Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಐಗುಪ್ತ ದೇಶದಲ್ಲಿ ದವಸಧಾನ್ಯವುಂಟೆಂದು ಯಾಕೋಬನು ತಿಳಿದಾಗ ತನ್ನ ಮಕ್ಕಳಿಗೆ, “ನೀವು ಒಬ್ಬರನ್ನೊಬ್ಬರು ನೋಡಿಕೊಂಡಿರುವುದೇಕೆ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಈಜಿಪ್ಟಿನಲ್ಲಿ ದವಸಧಾನ್ಯ ದೊರಕುತ್ತದೆ ಎಂಬ ಸಮಾಚಾರ ಯಕೋಬನಿಗೆ ಮುಟ್ಟಿತು. ಅವನು ತನ್ನ ಮಕ್ಕಳಿಗೆ, “ನೀವು ಮುಖಮುಖ ನೋಡಿಕೊಂಡು ಸುಮ್ಮನಿರುವುದು ಸರಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಐಗುಪ್ತದೇಶದಲ್ಲಿ ದವಸಧಾನ್ಯವುಂಟೆಂದು ಯಾಕೋಬನು ಕೇಳಿ ತನ್ನ ಮಕ್ಕಳಿಗೆ - ನೀವು ಒಬ್ಬರನ್ನೊಬ್ಬರು ನೋಡುತ್ತಿರುವದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಈಜಿಪ್ಟಿನಲ್ಲಿ ದವಸಧಾನ್ಯಗಳಿರುವುದಾಗಿ ಕಾನಾನಿನಲ್ಲಿದ್ದ ಯಾಕೋಬನಿಗೆ ತಿಳಿಯಿತು. ಆದ್ದರಿಂದ ಯಾಕೋಬನು ತನ್ನ ಗಂಡುಮಕ್ಕಳಿಗೆ, “ನಾವು ಇಲ್ಲಿ ಏನೂ ಮಾಡದೆ ಕುಳಿತುಕೊಂಡಿರುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಈಜಿಪ್ಟಿನಲ್ಲಿ ಧಾನ್ಯ ಉಂಟೆಂದು ಯಾಕೋಬನು ತಿಳಿದಾಗ, ಅವನು ತನ್ನ ಪುತ್ರರಿಗೆ, “ನೀವು ಒಬ್ಬರನ್ನೊಬ್ಬರು ನೋಡಿಕೊಂಡು ಸುಮ್ಮನಿರುವುದೇನು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:1
13 ತಿಳಿವುಗಳ ಹೋಲಿಕೆ  

ಆದರೆ ಐಗುಪ್ತದೇಶದಲ್ಲಿ ದವಸಧಾನ್ಯ ಉಂಟೆಂಬುದನ್ನು ಯಾಕೋಬನು ಕೇಳಿ, ನಮ್ಮ ಪೂರ್ವಿಕರನ್ನು ಮೊದಲ ಸಾರಿ ಅಲ್ಲಿಗೆ ಕಳುಹಿಸಿದನು.


ಆಗ ಯೆಹೋವನು ಯೆಹೋಶುವನಿಗೆ ಹೇಳಿದ್ದೇನೆಂದರೆ “ಏಳು, ನೀನು ಈ ಪ್ರಕಾರ ಬೋರಲು ಬಿದ್ದಿರುವುದೇಕೆ?


ಆದರೆ ಸುನ್ನತಿಯಾದವರಿಗೆ ಸುವಾರ್ತೆಯನ್ನು ಸಾರುವ ಕೆಲಸವು ಹೇಗೆ ಪೇತ್ರನಿಗೆ ಕೊಡಲ್ಪಟ್ಟಿತೋ, ಹಾಗೆಯೇ ಅನ್ಯಜನರಿಗೆ ಅದನ್ನು ಸಾರುವ ಕಾರ್ಯವನ್ನು ನನಗೆ ಕೊಡಲ್ಪಟ್ಟಿತು.


ಹೀಗಿರಲು ಎಫ್ರಾಯೀಮು ತಾನು ರೋಗಿಯೆಂದು ತಿಳುಕೊಂಡಿತು, ಯೆಹೂದವು ತನ್ನ ವ್ರಣವನ್ನು ನೋಡಿಕೊಂಡಿತು; ಆಗ ಎಫ್ರಾಯೀಮು ಅಶ್ಶೂರದ ಕಡೆಗೆ ತಿರುಗಿಕೊಂಡು ಜಗಳಗಂಟ ಮಹಾರಾಜನ ಬಳಿಗೆ ದೂತರನ್ನು ಕಳುಹಿಸಿತು; ಆದರೆ ಅವನು ನಿಮ್ಮನ್ನು ಸ್ವಸ್ಥಮಾಡಲಾರನು, ನಿಮ್ಮ ಗಾಯವನ್ನು ಗುಣಪಡಿಸಲಾರನು.


