Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:56 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

56 ಬರವು ಭೂಮಿಯ ಮೇಲೆಲ್ಲಾ ಹರಡಿಕೊಂಡಿದಾಗ ಯೋಸೇಫನು ಕಣಜಗಳನ್ನೆಲ್ಲಾ ತೆಗೆದು ಐಗುಪ್ತರಿಗೆ ಧಾನ್ಯವನ್ನು ಮಾರಿದನು. ಐಗುಪ್ತ ದೇಶದಲ್ಲಿ ಬರವು ಬಹುಘೋರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

56 ಬರವು ದೇಶದಲ್ಲೆಲ್ಲ ಹರಡಿಕೊಂಡಾಗ ಜೋಸೆಫನು ಕಣಜಗಳನ್ನೆಲ್ಲ ತೆಗೆಸಿ, ಈಜಿಪ್ಟರಿಗೆ ಧಾನ್ಯವನ್ನು ಮಾರಿಸಿದನು. ಈಜಿಪ್ಟ್ ದೇಶದಲ್ಲಿ ಬರವು ಬಹು ಘೋರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

56 ಬರವು ಲೋಕದಲ್ಲೆಲ್ಲಾ ಹರಡಿಕೊಂಡಿರುವಾಗ ಯೋಸೇಫನು ಕಣಜಗಳನ್ನೆಲ್ಲಾ ತೆಗಿಸಿ ಐಗುಪ್ತ್ಯರಿಗೆ ಧಾನ್ಯವನ್ನು ಮಾರಿಸಿದನು. ಐಗುಪ್ತದೇಶದಲ್ಲಿ ಬರವು ಬಹು ಘೋರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

56 ಎಲ್ಲೆಲ್ಲಿಯೂ ಬರಗಾಲವಾದಾಗ, ಯೋಸೇಫನು ಉಗ್ರಾಣಗಳನ್ನು ತೆಗೆಸಿ ದವಸಧಾನ್ಯಗಳನ್ನು ಜನರಿಗೆ ಮಾರಾಟ ಮಾಡಿಸಿದನು. ಈಜಿಪ್ಟಿನಲ್ಲಿ ಬರವು ಭೀಕರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

56 ಈಜಿಪ್ಟಿನಲ್ಲೆಲ್ಲಾ ಬರವಿತ್ತು. ಯೋಸೇಫನು ಧಾನ್ಯವಿದ್ದ ಕಣಜಗಳನ್ನೆಲ್ಲಾ ತೆರೆದು ಈಜಿಪ್ಟಿನವರಿಗೆ ಮಾರಿದನು. ಆಗ ಬರವು ಈಜಿಪ್ಟ್ ದೇಶದಲ್ಲಿ ಕಠಿಣವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:56
12 ತಿಳಿವುಗಳ ಹೋಲಿಕೆ  

ಐಗುಪ್ತ ದೇಶದ ಮೇಲೆ ಅಧಿಕಾರವನ್ನು ನಡಿಸಿ ಜನರಿಗೆ ಧಾನ್ಯವನ್ನು ಮಾರುವವನು ಯೋಸೇಫನೇ ಆಗಿದ್ದನು. ಹೀಗಿರುವುದರಿಂದ ಅವನ ಅಣ್ಣಂದಿರು ಬಂದು ಅವನ ಮುಂದೆಯೇ ಅಡ್ಡಬಿದ್ದರು.


ದೇವರು ಒಬ್ಬ ಮನುಷ್ಯನಿಂದ ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ, ಅವರವರು ಇರತಕ್ಕ ಕಾಲಗಳನ್ನೂ ಹಾಗು ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ಅವರನ್ನು ಇರಿಸಿ,


ಆ ದಿನವು ಭೂನಿವಾಸಿಗಳೆಲ್ಲರ ಮೇಲೆ ಬರುವುದು.


ಆಗ ದೂತನು ನನಗೆ, “ದೇಶದ ಮೇಲೆಲ್ಲಾ ಹೊರಟು ಬಂದಿರುವ ಶಾಪವು ಇದೇ. ಕಳ್ಳತನ ಮಾಡುವ ಪ್ರತಿಯೊಬ್ಬರೂ ದೇಶದಿಂದ ಹೊರಗೆ ತೆಗೆದುಹಾಕಲ್ಪಡುವರು. ಇದಕ್ಕೆ ತಕ್ಕ ಹಾಗೆ ಪ್ರತಿಯೊಬ್ಬ ಸುಳ್ಳು ಸಾಕ್ಷಿಯೂ ದೇಶದಿಂದ ಹೊರಗೆ ತೆಗೆದುಹಾಕಲ್ಪಡುವನು.


ಎಪ್ಪತ್ತು ವರ್ಷಗಳ ಮೇಲೆ ಯೆಹೋವನು ತೂರ್ ಪಟ್ಟಣವನ್ನು ಪರಾಂಬರಿಸುವನು. ಅವಳು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕದಲ್ಲಿರುವ ಸಕಲ ಅರಸರೊಂದಿಗೆ ಸೇರಿ ವ್ಯಾಪಾರ ಮಾಡುವಳು.


ಅವುಗಳ ತರುವಾಯ ಏಳು ದುರ್ಭಿಕ್ಷ ವರ್ಷಗಳೂ ಬರುವವು. ಆಗ ಐಗುಪ್ತದವರು ಮೊದಲಿದ್ದ ಸುಭಿಕ್ಷವನ್ನು ಮರೆತುಬಿಡುವರು. ಆ ಬರದಿಂದ ದೇಶವು ಹಾಳಾಗಿ ಹೋಗುವುದು.


ಐಗುಪ್ತ ದೇಶದಲ್ಲಿ ಬರ ಬಂದಾಗ ಪ್ರಜೆಗಳು ಆಹಾರ ಬೇಕೆಂದು ಫರೋಹನಿಗೆ ಮೊರೆಯಿಟ್ಟರು. ಅವನು ಅವರಿಗೆ, “ಯೋಸೇಫನ ಬಳಿಗೆ ಹೋಗಿರಿ, ಅವನು ಹೇಳಿದಂತೆ ಮಾಡಿರಿ” ಎಂದು ಹೇಳಿದನು.


ಇದಲ್ಲದೆ ಭೂಮಿಯಲ್ಲೆಲ್ಲಾ ಬರವು ಬಹುಘೋರವಾಗಿದುದರಿಂದ ಎಲ್ಲಾ ದೇಶದವರೂ ಧಾನ್ಯವನ್ನು ಕೊಂಡುಕೊಳ್ಳುವುದಕ್ಕಾಗಿ ಐಗುಪ್ತಕ್ಕೆ ಯೋಸೇಫನ ಬಳಿಗೆ ಬಂದರು.


ಕಾನಾನ್ ದೇಶದಲ್ಲಿ ಬರವು ಬಹು ಘೋರವಾಗಿತ್ತು.


ದಕ್ಷಿಣ ಕಾನಾನ್ ದೇಶದಲ್ಲಿ ಘೋರ ಕ್ಷಾಮವಿದ್ದುದರಿಂದ, ಅಬ್ರಾಮನು ಅಲ್ಲಿರದೆ, ಐಗುಪ್ತ ದೇಶದಲ್ಲಿ ಕೆಲವು ಕಾಲ ಇರಬೇಕೆಂದು ಆ ಬೆಟ್ಟದ ಸೀಮೆಯಿಂದ ಇಳಿದು ಹೋದನು.


ಅವರು ಮುಂದೆ ಬರುವ ಒಳ್ಳೆಯ ವರ್ಷಗಳಲ್ಲಿ ಆಹಾರ ಪದಾರ್ಥಗಳನ್ನು, ದವಸಧಾನ್ಯಗಳನ್ನೂ ಶೇಖರಿಸಿ ಫರೋಹನ ವಶದೊಳಗೆ ಪಟ್ಟಣಗಳಲ್ಲಿಟ್ಟು ಕಾಯಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು