ಆದಿಕಾಂಡ 4:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಿನ್ನ ಮುಖವು ಕಳೆಗುಂದಲು ಕಾರಣವೇನು? ನೀನು ತಲೆ ತಗ್ಗಿಸಲು ಕಾರಣವೇನು? ನೀನು ಒಳ್ಳೆಯ ಕೆಲಸ ಮಾಡಿದ್ದರೆ ನಿನ್ನ ತಲೆಯು ಎತ್ತಲ್ಪಡುವುದಲ್ಲವೇ? ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವುದು, ಅದು ನಿನ್ನನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳುವುದು. ಆದರೆ ನೀನು ಅದನ್ನು ಹಿಡಿತದಲ್ಲಿ ಇರಿಸಿಕೊಳ್ಳಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನೀನು ಒಳಿತನ್ನು ಮಾಡಿದ್ದರೆ ತಲೆ ಎತ್ತುತ್ತಿದ್ದೆ; ಕೆಡುಕನ್ನು ಮಾಡಿದ್ದರಿಂದ ಪಾಪವು ಹೊಸ್ತಿಲಲ್ಲಿ ಹೊಂಚುಹಾಕುತ್ತಿದೆ; ಅದು ನಿನ್ನನ್ನು ಬಯಸುತ್ತಿದೆ. ನೀನು ಅದನ್ನು ಜಯಿಸಬೇಕು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಒಳ್ಳೇ ಕೆಲಸ ಮಾಡಿದರೆ ನಿನ್ನ ತಲೆ ಎತ್ತಲ್ಪಡುವದಲ್ಲವೇ; ಅಲ್ಲದಿದ್ದರೆ ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವದು; ಆದರೂ ನೀನು ಅದನ್ನು ವಶಮಾಡಿಕೊಳ್ಳಬೇಕು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನೀನು ಒಳ್ಳೆಯ ಕಾರ್ಯಗಳನ್ನು ಮಾಡಿದರೆ ನಾನು ನಿನ್ನನ್ನು ಸ್ವೀಕರಿಸಿಕೊಳ್ಳುವೆನು. ಆದರೆ ನೀನು ಕೆಟ್ಟಕಾರ್ಯಗಳನ್ನು ಮಾಡಿದರೆ, ಆ ಪಾಪವು ನಿನ್ನೊಂದಿಗಿರುತ್ತದೆ. ನಿನ್ನ ಪಾಪವು ನಿನ್ನನ್ನು ತನ್ನ ಹಿಡಿತದಲ್ಲಿಟ್ಟುಕೊಳ್ಳಲು ಇಷ್ಟಪಡುತ್ತದೆ. ಆದರೆ ನೀನು ಆ ಪಾಪವನ್ನು ನಿನ್ನ ಹಿಡಿತದಲ್ಲಿಟ್ಟುಕೊಳ್ಳಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನೀನು ಒಳ್ಳೆಯದನ್ನು ಮಾಡಿದರೆ, ನೀನು ಸ್ವೀಕಾರವಾಗುತ್ತಿದ್ದೆ ಅಲ್ಲವೇ? ನೀನು ಒಳ್ಳೆಯದನ್ನು ಮಾಡದೆ ಹೋದರೆ, ಬಾಗಿಲಲ್ಲಿ ಪಾಪವು ಹೊಂಚಿಕೊಂಡಿರುವುದು ಮತ್ತು ಅದು ನಿನ್ನನ್ನು ನುಂಗಲು ಬಯಸುತ್ತದೆ. ಆದರೂ ನೀನು ಅದರ ಮೇಲೆ ಅಧಿಕಾರ ಮಾಡಬೇಕು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |
ಈಗ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಹೋಗಿ ನಿಮ್ಮ ದೋಷಪರಿಹಾರಕ್ಕಾಗಿ ಹೋಮಮಾಡಿರಿ. ನನ್ನ ದಾಸನಾದ ಯೋಬನು ನಿಮ್ಮ ಪರವಾಗಿ ಪ್ರಾರ್ಥನೆ ಮಾಡುವನು. ನಾನು ಅವನ ವಿಜ್ಞಾಪನೆಯನ್ನು ಲಾಲಿಸಿ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ನಿಮಗೆ ವಿಧಿಸುವುದಿಲ್ಲ. ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ” ಎಂದು ಹೇಳಿದನು.