Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 4:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು; “ಆದಾ, ಚಿಲ್ಲಾ, ನನ್ನ ಮಾತಿಗೆ ಕಿವಿಕೊಡಿರಿ; ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಗಮನಿಸಿರಿ. ನನಗೆ ಗಾಯ ಮಾಡಿದ ಒಬ್ಬ ಮನುಷ್ಯನನ್ನು ಕೊಂದೆನು; ನನ್ನನ್ನು ಹೊಡೆದ ಒಬ್ಬ ಪ್ರಾಯಸ್ಥನನ್ನು ಹತಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು: ಆದಾ, ಚಿಲ್ಲಾ, ಕೇಳಿ ನಾನು ಹೇಳುವುದನ್ನು ಲೆಮೆಕನ ಸತಿಯರೇ, ಆಲಿಸಿ ನನ್ನ ಮಾತನ್ನು ನಾ ಹತಮಾಡಿದೆ ನನಗೆ ಗಾಯ ಮಾಡಿದವನನ್ನು ನಾ ಕೊಂದೆ ನನ್ನನ್ನು ಹೊಡೆದಾ ಪ್ರಾಯದವನನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು - ಆದಾ, ಚಿಲ್ಲಾ, ನನ್ನ ಮಾತಿಗೆ ಕಿವಿಗೊಡಿರಿ; ಲೆಮೆಕನ ಹೆಂಡತಿಯರೇ, ನಾನು ಹೇಳುವದನ್ನು ಕೇಳಿರಿ. ನನಗೆ ಗಾಯಮಾಡಿದ ಒಬ್ಬ ಮನುಷ್ಯನನ್ನು ಕೊಂದೆನು; ನನ್ನನ್ನು ಹೊಡೆದ ಒಬ್ಬ ಪ್ರಾಯಸ್ಥನನ್ನು ಹತಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು: “ಆದಾ, ಚಿಲ್ಲಾ, ನನ್ನ ಮಾತನ್ನು ಕೇಳಿ! ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಕೇಳಿ. ಒಬ್ಬನು ನನಗೆ ಗಾಯ ಮಾಡಿದ, ಆದ್ದರಿಂದ ನಾನು ಅವನನ್ನು ಕೊಂದೆ, ಒಬ್ಬ ಯುವಕನು ನನ್ನನ್ನು ಹೊಡೆದ, ಆದ್ದರಿಂದ ನಾನು ಅವನನ್ನು ಕೊಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು: “ಆದಾ, ಚಿಲ್ಲಾ, ನನ್ನ ಮಾತನ್ನು ಕೇಳಿರಿ. ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಗಮನಿಸಿರಿ. ನನಗೆ ಗಾಯಮಾಡಿದ ಒಬ್ಬ ಮನುಷ್ಯನನ್ನು ಕೊಂದೆನು. ನನ್ನನ್ನು ಹೊಡೆದ ಯುವಕನನ್ನು ಹತ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 4:23
7 ತಿಳಿವುಗಳ ಹೋಲಿಕೆ  

ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದ್ದೇನೆಂದರೆ, “ಬಾಲಾಕನೇ, ಎದ್ದು ಕಿವಿಗೊಟ್ಟು ಕೇಳು. ಚಿಪ್ಪೋರನ ಮಗನೇ, ನನ್ನ ಮಾತನ್ನು ಲಾಲಿಸು.


“‘ನಿಮ್ಮ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡನ್ನು ಮಾಡದೆ, ಮನಸ್ಸಿನಲ್ಲಿ ಮತ್ಸರವನ್ನು ಇಟ್ಟುಕೊಳ್ಳದೆ, ನಿಮ್ಮ ನೆರೆಯವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ನಾನು ಯೆಹೋವನು.


ಯೋತಾಮನು ಇದನ್ನು ಕೇಳಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ನಿಂತು ಗಟ್ಟಿಯಾದ ಧ್ವನಿಯಿಂದ, “ಶೆಕೆಮಿನ ಜನರೇ, ನನ್ನ ಮಾತನ್ನು ಕೇಳಿರಿ; ಆಗ ದೇವರು ನಿಮ್ಮ ಮೊರೆಗೆ ಕಿವಿಗೊಡುವನು” ಎಂದನು.


ಚಿಲ್ಲಾ ಎಂಬುವವಳು ತೂಬಲ್ ಕಾಯಿನನನ್ನು ಹೆತ್ತಳು. ಇವನು ಕಬ್ಬಿಣ ಮತ್ತು ತಾಮ್ರದ ಆಯುಧಗಳನ್ನು ಮಾಡುವ ಕುಲುಮೆಗಾರರಿಗೆ ಮೂಲ ಪುರುಷ. ತೂಬಲ್ ಕಾಯಿನನ ತಂಗಿಯ ಹೆಸರು ನಯಮಾ.


ಪ್ರತಿಕಾರಮಾಡಿ ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ; ಅವರು ಜಾರಿ ಬೀಳುವ ಸಮಯ ಬರುವುದು. ಅವರಿಗೆ ಆಪತ್ಕಾಲವು ಸಮೀಪಿಸಿತು; ಅವರಿಗೋಸ್ಕರ ಸಿದ್ಧವಾಗಿರುವ ದುರ್ಗತಿ ಬೇಗ ಬರುವುದು.


ಯೆಹೋವನೇ, ಮುಯ್ಯಿತೀರಿಸುವ ದೇವರೇ, ಮುಯ್ಯಿತೀರಿಸುವ ದೇವರೇ, ಕೋಪವನ್ನು ತೋರ್ಪಡಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು