Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಫರೋಹನು ಐಗುಪ್ತ ದೇಶದ ಎಲ್ಲಾ ಭಾಗಗಳಲ್ಲಿಯೂ ಅಧಿಕಾರಿಗಳನ್ನು ನೇಮಿಸಿ ಅವರ ಕೈಯಿಂದ ಸುಭಿಕ್ಷವಾದ ಏಳು ವರ್ಷಗಳಲ್ಲಿ ದೇಶದ ಬೆಳೆಯೊಳಗೆ ಐದರಲ್ಲಿ ಒಂದು ಪಾಲನ್ನು ಕಂದಾಯವಾಗಿ ಎತ್ತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಅದೂ ಅಲ್ಲದೆ, ದೇಶದ ಎಲ್ಲ ಭಾಗಗಳಲ್ಲೂ ಗುಮಾಸ್ತರನ್ನು ನೇಮಿಸಿ ಅವರ ಮೂಲಕ ಸುಭಿಕ್ಷವಾದ ಏಳು ವರ್ಷಗಳಲ್ಲಿ ದೇಶದ ಬೆಳೆಯಲ್ಲಿ ಐದನೆಯ ಒಂದು ಪಾಲನ್ನು ಕಂದಾಯವಾಗಿ ಎತ್ತಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಮತ್ತು ತಾವು ಒಂದು ಕೆಲಸ ಮಾಡಬೇಕು; ದೇಶದ ಎಲ್ಲಾ ಭಾಗಗಳಲ್ಲಿಯೂ ಕರಣೀಕರನ್ನು ನೇವಿುಸಿ ಅವರ ಕೈಯಿಂದ ಸುಭಿಕ್ಷವಾದ ಏಳು ವರುಷಗಳಲ್ಲಿ ದೇಶದ ಬೆಳೆಯೊಳಗೆ ಐದನೆಯ ಪಾಲನ್ನು ಕಂದಾಯವಾಗಿ ಎತ್ತಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಅಲ್ಲದೆ ಜನರಿಂದ ಆಹಾರವನ್ನು ಶೇಖರಿಸುವುದಕ್ಕಾಗಿ ತಾವು ಸಂಗ್ರಹಕರನ್ನು ನೇಮಿಸಿ ಒಳ್ಳೆಯ ಏಳು ವರ್ಷಗಳಲ್ಲಿ ಪ್ರತಿಯೊಬ್ಬ ಬೆಳೆಗಾರನಿಂದಲೂ ಬೆಳೆಯ ಐದನೆ ಒಂದು ಭಾಗವನ್ನು ಕಂದಾಯ ರೂಪದಲ್ಲಿ ವಸೂಲಿ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಫರೋಹನು ಅಧಿಕಾರಿಗಳನ್ನು ನೇಮಿಸಿ, ದೇಶದ ಮೇಲಿಟ್ಟು, ಸುಭಿಕ್ಷದ ಏಳು ವರ್ಷಗಳಲ್ಲಿ ಈಜಿಪ್ಟ್ ದೇಶದ ಐದರಲ್ಲಿ ಒಂದು ಭಾಗ ಬೆಳೆಯನ್ನು ಕಂದಾಯವಾಗಿ ತೆಗೆದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:34
14 ತಿಳಿವುಗಳ ಹೋಲಿಕೆ  

ತನ್ನ ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನೂ ಕರೆದು ಮೊದಲನೆಯವನನ್ನು, ‘ನೀನು ನನ್ನ ಯಜಮಾನನಿಗೆ ಎಷ್ಟು ಕೊಡಬೇಕು?’ ಎಂದು ಕೇಳಲು,


ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು, ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.


ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು, ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.


ಅವರ ಪ್ರಾಣವನ್ನು ಮರಣದಿಂದ ತಪ್ಪಿಸುವನು; ಬರಗಾಲದಲ್ಲಿ ಅವರ ಜೀವವನ್ನು ಉಳಿಸುವನು.


ಬರಗಾಲದಲ್ಲಿ ಮರಣದಿಂದಲೂ, ಯುದ್ಧದಲ್ಲಿ ಕತ್ತಿಯಿಂದಲೂ ನಿನ್ನನ್ನು ಬಿಡಿಸುವನು.


ಜಿಕ್ರಿಯನ ಮಗನಾದ ಯೋವೇಲನು ಇವರ ನಾಯಕನು. ಹಸ್ಸೆನೂವನ ಮಗನಾದ ಯೆಹೂದನು ಪಟ್ಟಣದ ಎರಡನೆಯ ಪುರಾಧಿಕಾರಿಯಾಗಿದ್ದನು.


ಕೆಲಸಮಾಡುವವರು ನಂಬಿಗಸ್ತರಾಗಿದ್ದರು; ಮೆರಾರಿಯರಲ್ಲಿ ಯಹತ್, ಓಬದ್ಯ ಎಂಬ ಲೇವಿಯರೂ ಕೆಹಾತ್ಯರಲ್ಲಿ ಜೆಕರ್ಯ, ಮೆಷುಲ್ಲಾಮ್ ಎಂಬ ಲೇವಿಯರೂ ಅವರ ಮೇಲ್ವಿಚಾರಕರಾಗಿದ್ದರು.


ಆಗ ಮೋಶೆಯು ಯುದ್ಧ ಭೂಮಿಯಿಂದ ಬಂದ ಸೈನ್ಯದ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಮೇಲೆ ಕೋಪಗೊಂಡನು.


“ಆದುದರಿಂದ ಫರೋಹನು ವಿವೇಕಿಯೂ, ಬುದ್ಧಿವಂತನೂ ಆಗಿರುವ ಪುರುಷನನ್ನು ಆರಿಸಿಕೊಂಡು ಅವನನ್ನು ಐಗುಪ್ತ ದೇಶಕ್ಕೆ ಅಧಿಕಾರಿಯಾಗಿ ನೇಮಿಸಬೇಕು, ಎಂದು ಹೇಳಿದನು.


ಅವರು ಮುಂದೆ ಬರುವ ಒಳ್ಳೆಯ ವರ್ಷಗಳಲ್ಲಿ ಆಹಾರ ಪದಾರ್ಥಗಳನ್ನು, ದವಸಧಾನ್ಯಗಳನ್ನೂ ಶೇಖರಿಸಿ ಫರೋಹನ ವಶದೊಳಗೆ ಪಟ್ಟಣಗಳಲ್ಲಿಟ್ಟು ಕಾಯಲಿ.


ಪೈರು ಕೊಯ್ಯುವ ಕಾಲದಲ್ಲಿ ಐದರಲ್ಲೊಂದು ಪಾಲು ಫರೋಹನಿಗೆ ಸಲ್ಲಬೇಕು; ಮಿಕ್ಕ ನಾಲ್ಕು ಪಾಲು ನಿಮ್ಮದು; ಅದು ಬೀಜಕ್ಕೆ ಆಗುತ್ತದೆ ಮತ್ತು ನಿಮಗೂ ನಿಮ್ಮ ಮನೆಯವರಿಗೂ ನಿಮ್ಮ ಕುಟುಂಬಕ್ಕೆ ಸೇರಿದವರೆಲ್ಲರಿಗೂ ಆಹಾರಕ್ಕಾಗುತ್ತದೆ” ಎಂದು ಹೇಳಿದನು.


ಬೆಳೆಯಲ್ಲಿ ಐದನೆಯ ಒಂದು ಪಾಲು ಫರೋಹನಿಗೆ ಸಲ್ಲಬೇಕೆಂಬುದನ್ನು ಯೋಸೇಫನು ಐಗುಪ್ತ ದೇಶದಲ್ಲಿ ಕಟ್ಟಳೆಯಾಗಿ ಮಾಡಿದನು. ಈ ದಿನದ ವರೆಗೂ ಅದು ಹಾಗೆಯೇ ಇದೆ. ಪುರೋಹಿತರ ಭೂಮಿ ಮಾತ್ರ ಫರೋಹನಿಗೆ ಸ್ವಾಧೀನವಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು