Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:43 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ತನಗಿದ್ದ ಎರಡನೇ ರಥದಲ್ಲಿ ಅವನನ್ನು ಕುಳ್ಳಿರಿಸಿ, “ಅವನ ಮುಂದೆ ಅಡ್ಡ ಬೀಳಿರಿ” ಎಂದು ಪ್ರಕಟಣೆ ಹೊರಡಿಸಿ ಅವನನ್ನು ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ತನಗಿದ್ದ ಎರಡನೆಯ ರಥದಲ್ಲಿ ಕುಳ್ಳಿರಿಸಿ ಅವನ ಮುಂದೆ, “ಈತನಿಗೆ ಅಡ್ಡಬೀಳಿ,” ಎಂದು ಪ್ರಕಟನೆ ಮಾಡಿಸಿದನು. ಹೀಗೆ ಅವನನ್ನು ಈಜಿಪ್ಟ್ ದೇಶಕ್ಕೆ ಮುಖ್ಯಮಂತ್ರಿಯನ್ನಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ತನಗಿದ್ದ ಎರಡನೆಯ ರಥದಲ್ಲಿ ಕುಳ್ಳಿರಿಸಿ ಅವನ ಮುಂದೆ ಅಡ್ಡಬೀಳಿರಿ ಎಂದು ಪ್ರಕಟಣೆಮಾಡಿಸಿ ಅವನನ್ನು ಐಗುಪ್ತದೇಶಕ್ಕೆ ಸರ್ವಾಧಿಕಾರಿಯನ್ನಾಗಿ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಫರೋಹನು ಯೋಸೇಫನಿಗೆ ಎರಡನೆಯ ರಾಜರಥವನ್ನು ಸಂಚಾರಕ್ಕಾಗಿ ಕೊಟ್ಟನು. ವಿಶೇಷಕಾವಲುಗಾರರು ಅವನ ರಥದ ಮುಂದೆ ನಡೆದುಹೋಗುತ್ತಾ “ಪ್ರಜೆಗಳೇ, ಯೋಸೇಫನಿಗೆ ತಲೆಬಾಗಿ ನಮಸ್ಕರಿಸಿರಿ” ಎಂದು ಪ್ರಕಟಿಸಿದರು. ಹೀಗೆ ಯೋಸೇಫನು ಈಜಿಪ್ಟಿಗೆಲ್ಲಾ ರಾಜ್ಯಪಾಲನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ತನಗಿದ್ದ ಎರಡನೆಯ ರಥದಲ್ಲಿ ಅವನನ್ನು ಕೂಡಿಸಿದಾಗ, “ಈತನನ್ನು ನಮಸ್ಕರಿಸಿ ದಾರಿಮಾಡಿರಿ,” ಎಂದು ಪ್ರಕಟಿಸಿದನು. ಹೀಗೆ ಅವನನ್ನು ಈಜಿಪ್ಟ್ ದೇಶವನ್ನೆಲ್ಲಾ ಆಳುವವನನ್ನಾಗಿ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:43
16 ತಿಳಿವುಗಳ ಹೋಲಿಕೆ  

“ದೇವರೇ ನನ್ನನ್ನು ಇಲ್ಲಿಗೆ ಕಳುಹಿಸಿದನಲ್ಲದೆ ನೀವು ಕಳುಹಿಸಲಿಲ್ಲ. ನನ್ನ ತಂದೆಯು ನನ್ನನ್ನು ಫರೋಹನ ಮಂತ್ರಿಯನ್ನಾಗಿಯೂ, ಫರೋಹನ ಅರಮನೆಯಲ್ಲಿ ಅಧಿಪತಿಯನ್ನಾಗಿಯೂ, ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿಯೂ ಮಾಡಿದ್ದಾನೆ.


ಅವನಿಗೆ ಬಂದ ಎಲ್ಲಾ ಕಷ್ಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯೆಗೆ ಪಾತ್ರನೂ, ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ, ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಮಾಡಿದನು.


ಅವನಿಗೆ, “ಯೋಸೇಫನು ಇನ್ನೂ ಜೀವದಿಂದ ಇದ್ದಾನೆ ಅವನು ಐಗುಪ್ತ ದೇಶದ ಸರ್ವಾಧಿಕಾರಿಯಾಗಿದ್ದಾನೆ” ಎಂದು ತಿಳಿಸಲು, ಅವನು ಆಶ್ಚರ್ಯಪಟ್ಟು ನಂಬಲಿಲ್ಲ.


ಐಗುಪ್ತ ದೇಶದ ಮೇಲೆ ಅಧಿಕಾರವನ್ನು ನಡಿಸಿ ಜನರಿಗೆ ಧಾನ್ಯವನ್ನು ಮಾರುವವನು ಯೋಸೇಫನೇ ಆಗಿದ್ದನು. ಹೀಗಿರುವುದರಿಂದ ಅವನ ಅಣ್ಣಂದಿರು ಬಂದು ಅವನ ಮುಂದೆಯೇ ಅಡ್ಡಬಿದ್ದರು.


ಆದ್ದರಿಂದ ಸ್ವರ್ಗ ಮರ್ತ್ಯ ಪಾತಾಳಗಳಲ್ಲಿರುವವರೆಲ್ಲರೂ ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ ಅಡ್ಡಬಿದ್ದು,


ಅದಕ್ಕೆ “ದೇಶಾಧಿಪತಿ, ನೀವು ಸತ್ಯವಂತರೋ ಅಲ್ಲವೋ ಎಂಬುದು ಗೊತ್ತಾಗುವುದಕ್ಕಾಗಿ ನಿಮ್ಮೊಳಗೆ ಒಬ್ಬನನ್ನು ನನ್ನ ಬಳಿಯಲ್ಲಿ ಬಿಟ್ಟು ನಿಮ್ಮ ಮನೆಯವರ ಕ್ಷಾಮ ನಿವಾರಣೆಗೆ ಬೇಕಾದದ್ದನ್ನು ತೆಗೆದುಕೊಂಡು ಹೋಗಿ,


ಆ ದೇಶಾಧಿಪತಿ ನಮ್ಮ ಸಂಗಡ ಕಟುವಾಗಿ ಮಾತನಾಡಿ ನಮ್ಮನ್ನು ಗೂಢಚಾರರೆಂದು ಭಾವಿಸಿದನು.


ಫರೋಹನು ತನ್ನ ಕೈಯಿಂದ ಉಂಗುರವನ್ನು ತೆಗೆದು ಯೋಸೇಫನ ಬೆರಳಿಗೆ ತೊಡಿಸಿ ಅವನಿಗೆ ನಾರುಮಡಿಯನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಸರವನ್ನು ಹಾಕಿದನು.


ಅಲ್ಲದೆ ಫರೋಹನು ಯೋಸೇಫನಿಗೆ ಹೇಳಿದ್ದೇನೆಂದರೆ, “ನಾನು ಫರೋಹನು. ನಿನ್ನ ಅಪ್ಪಣೆಯಿಲ್ಲದೆ ಐಗುಪ್ತ ದೇಶದಲ್ಲೆಲ್ಲಾ ಒಬ್ಬನೂ ಕೈಯನ್ನಾಗಲಿ, ಕಾಲನ್ನಾಗಲಿ ಕದಲಿಸಬಾರದು” ಎಂದು ಹೇಳಿದನು.


ಇದಲ್ಲದೆ ಅಣ್ಣಂದಿರು ತಾವೇ ಬಂದು ಅವನ ಮುಂದೆ ಅಡ್ಡಬಿದ್ದು, “ಇಗೋ ನಾವು ನಿನಗೆ ಗುಲಾಮರು” ಎಂದರು.


ಯೆಹೂದ್ಯನಾದ ಮೊರ್ದೆಕೈಯಾದರೋ ರಾಜ್ಯದಲ್ಲಿ ಅರಸನಾದ ಅಹಷ್ವೇರೋಷನ ದ್ವಿತೀಯ ಸ್ಥಾನದವನೂ, ಯೆಹೂದ್ಯರಲ್ಲಿ ಸನ್ಮಾನಿತನೂ, ತನ್ನ ಬಂಧುಬಳಗಕ್ಕೆ ಪ್ರೀತಿಪಾತ್ರನೂ, ಸ್ವಜನರ ಹಿತಚಿಂತಕನೂ ಮತ್ತು ಸ್ವಕುಲದವರೆಲ್ಲರಿಗೂ ಶಾಂತಿದೂತನೂ, ಪ್ರಾರ್ಥನಾಪರನೂ ಆಗಿದ್ದನು.


ಇದಲ್ಲದೆ ಅವನ ಸಂಗಡ ರಥಗಳೂ, ಕುದುರೆಗಳೂ ಸಹ ಹೋದವು. ಯೋಸೇಫನ ಹಿಂದೆ ಹೊರಟು ಹೋದವರು ಬಹು ಮಂದಿಯಾಗಿದ್ದರು.


ರಾಜನ ಅರಮನೆಯಲ್ಲಿದ್ದ ಸೇವಕರೆಲ್ಲರೂ ಹಾಮಾನನಿಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿದ್ದರು; ಆದರೆ ಮೊರ್ದೆಕೈಯು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿರಲಿಲ್ಲ.


ಇಂಥ ಯುವಕನೊಬ್ಬನು ರಾಜನಾಗಲು ಸೆರೆಮನೆಯಿಂದ ಬಂದಿರಬಹುದು ಅಥವಾ ತನ್ನ ರಾಜ್ಯದಲ್ಲಿ ಬಡ ಪ್ರಜೆಯಾಗಿ ಹುಟ್ಟಿರಬಹುದು.


ಬಳಿಕ ರಾಜನು ದಾನಿಯೇಲನನ್ನು ಸನ್ಮಾನಿಸಿ, ಅವನಿಗೆ ಅಮೂಲ್ಯವಾದ ಅನೇಕ ಬಹುಮಾನಗಳನ್ನೂ ದಾನಗಳನ್ನು ಕೊಟ್ಟು, ಬಾಬೆಲ್ ಸಂಸ್ಥಾನವನ್ನೆಲ್ಲಾ ಅಧೀನಪಡಿಸಿ, ಬಾಬೆಲಿನ ವಿದ್ವಾಂಸರ ಸಕಲ ಮುಖ್ಯಸ್ಥರಿಗೂ ಅವನನ್ನು ಮುಖ್ಯಸ್ಥನನ್ನಾಗಿ ನೇಮಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು