Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:49 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಯೋಸೇಫನು ದವಸಧಾನ್ಯವನ್ನು ಸಮುದ್ರ ತೀರದ ಮರಳಿನಂತೆ ರಾಶಿರಾಶಿಯಾಗಿ ಶೇಖರಿಸಿ ಲೆಕ್ಕ ಮಾಡುವುದನ್ನು ಬಿಟ್ಟುಬಿಟ್ಟನು. ಅದನ್ನು ಲೆಕ್ಕ ಮಾಡುವುದಕ್ಕೆ ಆಗದೇ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ಹೀಗೆ ಕೂಡಿಸಿದ ದವಸಧಾನ್ಯ ಸಮುದ್ರದ ಮರಳಿನಂತೆ ರಾಶಿರಾಶಿಯಾಗಿತ್ತು. ಲೆಕ್ಕಮಾಡುವುದಕ್ಕೂ ಆಗದೆ ಲೆಕ್ಕ ಇಡುವುದನ್ನೇ ಬಿಟ್ಟುಬಿಡಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಅವನು ದವಸಧಾನ್ಯವನ್ನು ಸಮುದ್ರದ ಉಸಬಿನಷ್ಟು ರಾಶಿರಾಶಿಯಾಗಿ ಕೂಡಿಸಿ ಲೆಕ್ಕಮಾಡುವದನ್ನು ಬಿಟ್ಟು ಬಿಟ್ಟನು; ಅದನ್ನು ಲೆಕ್ಕ ಮಾಡುವದಕ್ಕೆ ಆಗದೆಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಯೋಸೇಫನು ಬಹಳ ದವಸಧಾನ್ಯಗಳನ್ನು ಸಂಗ್ರಹಿಸಿದ್ದರಿಂದ ಸಮುದ್ರದ ಮರಳಿನ ರಾಶಿಯೆಂಬಂತೆ ತೋರಿತು; ಲೆಕ್ಕಿಸುವುದಕ್ಕೂ ಅಸಾಧ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಈ ಮೇರೆಗೆ ಯೋಸೇಫನು ದವಸ ಧಾನ್ಯವನ್ನು ಸಮುದ್ರದ ಮರಳಿನಷ್ಟು ರಾಶಿರಾಶಿಯಾಗಿ ಕೂಡಿಸಿ ಲೆಕ್ಕಮಾಡುವುದನ್ನು ಬಿಟ್ಟುಬಿಟ್ಟನು. ಅದನ್ನು ಲೆಕ್ಕಮಾಡುವುದಕ್ಕೆ ಆಗದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:49
9 ತಿಳಿವುಗಳ ಹೋಲಿಕೆ  

ಧೂಳಿನಷ್ಟು ಮಾಂಸವೃಷ್ಟಿಯನ್ನು ಸುರಿಸಿದನು; ಸಮುದ್ರದ ಮರಳಿನಷ್ಟು ಪಕ್ಷಿಗಳು ಅವರಿದ್ದಲ್ಲಿ ಬೀಳುವಂತೆ ಮಾಡಿದನು.


ಆಗ ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೋಸ್ಕರ ಮೂವತ್ತು ಸಾವಿರ ರಥಬಲವನ್ನೂ, ಆರು ಸಾವಿರ ಅಶ್ವಬಲವನ್ನೂ, ಸಮುದ್ರದ ಮರಳಿನಷ್ಟು ಅಸಂಖ್ಯವಾದ ಕಾಲಾಳುಗಳನ್ನೂ ತೆಗೆದುಕೊಂಡು ಬಂದು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಪಾಳೆಯಮಾಡಿಕೊಂಡರು.


ಮಿದ್ಯಾನ್ಯರೂ, ಅಮಾಲೇಕ್ಯರೂ, ಮೂಡಣ ದೇಶದವರೂ ಮಿಡತೆಗಳಂತೆ ಗುಂಪಾಗಿ ತಗ್ಗಿನಲ್ಲಿ ಇಳಿದುಕೊಂಡಿದ್ದರು. ಅವರ ಒಂಟೆಗಳು ಸಮುದ್ರತೀರದ ಮರಳಿನಂತೆ ಅಸಂಖ್ಯವಾಗಿದ್ದವು.


ಆ ಶತ್ರುಗಳು ತಮ್ಮ ಕುರಿದನ ಗುಡಾರಗಳ ಸಹಿತವಾಗಿ ಮಿಡತೆಗಳಂತೆ ಗುಂಪುಗುಂಪಾಗಿ ಬರುತ್ತಿದ್ದರು. ಅವರೂ ಅವರ ಒಂಟೆಗಳೂ ಅಸಂಖ್ಯವಾಗಿದ್ದವು. ಆ ಗುಂಪೆಲ್ಲಾ ಬಂದು ದೇಶವನ್ನು ಹಾಳುಮಾಡುತ್ತಿತ್ತು.


ನಾನು ನಿನ್ನನ್ನು ಆಶೀರ್ವದಿಸಿಯೇ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಅಧಿಕವಾಗಿ ಹೆಚ್ಚಿಸುವೆನು, ಅದನ್ನು ಆಕಾಶದ ನಕ್ಷತ್ರಗಳಂತೆಯೂ, ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾಗುವಂತೆ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವತ್ತಾಗಿ ಮಾಡಿಕೊಳ್ಳುವರು.


ನಾನು ನನ್ನ ದಾಸನಾದ ದಾವೀದನ ಸಂತಾನವನ್ನು ಅಸಂಖ್ಯಾತವಾದ ನಕ್ಷತ್ರಗಣದಷ್ಟು ಹೆಚ್ಚಿಸುವೆನು; ನನ್ನ ಸೇವೆಮಾಡುವ ಲೇವಿಯರ ಸಂಖ್ಯೆಯನ್ನು ಅಳೆಯಲಾಗದ ಸಮುದ್ರತೀರದ ಉಸುಬಿನಷ್ಟು ವೃದ್ಧಿಪಡಿಸುವೆನು.”


ಅವನಿಗೆ ಏಳು ಸಾವಿರ ಕುರಿಗಳೂ, ಮೂರು ಸಾವಿರ ಒಂಟೆಗಳೂ, ಐನೂರು ಜೋಡಿ ಎತ್ತುಗಳೂ, ಐನೂರು ಹೆಣ್ಣು ಕತ್ತೆಗಳೂ, ಬಹುಮಂದಿ ಸೇವಕರೂ ಇದ್ದುದರಿಂದ ಅವನು ಮೂಡಣ ದೇಶದವರಲ್ಲೆಲ್ಲಾ ಹೆಚ್ಚು ಸ್ವತ್ತುಳ್ಳವನಾಗಿದ್ದನು.


ಐಗುಪ್ತದೇಶದಲ್ಲಿ ಸುಭಿಕ್ಷವಾದ ಆ ಏಳು ವರ್ಷಗಳ ಬೆಳೆಯನ್ನು ಯೋಸೇಫನು ಕೂಡಿಸಿ ಪಟ್ಟಣಗಳಲ್ಲಿ ಶೇಖರಿಸಿ ಇಡುವ ವ್ಯವಸ್ಥೆಮಾಡಿದನು. ಒಂದೊಂದು ಪಟ್ಟಣದ ಸುತ್ತಲೂ ಹೊಲಗಳ ಬೆಳೆಯನ್ನು ಆಯಾ ಪಟ್ಟಣದಲ್ಲಿಯೇ ಶೇಖರಿಸಿದ್ದನು.


ಬರಗಾಲ ಬರುವುದಕ್ಕಿಂತ ಮೊದಲು ಯೋಸೇಫನಿಗೆ ಇಬ್ಬರು ಗಂಡು ಮಕ್ಕಳು ಹುಟ್ಟಿದರು. ಇವರು ಓನ್ ಪಟ್ಟಣದ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು