Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 4:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ತರುವಾಯ ಅವನ ತಮ್ಮನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿಕಾಯುವವನಾದನು. ಕಾಯಿನನು ವ್ಯವಸಾಯಗಾರನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ತರುವಾಯ ಅವನ ತಮ್ಮನಾದ ಹೇಬೆಲನಿಗೆ ಜನ್ಮವಿತ್ತಳು. ಹೇಬೆಲನು ಕುರಿಗಾಹಿಯಾದನು; ಕಾಯಿನನು ವ್ಯವಸಾಯಗಾರನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ತರುವಾಯ ಅವನ ತಮ್ಮನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿಕಾಯುವವನಾದನು; ಕಾಯಿನನು ವ್ಯವಸಾಯಮಾಡುವವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಮೇಲೆ, ಹವ್ವಳಿಗೆ ಮತ್ತೊಂದು ಮಗು ಜನಿಸಿತು. ಈ ಮಗುವೇ ಕಾಯಿನನ ತಮ್ಮನಾದ ಹೇಬೆಲ. ಹೇಬೆಲನು ಕುರುಬನಾದನು ಕಾಯಿನನು ರೈತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅನಂತರ ಆಕೆಯು ಅವನ ತಮ್ಮನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿ ಕಾಯುವವನಾದನು ಮತ್ತು ಕಾಯಿನನು ವ್ಯವಸಾಯ ಮಾಡುವವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 4:2
19 ತಿಳಿವುಗಳ ಹೋಲಿಕೆ  

ತನ್ನ ಸಹೋದರನನ್ನು ದ್ವೇಷಿಸುವವನು ಕೊಲೆಗಾರನಾಗಿದ್ದಾನೆ. ಮತ್ತು ಯಾವ ಕೊಲೆಗಾರನಲ್ಲಿಯೂ ನಿತ್ಯಜೀವವು ಇರುವುದಿಲ್ಲವೆಂಬುದು ನಿಮಗೆ ಗೊತ್ತಾಗಿದೆ.


ಕೆಡುಕುನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನನಂತೆ ನಾವು ಇರಬಾರದು. ಅವನು ಯಾಕೆ ತಮ್ಮನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟದ್ದು ಮತ್ತು ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದುದರಿಂದಲೇ.


ಆದ್ದರಿಂದ ದೇವರ ಮಕ್ಕಳು ಯಾರೆಂಬುದು ಹಾಗೂ ಸೈತಾನನ ಮಕ್ಕಳು ಯಾರೆಂಬುದು ಇದರಿಂದ ತಿಳಿದುಬರುತ್ತದೆ. ನೀತಿಯನ್ನು ಅನುಸರಿಸದವರೂ ತನ್ನ ಸಹೋದರನನ್ನು ಪ್ರೀತಿಸದವರೂ ದೇವರಿಗೆ ಸಂಬಂಧಪಟ್ಟವರಲ್ಲ.


ಸೈತಾನನು ನಿಮ್ಮ ತಂದೆ, ನೀವು ಆತನಿಗೆ ಸೇರಿದವರಾಗಿದ್ದು ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ ಆಗಿದ್ದಾನೆ.


ಫರೋಹನು ಯೋಸೇಫನ ಅಣ್ಣತಮ್ಮಂದಿರಿಗೆ, “ನಿಮ್ಮ ಕಸುಬು ಏನು?” ಎಂದು ಅವರನ್ನು ಕೇಳಲು ಅವರು, “ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಹಾಗೆ ಕುರಿಕಾಯುವವರು” ಎಂದು ಹೇಳಿದರು.


ಮೋಶೆಯು ತನ್ನ ಮಾವನಾದ, ಮಿದ್ಯಾನ್ಯರ ಯಾಜಕನಾದ ಇತ್ರೋನನ ಮಂದೆಯನ್ನು ಮೇಯಿಸುತ್ತಿರಲಾಗಿ ಆ ಮಂದೆಯನ್ನು ಅಡವಿಯ ಮತ್ತೊಂದುಭಾಗಕ್ಕೆ ನಡಿಸಿಕೊಂಡು ಹೋಗುತ್ತಾ, “ಹೋರೇಬ್” ಎಂಬ ದೇವರ ಬೆಟ್ಟಕ್ಕೆ ಬಂದನು.


ಯೆಹೋವನು ನನ್ನನ್ನು ಮಂದೆ ಕಾಯುವವರಿಂದ ತಪ್ಪಿಸಿ, ‘ನೀನು ಹೋಗಿ ನನ್ನ ಜನರಾದ ಇಸ್ರಾಯೇಲರಿಗೆ ಪ್ರವಾದನೆ ಮಾಡು’ ಎಂದು ನನಗೆ ಅಪ್ಪಣೆ ಕೊಟ್ಟನು.


ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು; ಗರ್ಭಫಲವು ಆತನ ಬಹುಮಾನವೇ.


ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಅಣ್ಣಂದಿರು ಶೆಕೆಮಿನಲ್ಲಿ ಆಡುಕುರಿಗಳನ್ನು ಮೇಯಿಸುತ್ತಿದ್ದಾರಲ್ಲಾ ಅವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೆ, ಹೋಗು” ಎಂದು ಹೇಳಿದನು. ಅದಕ್ಕೆ ಅವನು, “ಆಗಲಿ, ಹೋಗುತ್ತೇನೆ” ಎಂದನು.


ನೋಹನು ವ್ಯವಸಾಯಗಾರನಾಗಿದ್ದನು; ದ್ರಾಕ್ಷಿ ತೋಟ ಮಾಡುವುದನ್ನು ಮೊದಲು ಪ್ರಾರಂಭಿಸಿದವನು ಇವನೇ.


ಆದ್ದರಿಂದ ಯೆಹೋವನು ಅವನನ್ನು ಸೃಷ್ಟಿಸಿದ ಮಣ್ಣಿನ ಭೂಮಿಯನ್ನೇ ವ್ಯವಸಾಯ ಮಾಡುವುದಕ್ಕಾಗಿ ಅವನನ್ನು ಏದೆನ್ ತೋಟದಿಂದ ಹೊರಗೆ ಕಳುಹಿಸಿ ಬಿಟ್ಟನು.


ಹೀಗೆ ಲೋಕಾದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಅಂದರೆ, ಹೇಬೆಲನ ರಕ್ತ ಮೊದಲುಗೊಂಡು, ಯಜ್ಞವೇದಿಗೂ ದೇವಾಲಯಕ್ಕೂ ನಡುವೆ ಕೊಲ್ಲಲ್ಪಟ್ಟ ಜಕರೀಯನ ರಕ್ತದವರೆಗೂ ಈ ಸಂತತಿಯವರು ಲೆಕ್ಕಕೊಡಬೇಕಾಗುವುದು ಎಂಬುದೇ. ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.


ಆದಾಮನು ತನ್ನ ಹೆಂಡತಿಯಾದ ಹವ್ವಳನ್ನು ಸಂಗಮಿಸಲು ಆಕೆ ಗರ್ಭಿಣಿಯಾಗಿ ಕಾಯಿನನನ್ನು ಹೆತ್ತು, “ನಾನು ಯೆಹೋವನ ಅನುಗ್ರಹದಿಂದ ಗಂಡು ಮಗುವನ್ನು ಪಡೆದಿದ್ದೇನೆ” ಎಂದು ಹೇಳಿದಳು.


ಕಾಲಾಂತರದಲ್ಲಿ ಕಾಯಿನನು ಹೊಲದ ಬೆಳೆಯಲ್ಲಿ ಕೆಲವನ್ನು ತಂದು ಯೆಹೋವನಿಗೆ ಕಾಣಿಕೆಯಾಗಿ ಸಮರ್ಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು