Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 40:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದನ್ನು ಅವನು ನೋಡಿ, “ನಿಮ್ಮ ಮುಖವು ಈ ಹೊತ್ತು ಏಕೆ ಕಳೆಗುಂದಿದೆ?” ಎಂದು ತನ್ನ ದಣಿಯ ಮನೆಯೊಳಗೆ ತನ್ನೊಂದಿಗೆ ಕಾವಲಲ್ಲಿದ್ದ ಫರೋಹನ ಉದ್ಯೋಗಸ್ಥರನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅದನ್ನು ಗಮನಿಸಿದ ಜೋಸೆಫನು, “ಈ ದಿನ ನಿಮ್ಮ ಮುಖ ಕಳೆಗುಂದಿದೆ ಏಕೆ?” ಎಂದು ತನ್ನೊಂದಿಗೆ ಸೆರೆಯಲ್ಲಿದ್ದ ಆ ನೌಕರರನ್ನು ಕೇಳಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅದನ್ನು ಅವನು ನೋಡಿ - ನಿಮ್ಮ ಮುಖವು ಈ ಹೊತ್ತು ಯಾಕೆ ಕಳೆಗುಂದಿತು ಎಂದು ತನ್ನ ದಣಿಯ ಮನೆಯೊಳಗೆ ತನ್ನೊಂದಿಗೆ ಕಾವಲಲ್ಲಿದ್ದ ಫರೋಹನ ಉದ್ಯೋಗಸ್ಥರನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಈ ದಿನ ನೀವು ತುಂಬ ಚಿಂತೆಯಿಂದ ಇರುವಂತೆ ಕಾಣುತ್ತಿದೆ, ಕಾರಣವೇನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವನು ತನ್ನ ಸಂಗಡ ತನ್ನ ಯಜಮಾನನ ಸೆರೆಯಲ್ಲಿದ್ದ ಫರೋಹನ ಅಧಿಕಾರಿಗಳನ್ನು, “ನಿಮ್ಮ ಮುಖಗಳು ಇಂದು ಚಿಂತೆಗೊಂಡಿರುವುದು ಏಕೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 40:7
7 ತಿಳಿವುಗಳ ಹೋಲಿಕೆ  

ಅರಸನು ನನಗೆ, “ನಿನ್ನ ಮುಖ ಕಳೆಗುಂದಿರುವುದೇಕೆ? ನೀನು ಅಸ್ವಸ್ಥನಂತೆ ಕಾಣುವುದಿಲ್ಲ; ಇದು ಮನೋವೇದನೆಯಿಂದಾಗಿದೆಯೇ ಹೊರತು ಬೇರೇನೂ ಕಾರಣ ಇರಲಾರದು” ಎಂದು ಹೇಳಲು ನನಗೆ ಮಹಾ ಭೀತಿಯುಂಟಾಯಿತು.


ಆಗ ಆಕೆಯ ಗಂಡನಾದ ಎಲ್ಕಾನನು ಆಕೆಗೆ “ಹನ್ನಾ, ಏಕೆ ಅಳುತ್ತೀ? ಊಟ ಮಾಡದಿರುವುದಕ್ಕೆ ಕಾರಣವೇನು? ನೀನು ವ್ಯಸನಪಡುವುದೇಕೆ? ನಾನು ನಿನಗೆ ಹತ್ತು ಮಂದಿ ಗಂಡು ಮಕ್ಕಳಿಗಿಂತ ಹೆಚ್ಚಾಗಿದ್ದೇನಲ್ಲಾ” ಅಂದನು.


ಯೇಸು, “ನೀವು ಮಾರ್ಗದಲ್ಲಿ ಹೋಗುತ್ತಾ ಚರ್ಚಿಸಿ ಮಾತನಾಡಿಕೊಳ್ಳುವ ಈ ಸಂಗತಿಗಳೇನು” ಎಂದು ಕೇಳಲು, ಅವರು ದುಃಖದ ಮುಖವುಳ್ಳವರಾಗಿ ನಿಂತರು.


ಬಹು ಯುಕ್ತಿವಂತನಾದ ಇವನು ಒಂದು ದಿನ ಅಮ್ನೋನನನ್ನು, “ರಾಜಪುತ್ರನೇ ನೀನು ದಿನೇ ದಿನೇ ಕ್ಷೀಣನಾಗುತ್ತಾ ಬರುವುದೇಕೆ? ನನಗೆ ತಿಳಿಸುವುದಿಲ್ಲವೋ” ಎಂದು ಕೇಳಲು ಅವನು, “ನನ್ನ ತಮ್ಮನಾದ ಅಬ್ಷಾಲೋಮನ ತಂಗಿ ತಾಮಾರಳ ಮೇಲೆ ನನಗೆ ಮೋಹ ಉಂಟಾಗಿದೆ” ಎಂದು ಉತ್ತರ ಕೊಟ್ಟನು.


ಅವನು, “ನೀವು ಯಾಜಕನನ್ನೂ ನಾವು ಮಾಡಿಸಿಕೊಂಡ ದೇವರುಗಳನ್ನೂ ಅಪಹರಿಸಿಕೊಂಡಿದ್ದೀರಿ, ನನಗೆ ಇನ್ನೇನಿದೆ; ಹೀಗಿರಲಾಗಿ ನಿನಗೇನಾಯಿತೆಂದು ನೀವು ನನ್ನನ್ನು ಕೇಳುವುದು ಹೇಗೆ?” ಅಂದನು.


ಬೆಳಿಗ್ಗೆ ಯೋಸೇಫನು ಅವರ ಬಳಿಗೆ ಬಂದಾಗ ಅವರು ಬಹು ಚಿಂತೆಯುಳ್ಳವರಾಗಿ ಕಾಣಿಸಿದರು.


ಅವರೆಲ್ಲರನ್ನು ಅವನು, ಮೂರು ದಿನ ಕಾವಲಿನಲ್ಲಿರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು