿಯೂ, ಮನಗುಂದಿದವರಾಗಿಯೂ ಇರುವಂತೆ ಯೆಹೋವನು ಮಾಡುವನು.


ಅವರು ಕರ್ತನ ಸಮ್ಮುಖಕ್ಕೂ ಆತನ ಪರಾಕ್ರಮದ ವೈಭವಕ್ಕೂ ದೂರವಾಗಿ ನಿತ್ಯನಾಶನವೆಂಬ ದಂಡನೆಯನ್ನು ಅನುಭವಿಸುವರು.


ಮತ್ತು ಅನೀತಿವಂತರಾದ ಇವರು ನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು.


ಯೆಹೋವನು ಯೆರೂಸಲೇಮಿನವರ ಮೇಲೆಯೂ ಮತ್ತು ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ, ಕಡೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವಷ್ಟು ರೋಷವುಳ್ಳವನಾದನು. ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದನು.


ಹತವಾದವನ ಸಮೀಪಬಂಧುವು ಅವನನ್ನು ಆಶ್ರಯಪಟ್ಟಣದ ಹೊರಗೆ ಕಂಡು ಕೊಂದುಹಾಕಿದರೆ ಅವನು ಕೊಲೆಪಾತಕನಾಗುವುದಿಲ್ಲ.


ಇಲ್ಲವೆ ದ್ವೇಷದಿಂದ ಕೈಯಾರೆ ಹೊಡೆಯುವುದರಿಂದಾಗಲಿ ಕೊಂದರೆ ಅವನು ನರಹತ್ಯೆಮಾಡಿದವನೇ. ಅವನಿಗೆ ಮರಣಶಿಕ್ಷೆಯಾಗಬೇಕು. ಹತವಾದವನ ಸಮೀಪಬಂಧುವು ಅವನನ್ನು ಎಲ್ಲಿ ಕಂಡರೂ ಕೊಲ್ಲಬೇಕು.


ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಹೀಗಿರಲು ಅವರು ಪ್ರಾತಃಕಾಲದ ಮೋಡದ ಹಾಗೆ, ಬೇಗನೆ ಮಾಯವಾಗುವ ಇಬ್ಬನಿಯಂತೆಯೂ, ಬಿರುಗಾಳಿಯು ಕಣದಿಂದ ಬಡಿದುಕೊಂಡುಹೋಗುವ ಹೊಟ್ಟಿನ ಹಾಗೂ, ಚಿಮಿಣಿಯಿಂದ ಹೊರಡುವ ಹೊಗೆಯೋಪಾದಿಯಲ್ಲಿಯೂ ಇರುವರು.


ಮೇಲಕ್ಕೆ ಕಣ್ಣೆತ್ತಿದ್ದರೂ, ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ, ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವುದು. ಕಾರ್ಗತ್ತಲೆಗೆ ತಳ್ಳಲ್ಪಡುವರು.


ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು, ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.


ಅವನಿಗೆ ಯಾರೂ ಕೃಪೆತೋರಿಸದಿರಲಿ, ದಿಕ್ಕಿಲ್ಲದ ಅವನ ಮಕ್ಕಳಿಗೆ ಯಾರೂ ದಯೆತೋರದಿರಲಿ,


ಅವನ ಮಕ್ಕಳು ತಮ್ಮ ಹಾಳಾದ ಸ್ಥಳಗಳನ್ನು ಬಿಟ್ಟು, ದಿಕ್ಕಿಲ್ಲದವರಂತೆ ಅಲೆಯುತ್ತಾ ಭಿಕ್ಷೆಬೇಡಲಿ.


ಈಗ ನೋಡು ಬಳಗದವರೆಲ್ಲರು ನಿನ್ನ ದಾಸಿಯಾದ ನನಗೆ ವಿರೋಧವಾಗಿ ಎದ್ದು ‘ತಮ್ಮನನ್ನು ಕೊಂದವನೆಲ್ಲಿ?, ಅವನನ್ನು ನಮಗೆ ಒಪ್ಪಿಸು. ತಮ್ಮನ ಪ್ರಾಣಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥನಿಲ್ಲದ ಹಾಗೆ ಮಾಡಿಬಿಡುತ್ತೇವೆ’ ಅನ್ನುತ್ತಾರೆ. ಹೀಗೆ ಅವರು ನನಗುಳಿದಿರುವ ಒಂದು ಕೆಂಡವನ್ನೂ ಆರಿಸಿಬಿಟ್ಟು, ನನ್ನ ಗಂಡನ ಹೆಸರನ್ನೂ, ಸಂತಾನವನ್ನೂ ಭೂಲೋಕದ ಮೇಲಿನಿಂದ ಅಳಿಸಬೇಕೆಂದಿದ್ದಾರೆ” ಎಂದು ಉತ್ತರ ಕೊಟ್ಟಳು.


“ನಿಮ್ಮಲ್ಲಿ ಯಾರಾರು ಶತ್ರುಗಳ ದೇಶದಲ್ಲಿ ಉಳಿದಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಡಿದಾಡುವ ಉದುರೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು. ಅವರು ಆ ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು. ಯಾರೂ ಬೆನ್ನಟ್ಟಿ ಬಾರದಿರುವಾಗಲೂ ಅವರು ಓಡಿಹೋಗಿ ಬೀಳುವರು.


ನಾನು ನಿಮ್ಮ ಮೇಲೆ ಉಗ್ರಕೋಪಗೊಳ್ಳುವುದರಿಂದ ನೀವು ನಿಮ್ಮ ಶತ್ರುಗಳ ಮುಂದೆ ಸೋತು ಹೋಗುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು; ಯಾರೂ ಬೆನ್ನಟ್ಟಿ ಬರದಿದ್ದರು ನೀವು ಹೆದರಿ ಓಡುವಿರಿ.


ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕೆ, ಏದೆನ್ ವನದ ಪೂರ್ವ ದಿಕ್ಕಿನಲ್ಲಿ ಕೆರೂಬಿಯರನ್ನೂ, ಎಲ್ಲಾ ಕಡೆಯಲ್ಲಿ ಧಗಧಗಿಸುತ್ತಾ ಉರಿಯುವ ಜ್ವಾಲೆಯ ಕತ್ತಿಯನ್ನು ಇರಿಸಿದನು.


ಆಗ ಕಾಯಿನನು ಯೆಹೋವನಿಗೆ, “ನನ್ನ ಅಪರಾಧದ ಫಲ ಸಹಿಸಲಾರದಷ್ಟಾಗಿದೆ.


ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲಾ ಜನಾಂಗಗಳಲ್ಲಿಯೂ ಯೆಹೋವನು ನಿಮ್ಮನ್ನು ಚದರಿಸುವನು. ಅಲ್ಲಿ ನಿಮಗಾಗಲಿ ಅಥವಾ ನಿಮ್ಮ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು