Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 4:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಕಾಯಿನನು ತನ್ನ ಹೆಂಡತಿಯನ್ನು ಸಂಗಮಿಸಲು ಅವಳು ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ಇದಲ್ಲದೆ ಕಾಯಿನನು ಒಂದು ಊರನ್ನು ಕಟ್ಟಿ ಅದಕ್ಕೆ ಹನೋಕ್ ಎಂದು ತನ್ನ ಮಗನ ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಕಾಯಿನನು ತನ್ನ ಹೆಂಡತಿಯ ಜೊತೆ ಕೂಡಲು ಆಕೆ ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ತಾನು ಕಟ್ಟಿದ ಊರಿಗೆ ಕಾಯಿನನು ‘ಹನೋಕ’ ಎಂದು ತನ್ನ ಮಗನ ಹೆಸರನ್ನೇ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಕಾಯಿನನು ತನ್ನ ಹೆಂಡತಿಯನ್ನು ಕೂಡಲು ಅವಳು ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ಇದಲ್ಲದೆ ಕಾಯಿನನು ಒಂದು ಊರನ್ನು ಕಟ್ಟಿ ಅದಕ್ಕೆ ಹನೋಕ ಎಂದು ತನ್ನ ಮಗನ ಹೆಸರಿಟ್ಟನು. ಹನೋಕನಿಂದ ಈರಾದನು ಹುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಕಾಯಿನ ಮತ್ತು ಅವನ ಹೆಂಡತಿಗೆ ಒಂದು ಗಂಡುಮಗು ಹುಟ್ಟಿತು. ಅವರು ಆ ಮಗುವಿಗೆ ಹನೋಕ ಎಂದು ಹೆಸರಿಟ್ಟರು. ಕಾಯಿನನು ಒಂದು ಊರನ್ನು ಕಟ್ಟಿದನು. ಆ ಊರಿಗೆ ಅವನು ತನ್ನ ಮಗನ ಹೆಸರನ್ನೇ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಕಾಯಿನನು ತನ್ನ ಹೆಂಡತಿಯನ್ನು ಕೂಡಲು, ಅವಳು ಗರ್ಭಿಣಿಯಾಗಿ ಹನೋಕನನ್ನು ಪಡೆದಳು. ಇದಲ್ಲದೆ ಕಾಯಿನನು ಒಂದು ಊರನ್ನು ಕಟ್ಟಿ, ಅದಕ್ಕೆ ಹನೋಕ್ ಎಂದು ತನ್ನ ಮಗನ ಹೆಸರನ್ನಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 4:17
11 ತಿಳಿವುಗಳ ಹೋಲಿಕೆ  

ಅವರ ಸಮಾಧಿಯೇ ಶಾಶ್ವತಮಂದಿರವು; ತಮ್ಮ ನಿವಾಸಗಳು ತಲತಲಾಂತರಕ್ಕೂ ಇರುವುದೆಂದು ಯೋಚಿಸಿ, ಭೂಮಿಗಳಿಗೆ ತಮ್ಮ ಹೆಸರುಗಳನ್ನು ಕೊಟ್ಟಿದ್ದಾರೆ.


“ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯ ಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವುದು ಇಗೋ, ಮಹಾ ಪಟ್ಟಣವಾದ ಈ ಬಾಬೆಲ್” ಎಂದು ಕೊಚ್ಚಿಕೊಂಡನು.


ಅಬ್ಷಾಲೋಮನು ಜೀವದಿಂದ ಇದ್ದಾಗ ತನ್ನ ಹೆಸರನ್ನುಳಿಸಲು ಮಗನಿಲ್ಲದೆ ಇದ್ದುದರಿಂದ ಒಂದು ಕಲ್ಲಿನ ಕಂಬವನ್ನು ತರಿಸಿ, ಅದನ್ನು ಅರಸನ ತಗ್ಗಿನಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ, ಅದಕ್ಕೆ ತನ್ನ ಹೆಸರನ್ನಿಟ್ಟಿದ್ದನು. ಅದು ಇಂದಿನ ವರೆಗೂ ಅಬ್ಷಾಲೋಮನ ಜ್ಞಾಪಕಸ್ತಂಭ ಎಂದು ಕರೆಯಲಾಗುತ್ತಿದೆ.


ಅವರು, “ಬನ್ನಿರಿ, ಒಂದು ಪಟ್ಟಣವನ್ನು ಕಟ್ಟೋಣ, ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಸಂಪಾದಿಸಿಕೊಳ್ಳೋಣ; ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಾಗುವುದಿಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ದೇವರ ಅನ್ಯೋನ್ಯತೆಯಲ್ಲಿ ಮುನ್ನೂರು ವರ್ಷ ಬದುಕಿದನು.


ಯೆರೆದನು ನೂರ ಅರುವತ್ತೆರಡು ವರ್ಷದವನಾದಾಗ ಹನೋಕನನ್ನು ಪಡೆದನು.


ಆಗ ಕಾಯಿನನು ಯೆಹೋವನ ಸನ್ನಿಧಿಯಿಂದ ಹೊರಟು ಹೋಗಿ ಏದೆನ್ ಪೂರ್ವದಲ್ಲಿದ್ದ ನೋದ್ ಎಂಬ ದೇಶದಲ್ಲಿ ನೆಲೆಸಿದನು.


ಹನೋಕನಿಂದ ಈರಾದನು ಹುಟ್ಟಿದನು. ಈರಾದನು ಮೆಹೂಯಾಯೇಲನನ್ನು ಪಡೆದನು; ಮೆಹೂಯಾಯೇಲನು ಮೆತೂಷಾಯೇಲನನ್ನು ಪಡೆದನು; ಮೆತೂಷಾಯೇಲನು ಲೆಮೆಕನನ್ನು ಪಡೆದನು.


ಆದರೂ ಮನುಷ್ಯನು ಎಷ್ಟು ಘನವಾದ ಪದವಿಯಲ್ಲಿದ್ದರೂ ಸ್ಥಿರವಲ್ಲ; ನಾಶವಾಗುವ ಪಶುಗಳಂತೆಯೇ ಇಲ್ಲವಾಗುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು