ಆದಿಕಾಂಡ 42:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ದಾರಿಯಲ್ಲಿ ಅವರು ಒಂದು ಸ್ಥಳದಲ್ಲಿ ಇಳಿದುಕೊಂಡಾಗ ಅವರಲ್ಲಿ ಒಬ್ಬನು ತನ್ನ ಕತ್ತೆಗೆ ಆಹಾರವನ್ನು ಕೊಡಬೇಕೆಂದು ತನ್ನ ಚೀಲವನ್ನು ಬಿಚ್ಚಿದಾಗ ಅದರ ಬಾಯಲ್ಲಿ ತಾನು ತಂದಿದ್ದ ಹಣವನ್ನು ಕಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ರಾತ್ರಿಗೆ ಒಂದು ಚಾವಡಿಯಲ್ಲಿ ಇಳಿದುಕೊಂಡರು. ಅವರಲ್ಲಿ ಒಬ್ಬನು ತನ್ನ ಕತ್ತೆಗೆ ಧಾನ್ಯಕೊಡಬೇಕೆಂದು ತನ್ನ ಚೀಲವನ್ನು ಬಿಚ್ಚಿದನು. ತಾನು ತಂದಿದ್ದ ಹಣ ಅದರ ಬಾಯಲ್ಲೇ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ದಾರಿಯಲ್ಲಿ ಅವರು ಒಂದು ಸ್ಥಳದಲ್ಲಿ ಇಳಿದುಕೊಂಡಾಗ ಅವರಲ್ಲಿ ಒಬ್ಬನು ತನ್ನ ಕತ್ತೆಗೆ ದಾಣಕೊಡಬೇಕೆಂದು ತನ್ನ ಚೀಲವನ್ನು ಬಿಚ್ಚಿದಾಗ ಅದರ ಬಾಯಲ್ಲೇ ತಾನು ತಂದಿದ್ದ ಹಣವನ್ನು ಕಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆ ರಾತ್ರಿ ಸಹೋದರರು ಒಂದು ಸ್ಥಳದಲ್ಲಿ ಇಳಿದುಕೊಂಡರು. ಸಹೋದರರಲ್ಲಿ ಒಬ್ಬನು ಕತ್ತೆಗೋಸ್ಕರ ಸ್ವಲ್ಪ ದವಸಧಾನ್ಯಗಳನ್ನು ತೆಗೆದುಕೊಳ್ಳಲು ತನ್ನ ಚೀಲವನ್ನು ಬಿಚ್ಚಿದಾಗ ತಾನು ಪಾವತಿ ಮಾಡಿದ್ದ ಹಣವು ಚೀಲದಲ್ಲಿರುವುದನ್ನು ನೋಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆಗ ಒಬ್ಬನು ತನ್ನ ಕತ್ತೆಗೆ ಆಹಾರವನ್ನು ಕೊಡುವುದಕ್ಕೆ ವಸತಿಗೃಹದಲ್ಲಿ ತನ್ನ ಚೀಲವನ್ನು ಬಿಚ್ಚಿದಾಗ, ಚೀಲದ ಬಾಯಲ್ಲಿಟ್ಟಿದ್ದ ತನ್ನ ಹಣವನ್ನು ಕಂಡನು. ಅಧ್ಯಾಯವನ್ನು ನೋಡಿ |