ಆದಿಕಾಂಡ 41:42 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಫರೋಹನು ತನ್ನ ಕೈಯಿಂದ ಉಂಗುರವನ್ನು ತೆಗೆದು ಯೋಸೇಫನ ಬೆರಳಿಗೆ ತೊಡಿಸಿ ಅವನಿಗೆ ನಾರುಮಡಿಯನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಸರವನ್ನು ಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ತನ್ನ ಬೆರಳಿನಿಂದ ಮುದ್ರಿಕೆಯನ್ನು ತೆಗೆದು ಜೋಸೆಫನ ಬೆರಳಿಗೆ ಇಟ್ಟನು. ಅವನಿಗೆ ಮೌಲ್ಯವಾದ ವಸ್ತ್ರಗಳನ್ನು ಹೊದಿಸಿದನು. ಕೊರಳಿಗೆ ಚಿನ್ನದ ಸರವನ್ನು ಹಾಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ತನ್ನ ಕೈಯಿಂದ ಮುದ್ರಿಕೆಯನ್ನು ತೆಗೆದು ಯೋಸೇಫನ ಕೈಗೆ ಇಟ್ಟು ಅವನಿಗೆ ನಾರುಮಡಿಯನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಸರಪಣಿಯನ್ನು ಹಾಕಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ರಾಜಮುದ್ರೆಯನ್ನು ಹೊಂದಿದ್ದ ತನ್ನ ಉಂಗುರವನ್ನು ಕೊಟ್ಟನು; ಧರಿಸಿಕೊಳ್ಳಲು ಒಳ್ಳೆಯ ನಾರುಬಟ್ಟೆಯ ನಿಲುವಂಗಿಯನ್ನು ಕೊಟ್ಟನು; ಕೊರಳಿಗೆ ಚಿನ್ನದ ಸರವನ್ನು ಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಫರೋಹನು ತನ್ನ ಕೈಯೊಳಗಿನ ಉಂಗುರವನ್ನು ತೆಗೆದು ಯೋಸೇಫನ ಕೈಯಲ್ಲಿಟ್ಟು, ನಾರುಮಡಿಯ ವಸ್ತ್ರವನ್ನು ತೊಡಿಸಿ, ಚಿನ್ನದ ಸರಪಣಿಯನ್ನು ಅವನ ಕೊರಳಿಗೆ ಹಾಕಿದನು. ಅಧ್ಯಾಯವನ್ನು ನೋಡಿ |
ಹೀಗಿರಲು ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ಕರೆಯಿಸಿ ಬಾಬೆಲಿನ ಆ ವಿದ್ವಾಂಸರಿಗೆ, “ಯಾರು ಈ ಬರಹವನ್ನು ಓದಿ, ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ನಾನು ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.
ನೀನು, ಗೂಢಾರ್ಥಗಳನ್ನು ವಿವರಿಸಿ ಕಠಿಣವಾದ ಸಂಗತಿಗಳನ್ನು ಬಿಡಿಸಿ ತಿಳಿಸುವವನಾಗಿದ್ದೀ ಎಂಬ ಸಮಾಚಾರವು ನನಗೆ ಮುಟ್ಟಿದೆ; ಈ ಬರಹವನ್ನು ಓದಿ ಇದರ ಅಭಿಪ್ರಾಯವನ್ನು ನನಗೆ ತಿಳಿಸಲು ನಿನ್ನಿಂದಾದರೆ ನಾನೀಗ ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ, ನಿನ್ನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ನಿನ್ನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.
ಮೊದಲನೆಯ ತಿಂಗಳಿನ ಹದಿಮೂರನೆಯ ದಿನದಲ್ಲಿ ರಾಜಲೇಖಕರು ಕೂಡಿ ಬರಬೇಕು ಎಂದು ಅಪ್ಪಣೆಯಾಯಿತು. ಅವರು ಹಾಮಾನನ ಆಜ್ಞಾನುಸಾರ ಉಪರಾಜರಿಗೂ, ಆಯಾ ಸಂಸ್ಥಾನಗಳ ಅಧಿಕಾರಿಗಳಿಗೂ, ಆಯಾ ಜನಾಂಗಗಳ ಅಧಿಪತಿಗಳಿಗೂ ಪತ್ರಗಳನ್ನು ಬರೆದರು. ಆಯಾ ಸಂಸ್ಥಾನಗಳ ಬರಹದಲ್ಲಿಯೂ ಆಯಾ ಜನಾಂಗಗಳ ಭಾಷೆಯಲ್ಲಿಯೂ ಇದ್ದ ಆ ಪತ್ರಗಳು ಅರಸನಾದ ಅಹಷ್ವೇರೋಷನ ಹೆಸರಿನಲ್ಲೇ ಲಿಖಿತವಾಗಿದ್ದವು; ಅವುಗಳಿಗೆ ರಾಜಮುದ್ರೆಯನ್ನು ಹಾಕಲಾಗಿತ್ತು.