ಆದಿಕಾಂಡ 42:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬುದನ್ನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಹೋಗಿ ಬೇಕಾದ ದವಸವನ್ನು ಖರೀದಿಸಿಕೊಂಡು ಬನ್ನಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಈಜಿಪ್ಟಿನಲ್ಲಿ ದವಸಧಾನ್ಯ ಉಂಟೆಂದು ನಾನು ಕೇಳಿದ್ದೇನೆ, ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಹೋಗಿ, ಬೇಕಾದ ದವಸವನ್ನು ಕೊಂಡುಕೊಂಡು ಬನ್ನಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬದನ್ನು ಕೇಳಿದ್ದೇನೆ; ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಹೋಗಿ ಬೇಕಾದ ದವಸವನ್ನು ಕೊಂಡುಕೊಂಡು ಬನ್ನಿರಿ ಎಂದು ಹೇಳಿದ್ದರಿಂದ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಈಜಿಪ್ಟಿನಲ್ಲಿ ದವಸಧಾನ್ಯಗಳಿರುವುದಾಗಿ ನಾನು ಕೇಳಿದ್ದೇನೆ. ಆದ್ದರಿಂದ ನಾವು ಅಲ್ಲಿಗೆ ಹೋಗಿ ನಮ್ಮ ಆಹಾರವನ್ನು ಕೊಂಡುಕೊಳ್ಳೋಣ. ಆಗ ನಾವು ಸಾಯದೆ ಬದುಕಿಕೊಳ್ಳುವೆವು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವನು ಮುಂದುವರಿಸಿ, “ಈಜಿಪ್ಟಿನಲ್ಲಿ ಧಾನ್ಯ ಉಂಟೆಂದು ನಾನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಇಳಿದು ಹೋಗಿ, ನಮಗಾಗಿ ಅಲ್ಲಿಂದ ಧಾನ್ಯವನ್ನು ಕೊಂಡುಕೊಳ್ಳಿರಿ,” ಎಂದನು. ಅಧ್ಯಾಯವನ್ನು ನೋಡಿ |