ಆದಿಕಾಂಡ 42:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ರೂಬೇನನು ತನ್ನ ತಂದೆಗೆ, “ನಾನು ಈ ಹುಡುಗನನ್ನು ತಿರುಗಿ ತಂದು ಒಪ್ಪಿಸದೆ ಹೋದರೆ ನನ್ನ ಇಬ್ಬರು ಗಂಡುಮಕ್ಕಳನ್ನು ಕೊಂದು ಹಾಕಬಹುದು. ಇವನನ್ನು ನನ್ನ ವಶಕ್ಕೆ ಕೊಟ್ಟರೆ ನಾನು ತಪ್ಪದೆ ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬರುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಅದಕ್ಕೆ ರೂಬೇನನು, “ನಾನು ಈ ಹುಡುಗನನ್ನು ನಿಮಗೆ ಪುನಃ ತಂದೊಪ್ಪಿಸುತ್ತೇನೆ; ಇಲ್ಲದೆಹೋದರೆ ನನ್ನಿಬ್ಬರು ಗಂಡುಮಕ್ಕಳನ್ನು ಕೊಂದುಹಾಕಬಹುದು. ಇವನನ್ನು ನನ್ನ ವಶಕ್ಕೆ ಕೊಡಿ, ನಾನು ತಪ್ಪದೆ ಇವನನ್ನು ನಿಮ್ಮ ಬಳಿಗೆ ಕರೆದುಕೊಂಡು ಬರುತ್ತೇನೆ,” ಎಂದು ಹೇಳಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ನಾನು ಈ ಹುಡುಗನನ್ನು ತಿರಿಗಿ ತಂದು ಒಪ್ಪಿಸದೆ ಹೋದರೆ ನನ್ನಿಬ್ಬರು ಗಂಡು ಮಕ್ಕಳನ್ನು ಕೊಂದು ಹಾಕಬಹುದು; ಇವನನ್ನು ನನ್ನ ವಶಕ್ಕೆ ಕೊಟ್ಟರೆ ನಾನು ತಪ್ಪದೆ ಇವನನ್ನು ನಿನ್ನ ಬಳಿಗೆ ಕರಕೊಂಡು ಬರುತ್ತೇನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ರೂಬೇನನು ತನ್ನ ತಂದೆಗೆ, “ಅಪ್ಪಾ, ನಾನು ಬೆನ್ಯಾಮೀನನನ್ನು ಕರೆದುಕೊಂಡು ಬರದಿದ್ದರೆ ನೀನು ನನ್ನ ಇಬ್ಬರು ಗಂಡುಮಕ್ಕಳನ್ನು ಕೊಲ್ಲಬಹುದು. ನನ್ನನ್ನು ನಂಬು. ನಾನು ಬೆನ್ಯಾಮೀನನನ್ನು ನಿನ್ನ ಬಳಿಗೆ ಕರೆದುಕೊಂಡು ಬರುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ರೂಬೇನನು ತನ್ನ ತಂದೆಗೆ, “ನಾನು ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ, ನನ್ನ ಇಬ್ಬರು ಪುತ್ರರನ್ನು ಕೊಂದುಬಿಡು. ನೀನು ಬೆನ್ಯಾಮೀನನನ್ನು ನನ್ನ ಕೈಯಲ್ಲಿ ಒಪ್ಪಿಸು. ನಾನು ಅವನನ್ನು ನಿನ್ನ ಬಳಿಗೆ ತಿರುಗಿ ತರುವೆನು,” ಎಂದನು. ಅಧ್ಯಾಯವನ್ನು ನೋಡಿ |