Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 40:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಏಕೆಂದರೆ ನಾನು ಇಬ್ರಿಯ ದೇಶದವನು. ಕೆಲವರು ನನ್ನನ್ನು ಕದ್ದು ಈ ದೇಶಕ್ಕೆ ತಂದರು. ಇಲ್ಲಿಯೂ ನಾನು ಯಾವ ತಪ್ಪು ಮಾಡದೆ ಸೆರೆಯಲ್ಲಿ ಬಿದ್ದಿರುವೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಾನು ಹಿಬ್ರಿಯ ದೇಶದವನು. ಕೆಲವರು ನನ್ನನ್ನು ಗುಲಾಮನನ್ನಾಗಿ ಈ ದೇಶಕ್ಕೆ ಹಿಡಿದುತಂದರು. ಇಲ್ಲಿಯೂ ಸೆರೆಗೆ ಗುರಿಯಾಗಿಸುವಂಥ ದ್ರೋಹವನ್ನು ನಾನೇನು ಮಾಡಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಾನು ಇಬ್ರಿಯದೇಶಸ್ಥನು; ಕೆಲವರು ನನ್ನನ್ನು ಕದ್ದು ಈ ದೇಶಕ್ಕೆ ತಂದರು. ಇಲ್ಲಿಯೂ ನಾನೇನೂ ತಪ್ಪಿಲ್ಲದವನಾಗಿ ಸೆರೆಯಲ್ಲಿ ಬಿದ್ದೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಇಬ್ರಿಯರ ದೇಶದವನಾದ ನನ್ನನ್ನು ಕೆಲವರು ಅಪಹರಿಸಿಕೊಂಡು ಬಂದರು. ಆದರೆ ಇಲ್ಲಿಯೂ ನಾನು ಯಾವ ತಪ್ಪನ್ನೂ ಮಾಡಲಿಲ್ಲ. ಆದ್ದರಿಂದ ನಾನು ಸೆರೆಮನೆಯಲ್ಲಿರಬಾರದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಏಕೆಂದರೆ ನನ್ನನ್ನು ಹಿಬ್ರಿಯರ ದೇಶದೊಳಗಿಂದ ಹಿಡಿದು ತಂದಿದ್ದಾರೆ. ಇಲ್ಲಿಯೂ ಸಹ ನಾನು ಏನೂ ತಪ್ಪುಮಾಡದೆ ಇದ್ದರೂ ನನ್ನನ್ನು ಸೆರೆಯಲ್ಲಿ ಹಾಕಿದರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 40:15
19 ತಿಳಿವುಗಳ ಹೋಲಿಕೆ  

ಆಗ ಯೋಸೇಫನ ದಣಿಯು ಅವನನ್ನು ಹಿಡಿದು ಅರಸನ ಕೈದಿಗಳನ್ನಿಡುವ ಸೆರೆಮನೆಯಲ್ಲಿ ಹಾಕಿಸಿದನು. ಅಲ್ಲಿ ಯೋಸೇಫನು ಸೆರೆಯಲ್ಲಿ ಇರಬೇಕಾಯಿತು.


ಜಾರರು, ಸಲಿಂಗಕಾಮಿಗಳು, ನರಚೋರರು, ಸುಳ್ಳುಗಾರರು, ಅಸತ್ಯವಾದಿಗಳು, ಸ್ವಸ್ಥಬೋಧನೆಗೆ ವಿರುದ್ಧವಾಗಿರುವಂಥವುಗಳನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆ ಎಂದು ನಮಗೆ ತಿಳಿದಿದೆ.


‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು’ ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.


ಯೇಸು ಅವರಿಗೆ, “ನನ್ನ ತಂದೆಯಿಂದ ಅನೇಕ ಒಳ್ಳೆಯ ಕ್ರಿಯೆಗಳನ್ನು ನಿಮಗೆ ತೋರಿಸಿದ್ದೇನೆ. ಅವುಗಳಲ್ಲಿ ಯಾವ ಕ್ರಿಯೆಗಳ ನಿಮಿತ್ತ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?” ಎಂದು ಕೇಳಿದ್ದಕ್ಕೆ,


ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು. ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ” ಎಂದು ಹೇಳಿದನು.