ಆ ಕಾಲದಲ್ಲಿ ಜನರು, “ಸುಮ್ಮನೆ ಕುಳಿತಿರುವುದೇಕೆ? ಕೂಡಿಕೊಳ್ಳಿರಿ, ಕೋಟೆಕೊತ್ತಲಗಳ ಪಟ್ಟಣಗಳಲ್ಲಿ ಸೇರಿ ಅಲ್ಲೇ ನಾಶವಾಗೋಣ. ನಾವು ನಮ್ಮ ದೇವರಾದ ಯೆಹೋವನಿಗೆ ಪಾಪಮಾಡಿದ್ದರಿಂದ ಆತನು ನಮ್ಮನ್ನು ನಾಶನಕ್ಕೆ ಗುರಿಮಾಡಿ ಕಹಿಯಾದ ನೀರನ್ನು ಕುಡಿಸಿದ್ದಾನಷ್ಟೆ.


ಎದ್ದೇಳು, ಈ ಕಾರ್ಯವನ್ನು ವಹಿಸತಕ್ಕವನು ನೀನು; ನಾವಾದರೋ ನಿನ್ನ ಸಹಾಯಕರು. ಧೈರ್ಯದಿಂದ ಕೈಹಾಕು” ಎಂದು ಹೇಳಿದನು.


ಅವನು ಇದನ್ನು ಕೇಳಿದೊಡನೆ ತನ್ನ ಪ್ರಾಣ ರಕ್ಷಣೆಗಾಗಿ ಅಲ್ಲಿಂದ ಹೊರಟು ಯೆಹೂದದ ಬೇರ್ಷೆಬಕ್ಕೆ ಬಂದು ಅಲ್ಲಿ ತನ್ನ ಸೇವಕನನ್ನು ಬಿಟ್ಟನು.


ಆ ಗುಡುಗು, ಮಿಂಚು, ತುತ್ತೂರಿಯ ಧ್ವನಿ, ಹಾಗೂ ಬೆಟ್ಟದಿಂದ ಹೊರಬರುತ್ತಿದ್ದ ಹೊಗೆಯನ್ನು ಜನರೆಲ್ಲರೂ ನೋಡಿ, ನಡುಗುತ್ತಾ ದೂರದಲ್ಲಿ ನಿಂತುಕೊಂಡರು.


ದಿನ ದಿನವೂ ಒಪ್ಪಿಸಬೇಕಾದ ಇಟ್ಟಿಗೆಗಳ ಲೆಕ್ಕ ಕಡಿಮೆಯಾಗಬಾರದೆಂಬ ಅಪ್ಪಣೆಯಾಗಿದ್ದರಿಂದ ಇಸ್ರಾಯೇಲರ ಮೇಲ್ವಿಚಾರಕರು ತಾವು ದುರವಸ್ಥೆಯಲ್ಲಿ ಸಿಕ್ಕಿಕೊಂಡಿವೆಂದು ತಿಳಿದುಕೊಂಡರು.


“ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬುದನ್ನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಹೋಗಿ ಬೇಕಾದ ದವಸವನ್ನು ಖರೀದಿಸಿಕೊಂಡು ಬನ್ನಿರಿ” ಎಂದು ಹೇಳಿದನು.


ಇದಲ್ಲದೆ ಭೂಮಿಯಲ್ಲೆಲ್ಲಾ ಬರವು ಬಹುಘೋರವಾಗಿದುದರಿಂದ ಎಲ್ಲಾ ದೇಶದವರೂ ಧಾನ್ಯವನ್ನು ಕೊಂಡುಕೊಳ್ಳುವುದಕ್ಕಾಗಿ ಐಗುಪ್ತಕ್ಕೆ ಯೋಸೇಫನ ಬಳಿಗೆ ಬಂದರು.


ಯೋಸೇಫನು ಹೇಳಿದ ಪ್ರಕಾರ ಕ್ಷಾಮದ ಏಳು ವರ್ಷಗಳು ಪ್ರಾರಂಭವಾಯಿತು. ಬರವು ಸುತ್ತಲಿರುವ ಎಲ್ಲಾ ದೇಶಗಳಲ್ಲಿಯೂ ಹಬ್ಬಿತು. ಐಗುಪ್ತ ದೇಶದಲ್ಲಿ ಮಾತ್ರ ಆಹಾರವಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು