ಆದಿಕಾಂಡ 40:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವನು ಹೇಳಿದ ಅರ್ಥವು ಶುಭಕರವಾದದ್ದೆಂದು ಅಡಿಗೆಭಟ್ಟರಲ್ಲಿ ಮುಖ್ಯಸ್ಥನು ತಿಳಿದು ಯೋಸೇಫನಿಗೆ, ನಾನೂ ಕಂಡ ಕನಸನ್ನು ಹೇಳುತ್ತೇನೆ ಕೇಳು, “ನನಗೆ ಬಿದ್ದ ಕನಸಿನಲ್ಲಿ ಸೊಗಸಾದ ರೊಟ್ಟಿ ಪದಾರ್ಥಗಳು ತುಂಬಿದ್ದ ಮೂರು ಪುಟ್ಟಿಗಳು ನನ್ನ ತಲೆಯ ಮೇಲಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಜೋಸೆಫನು ಹೇಳಿದ ಅರ್ಥ ಶುಭಕರ ಆದುದೆಂದು ತಿಳಿದ ಆ ಮುಖ್ಯ ಅಡಿಗೆಭಟ್ಟ ಅವನಿಗೆ, “ನಾನು ಕಂಡ ಕನಸನ್ನು ಹೇಳುತ್ತೇನೆ, ಕೇಳು: ಸೊಗಸಾದ ರೊಟ್ಟಿ ಪದಾರ್ಥಗಳು ತುಂಬಿದ್ದ ಮೂರು ಪುಟ್ಟಿಗಳು ನನ್ನ ತಲೆಯ ಮೇಲೆ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವನು ಹೇಳಿದ ಅರ್ಥವು ಶುಭಕರವಾದದ್ದೆಂದು ಭಕ್ಷ್ಯಕಾರರಲ್ಲಿ ಮುಖ್ಯಸ್ಥನು ತಿಳಿದು ಯೋಸೇಫನಿಗೆ - ನಾನೂ ಕಂಡ ಕನಸನ್ನು ಹೇಳುತ್ತೇನೆ ಕೇಳು. ನನಗೆ ಬಿದ್ದ ಕನಸಿನಲ್ಲಿ ಸೊಗಸಾದ ಭಕ್ಷ್ಯಗಳು ತುಂಬಿದ್ದ ಮೂರು ಪುಟ್ಟಿಗಳು ನನ್ನ ತಲೆಯ ಮೇಲಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಪಾನದಾಯಕನ ಕನಸಿನ ಅರ್ಥವು ಒಳ್ಳೆಯದಾಗಿರುವುದನ್ನು ಕಂಡ ಭಕ್ಷ್ಯಗಾರನು ಯೋಸೇಫನಿಗೆ, “ನನಗೂ ಒಂದು ಕನಸಾಯಿತು. ನನ್ನ ಕನಸಿನಲ್ಲಿ ನನ್ನ ತಲೆಯ ಮೇಲೆ ಮೂರು ಬುಟ್ಟಿಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಯೋಸೇಫನು ಒಳ್ಳೆಯ ಅರ್ಥವನ್ನು ಹೇಳಿದನೆಂದು ಮುಖ್ಯ ರೊಟ್ಟಿಗಾರನು ತಿಳಿದಾಗ, ಅವನು ಯೋಸೇಫನಿಗೆ, “ನನ್ನ ಕನಸಿನಲ್ಲಿಯೂ ಮೂರು ರೊಟ್ಟಿಯ ಪುಟ್ಟಿಗಳು ನನ್ನ ತಲೆಯ ಮೇಲಿದ್ದವು. ಅಧ್ಯಾಯವನ್ನು ನೋಡಿ |