ನನ್ನ ತಂದೆಯೇ, ಇಗೋ ನೋಡು, ನನ್ನ ಕೈಯಲ್ಲಿ ನಿನ್ನ ನಿಲುವಂಗಿಯ ತುಂಡು ಇದೆ. ನಾನು ನಿನ್ನನ್ನು ಕೊಲ್ಲದೆ, ನಿನ್ನ ನಿಲುವಂಗಿಯ ತುದಿಯನ್ನು ಕತ್ತರಿಸಿಕೊಂಡೆನಷ್ಟೇ ಇದರಿಂದ ನನ್ನಲ್ಲಿ ಯಾವ ದೋಷವೂ ಅಪರಾಧವೂ ಇರುವುದಿಲ್ಲ. ನಾನು ನಿನಗೆ ವಿರೋಧವಾಗಿ ದ್ರೋಹಮಾಡಲಿಲ್ಲ ಎಂದು ತಿಳಿದುಕೋ. ಆದರೂ ನೀನು ನನ್ನ ಪ್ರಾಣಕ್ಕೆ ಹೊಂಚು ಹಾಕುತ್ತಿರುವಿಯಲ್ಲಾ.


ಯಾವನಾದರೂ ಸ್ವದೇಶದವನಾದ ಇಸ್ರಾಯೇಲನನ್ನು ಕದ್ದು ಅವನನ್ನು ದಾಸತ್ವದಲ್ಲಿ ನಡಿಸಿದ್ದಾಗಲಿ ಅಥವಾ ಮಾರಿಬಿಟ್ಟದ್ದು ಕಂಡುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಅಂಥ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಿಬಿಡಬೇಕು.


ಯಾರಾದರೂ ಒಬ್ಬ ಮನುಷ್ಯನನ್ನು ಅಪಹರಿಸಿಕೊಂಡು ಹೋಗಿ ಮಾರಿದರೆ ಅಥವಾ ಅವನು ಬಂಧಿಸಲ್ಪಟ್ಟಾಗ, ಅಪಹರಿಸಲ್ಪಟ್ಟವನು ಅವನೊಂದಿಗಿದ್ದರೆ ಅವನಿಗೆ ಮರಣಶಿಕ್ಷೆಯಾಗಬೇಕು.


ಅಲ್ಲಿ ನಮ್ಮ ಸಂಗಡ ಇಬ್ರಿಯನಾದ ಒಬ್ಬ ಪ್ರಾಯಸ್ಥನಿದ್ದನು. ಅವನು ಮೈಗಾವಲಿನವರ ಅಧಿಪತಿಯ ಸೇವಕನು. ನಾವು ಅವನಿಗೆ ನಮ್ಮ ಕನಸುಗಳನ್ನು ತಿಳಿಸಿದಾಗ ಅವನು ಅವುಗಳ ಅರ್ಥವನ್ನು ನಮಗೆ ತಿಳಿಸಿದನು. ನಮ್ಮ ನಮ್ಮ ಕನಸಿನ ಪ್ರಕಾರ ಅರ್ಥವನ್ನು ಹೇಳಿದನು.


ತಪ್ಪಿಸಿಕೊಂಡವನೊಬ್ಬನು, ಇಬ್ರಿಯನಾದ ಅಬ್ರಾಮನ ಬಳಿಗೆ ಬಂದು ಈ ಸಂಗತಿಯನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ಮೋರೆ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆಯನಿಗೆ ಎಷ್ಕೋಲ ಮತ್ತು ಆನೇರ ಎಂಬ ಸಹೋದರರಿದ್ದರು; ಇವರಿಬ್ಬರಿಗೂ ಅಬ್ರಾಮನಿಗೂ ಒಡಂಬಡಿಕೆಯಿತ್ತು.


ಅವನು ಹೇಳಿದ ಅರ್ಥವು ಶುಭಕರವಾದದ್ದೆಂದು ಅಡಿಗೆಭಟ್ಟರಲ್ಲಿ ಮುಖ್ಯಸ್ಥನು ತಿಳಿದು ಯೋಸೇಫನಿಗೆ, ನಾನೂ ಕಂಡ ಕನಸನ್ನು ಹೇಳುತ್ತೇನೆ ಕೇಳು, “ನನಗೆ ಬಿದ್ದ ಕನಸಿನಲ್ಲಿ ಸೊಗಸಾದ ರೊಟ್ಟಿ ಪದಾರ್ಥಗಳು ತುಂಬಿದ್ದ ಮೂರು ಪುಟ್ಟಿಗಳು ನನ್ನ ತಲೆಯ ಮೇಲಿದ್ದವು.


ಅವನ ಕಾಲುಗಳು ಬೇಡಿಗಳಿಂದ ಕಟ್ಟಲ್ಪಟ್ಟವು; ಕಬ್ಬಿಣದ ಕೊರಳಪಟ್ಟಿಯಿಂದ ಅವನು ಬಂಧಿತನಾದನು.


ದುಷ್ಟರು, ವಂಚಕರು ನನಗೆ ವಿರುದ್ಧವಾಗಿ ಬಾಯ್ದೆರೆದಿದ್ದಾರೆ. ಅವರು ಸುಳ್ಳು ನಾಲಿಗೆಯಿಂದ ನನ್ನೊಡನೆ ಮಾತನಾಡುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು