ಹೀಗಿರಲು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಇವುಗಳ ಕೆಲಸ ಮಾಡುವುದರಲ್ಲಿಯೂ, ರಕ್ತವರ್ಣ, ಕಡುಗೆಂಪುವರ್ಣ, ನೀಲವರ್ಣಗಳ ಬಟ್ಟೆಯನ್ನು ನೇಯುವುದರಲ್ಲಿಯೂ ಚಿತ್ರ ಕೆತ್ತುವುದರಲ್ಲಿಯೂ ನಿಪುಣನಾದ ಒಬ್ಬ ವ್ಯಕ್ತಿಯನ್ನು ನನ್ನ ಬಳಿಗೆ ಕಳುಹಿಸು; ನನ್ನ ತಂದೆಯಾದ ದಾವೀದನು ಗೊತ್ತುಮಾಡಿದಂಥ ಮತ್ತು ನನ್ನೊಡನೆ ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ, ಇರುವಂಥ ಕುಶಲಕರ್ಮಿಗಳೊಂದಿಗೆ ಅವನು ಕೆಲಸ ಮಾಡಲಿ.
ಅಲ್ಲಿ ನೀವು ದುರ್ಭಿಕ್ಷವನ್ನು ಕಾಣದೆ ಸಮೃದ್ಧಿಯಾಗಿ ಊಟಮಾಡಿ, ಯಾವ ಕೊರತೆಯೂ ಇಲ್ಲದೆ ಇರುವಿರಿ. ಆ ದೇಶದಲ್ಲಿ ಕಬ್ಬಿಣದ ಕಲ್ಲು ಸಿಕ್ಕುತ್ತದೆ; ಅಲ್ಲಿಯ ಬೆಟ್ಟಗಳಲ್ಲಿ ತಾಮ್ರದ ಗಣಿಗಳುಂಟು.
ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು; “ಆದಾ, ಚಿಲ್ಲಾ, ನನ್ನ ಮಾತಿಗೆ ಕಿವಿಕೊಡಿರಿ; ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಗಮನಿಸಿರಿ. ನನಗೆ ಗಾಯ ಮಾಡಿದ ಒಬ್ಬ ಮನುಷ್ಯನನ್ನು ಕೊಂದೆನು; ನನ್ನನ್ನು ಹೊಡೆದ ಒಬ್ಬ ಪ್ರಾಯಸ್ಥನನ್ನು ಹತಮಾಡಿದೆನು.