Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವುಗಳ ಹಿಂದೆ ಮೂಡಣ ಗಾಳಿಯಿಂದ ಬತ್ತಿ ಒಣಗಿಹೋಗಿದ್ದ ಬೇರೆ ಏಳು ತೆನೆಗಳು ಮೊಳೆತು ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವುಗಳ ಹಿಂದೆಯೇ ಮೂಡಣಗಾಳಿಯಿಂದ ಒಣಗಿ, ಬತ್ತಿಹೋಗಿದ್ದ ಬೇರೆ ಏಳು ತೆನೆಗಳು ಮೊಳೆತು ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವುಗಳ ಹಿಂದೆ ಮೂಡಣ ಗಾಳಿಯಿಂದ ಕೆಟ್ಟು ಬತ್ತಿಹೋಗಿದ್ದ ಬೇರೆ ಏಳು ತೆನೆಗಳು ಮೊಳೆತು ಬಂದವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆಮೇಲೆ ಅದೇ ಸಸಿಯ ಮೇಲೆ ಬಿಸಿಗಾಳಿಯಿಂದ ಬತ್ತಿಹೋಗಿದ್ದ ಏಳು ತೆನೆಗಳು ಹುಟ್ಟಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವುಗಳ ಹಿಂದೆಯೇ ಪೂರ್ವದಿಕ್ಕಿನ ಗಾಳಿಯಿಂದ ಬತ್ತಿ, ಒಣಗಿ ಹೋದ ಏಳು ತೆನೆಗಳು ಮೊಳೆತವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:6
8 ತಿಳಿವುಗಳ ಹೋಲಿಕೆ  

ಎಫ್ರಾಯೀಮು ತನ್ನ ಸಹೋದರರಲ್ಲಿ ಫಲಸಮೃದ್ಧವಾಗಿದ್ದರೂ, ಕಾಡಿನಿಂದ ಯೆಹೋವನು ಬೀಸಮಾಡುವ ಮೂಡಣ ಗಾಳಿಯು ಬರಲು ಅದರ ಬುಗ್ಗೆಯು ಬತ್ತುವುದು, ಅದರ ಒರತೆಯು ಒಣಗುವುದು. ಶತ್ರುವು ಅವರ ಪ್ರಿಯವಸ್ತುಗಳ ನಿಧಿಯನ್ನು ಸೂರೆಮಾಡುವನು.


ಆದರೆ ಆ ಲತೆಯು ರೋಷದಲ್ಲಿ ಕೀಳಲ್ಪಟ್ಟು, ನೆಲದ ಮೇಲೆ ಬಿಸಾಡಲ್ಪಟ್ಟಿತು, ಮೂಡಣ ಗಾಳಿಯು ಅದರ ಫಲವನ್ನು ಬಾಡಿಸಿತು, ಅದರ ಗಟ್ಟಿ ಕೊಂಬೆಗಳು ಮುರಿದು ಒಣಗಿ ಹೋದವು, ಬೆಂಕಿಯು ಅವುಗಳನ್ನು ನುಂಗಿತು.


ಆಹಾ, ನಾಟಿಕೊಂಡಿದ್ದ ಆ ಲತೆಯು ಸಮೃದ್ಧವಾಗಿಯೇ ಇರುವುದೋ? ಮೂಡಣ ಗಾಳಿಯು ಬಡಿಯುವಾಗ ಬಾಡೇ ಬಾಡುವುದಲ್ಲವೇ? ಬೆಳೆದ ಪಾತಿಯಲ್ಲಿಯೇ ಒಣಗಿಹೋಗುವುದು.”


ಅವನು ಮತ್ತೆ ನಿದ್ರೆಮಾಡಿದಾಗ ಮತ್ತೊಂದು ಕನಸು ಬಿತ್ತು. ಅದೇನೆಂದರೆ, ಒಳ್ಳೆಯ ಪುಷ್ಟಿಯುಳ್ಳ ಏಳು ತೆನೆಗಳು ಒಂದೇ ದಂಟಿನಲ್ಲಿ ಹುಟ್ಟಿದವು.


ಆ ಬತ್ತಿ ಹೋಗಿದ್ದ ಈ ತೆನೆಗಳು ಆ ಏಳು ಪುಷ್ಟಿಯುಳ್ಳ ತೆನೆಗಳನ್ನು ನುಂಗಿಬಿಟ್ಟವು. ಆಗ ಫರೋಹನು ಎಚ್ಚೆತ್ತು, ಅದನ್ನು ಕನಸೆಂದು ತಿಳಿದುಕೊಂಡನು.


ಅವುಗಳ ಹಿಂದೆ ಮೂಡಣ ಗಾಳಿಯಿಂದ ಬತ್ತಿ ಒಣಗಿ ಹೋಗಿದ್ದ ಬೇರೆ ಏಳು ತೆನೆಗಳು ಮೊಳೆತು ಬಂದವು.


ಎಫ್ರಾಯೀಮು ಮೇಯಿಸುವ ಮಂದೆಯು ಗಾಳಿಯೇ, ಹಿಂದಟ್ಟುವ ಬೇಟೆಯು ಮೂಡಣಗಾಳಿಯೇ. ಅದು ಮೋಸವನ್ನೂ, ಹಿಂಸೆಯನ್ನೂ ನಿರಂತರ ಹೆಚ್ಚೆಚ್ಚಾಗಿ ನಡೆಸುತ್ತದೆ; ಅಶ್ಶೂರದೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳುತ್ತದೆ; ಐಗುಪ್ತಕ್ಕೆ ಎಣ್ಣೆಯನ್ನು ಕಾಣಿಕೆಯಾಗಿ ಕಳುಹಿಸುತ್ತದೆ.


ಸೂರ್ಯನು ಉದಯಿಸಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆಹೋಗುವವನಾಗಿ “ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು” ಎಂದು ಸಾಯಲು ಬಯಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು