Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಫರೋಹನು ತನ್ನ ಸೇವಕರಿಗೆ, “ಇವನಲ್ಲಿ ದೇವರ ಆತ್ಮ ಉಂಟಲ್ಲಾ. ಇಂಥ ಯೋಗ್ಯನಾದ ಪುರುಷನು ನಮಗೆ ಸಿಕ್ಕಾನೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಫರೋಹನು ತನ್ನ ಪರಿವಾರದವರಿಗೆ, “ಈತ ದೇವರಾತ್ಮ ಪಡೆದವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಫರೋಹನು ತನ್ನ ಪರಿವಾರದವರಿಗೆ - ಈತನಲ್ಲಿ ದೇವರ ಆತ್ಮ ಉಂಟಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಫರೋಹನು ತನ್ನ ಸೇವಕರಿಗೆ, “ಈ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಯೋಸೇಫನಿಗಿಂತಲೂ ಉತ್ತಮನಾದ ವ್ಯಕ್ತಿಯನ್ನು ಕಂಡುಕೊಳ್ಳಲು ಸಾಧ್ಯವೇ? ದೇವರಾತ್ಮನೇ ಇವನ ಸಂಗಡವಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಫರೋಹನು ತನ್ನ ಸೇವಕರಿಗೆ, “ಯೋಸೇಫನಂಥ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:38
14 ತಿಳಿವುಗಳ ಹೋಲಿಕೆ  

ಆದರೆ ಮನುಷ್ಯರಲ್ಲಿ ಆತ್ಮವೊಂದುಂಟು, ಸರ್ವಶಕ್ತನಾದ ದೇವರ ಶ್ವಾಸದಿಂದ ಅವರಿಗೆ ವಿವೇಕ ದೊರೆಯುತ್ತದೆ.


ದೇವರುಗಳ ಆತ್ಮವು ನಿನ್ನಲ್ಲಿ ನೆಲಸಿ ಪರಮಜ್ಞಾನವೂ, ವಿವೇಕವೂ, ಬುದ್ಧಿಪ್ರಕಾಶವೂ ನಿನಗುಂಟೆಂದು ಕೇಳಿದ್ದೇನೆ.


“ಪರಿಶುದ್ಧ ದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ; ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ, ವಿವೇಕವೂ, ಬುದ್ಧಿ ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆಯಾದ ನೆಬೂಕದ್ನೆಚ್ಚರ ರಾಜನು ಅವನನ್ನು ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು ಇವರಿಗೆ ಅಧ್ಯಕ್ಷನನ್ನಾಗಿ ನೇಮಿಸಿದನು.


ಅದಕ್ಕೆ ಯೆಹೋವನು ಮೋಶೆಗೆ, “ನೂನನ ಮಗನಾದ ಯೆಹೋಶುವನಲ್ಲಿ ನನ್ನ ಆತ್ಮವು ವಾಸಿಸುತ್ತಿದೆ,


ರಾಜನಾದ ನೆಬೂಕದ್ನೆಚ್ಚರನೆಂಬ ನಾನು ಈ ಕನಸನ್ನು ಕಂಡೆನು; ಬೇಲ್ತೆಶಚ್ಚರನೇ, ನನ್ನ ರಾಜ್ಯದ ಸಕಲ ವಿದ್ವಾಂಸರಲ್ಲಿ ಯಾರೂ ಅದರ ಅರ್ಥವನ್ನು ತಿಳಿಸಲಾರರು; ನೀನು ಅದನ್ನು ತಿಳಿಸು; ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಸಿರುವುದರಿಂದ ನೀನೇ ಅದಕ್ಕೆ ಶಕ್ತನು.”


ಆದುದರಿಂದ ಕನಸಿನ ಅರ್ಥವನ್ನು ನನಗೆ ತಿಳಿಸಲಿಕ್ಕೆ ಬಾಬೆಲಿನ ವಿದ್ವಾಂಸರೆಲ್ಲರನ್ನೂ ಕರೆದುತರುವ ಹಾಗೆ ಆಜ್ಞಾಪಿಸಿದೆನು.


ಈ ದಾನಿಯೇಲನಲ್ಲಿ ಪರಮಬುದ್ಧಿ ಇದ್ದುದರಿಂದ ಅವನು ಉಳಿದ ಮುಖ್ಯಾಧಿಕಾರಿಗಳಿಗಿಂತಲೂ, ದೇಶಾಧಿಪತಿಗಳಿಗಿಂತಲೂ ಅಧಿಕ ಸಮರ್ಥನೆನಿಸಿಕೊಂಡಿದ್ದನು. ಅವನನ್ನು ರಾಜನು ಸಮಸ್ತ ರಾಜ್ಯದ ಮೇಲ್ವಿಚಾರಕನನ್ನಾಗಿ ನೇಮಿಸಲು ಉದ್ದೇಶಿಸಿದ್ದನು.


ಆ ಮಾತು ಫರೋಹನಿಗೂ ಅವನ ಸೇವಕರಿಗೂ ಒಳ್ಳೇದಾಗಿ ತೋರಿತು.


ಚೋಯನಿನ ಪ್ರಭುಗಳು ಕೇವಲ ಬುದ್ಧಿಹೀನರು. ಫರೋಹನ ಮಂತ್ರಿಗಳಲ್ಲಿ ಜ್ಞಾನವುಳ್ಳ ಸಲಹೆಗಾರರ ಆಲೋಚನೆಯೂ ಜ್ಞಾನರಹಿತವಾಗಿರುತ್ತದೆ. ನೀನು ಫರೋಹನಿಗೆ, “ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜನ ವಂಶದವನು? ಎಂದು ಹೇಗೆ ತಾನೆ ಹೇಳಿಕೊಳ್ಳುವಿರಿ.


“ಎಜ್ರನೇ, ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನೋಪದೇಶಗ್ರಂಥಕ್ಕೆ ಅನುಸಾರವಾಗಿ ನ್ಯಾಯಾಧೀಶರನ್ನೂ ಮತ್ತು ಪಂಚಾಯತರನ್ನೂ ನೇಮಿಸು. ಅವರು ಹೊಳೆಯಾಚೆಯ ಇಸ್ರಾಯೇಲರಲ್ಲಿ ನಿನ್ನ ದೇವರ ಧರ್ಮವನ್ನು ಅರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀವು ಅದನ್ನು ಕಲಿಸಬೇಕು.


ಜಾಣನಾದ ಸೇವಕನಿಗೆ ರಾಜನ ಕೃಪೆ, ಮಾನಗೇಡಿಗೆ ರಾಜನ ರೌದ್ರ.


ತನ್ನ ಕೆಲಸದಲ್ಲಿ ಚಾತುರ್ಯವುಳ್ಳವನನ್ನು ನೋಡು, ಇಂಥವನು ರಾಜನ ಸನ್ನಿಧಿಯಲ್ಲಿ ನಿಲ್ಲುವನೇ ಹೊರತು, ಸಾಮಾನ್ಯ ಜನರ ಮುಂದೆ ಅಲ್ಲ.


ಹೀಗಿರಲು ಮುಖ್ಯಾಧಿಕಾರಿಗಳೂ, ದೇಶಾಧಿಪತಿಗಳೂ ಅಸೂಯೆಯಿಂದ ರಾಜ್ಯಭಾರದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ತಪ್ಪುಹೊರಿಸುವ ಯಾವ ಸಂದರ್ಭವನ್ನೂ, ಯಾವ ತಪ್ಪನ್ನೂ ಕಾಣಲಾರದೆ ಹೋದರು. ಅವನು ನಂಬಿಗಸ್ತನೇ ಆಗಿದ್ದನು, ಅವನಲ್ಲಿ ಆಲಸ್ಯವಾಗಲಿ, ಅಕ್ರಮವಾಗಲಿ ಸಿಕ್ಕಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು