ಆದಿಕಾಂಡ 42:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಆದರೆ ಯಾಕೋಬನು ಅವರಿಗೆ, “ನನ್ನ ಮಗನು ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದವನು ಸತ್ತು ಹೋದನು. ಇವನೊಬ್ಬನೇ ಉಳಿದಿದ್ದಾನೆ. ಮಾರ್ಗದಲ್ಲಿ ಇವನಿಗೇನಾದರೂ ಕೇಡಾದರೆ ಈ ಮುದಿ ತಲೆ ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಯಕೋಬನು ಅವರಿಗೆ, “ನನ್ನ ಮಗ ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದ ಅವನು ಸತ್ತುಹೋದ, ಇವನೊಬ್ಬನೇ ಉಳಿದು ಇದ್ದಾನೆ, ದಾರಿಯಲ್ಲಿ ಇವನಿಗೇನಾದರೂ ಆಪತ್ತು ಸಂಭವಿಸಬಹುದು. ಆಗ, ನರೆಕೂದಲಿನ ಈ ಮುದುಕ ದುಃಖದಿಂದಲೆ ಸಮಾಧಿ ಸೇರಲು ನೀವೇ ಕಾರಣರಾಗುತ್ತೀರಿ,” ಎಂದು ಹೇಳಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಆದರೆ ಯಾಕೋಬನು ಅವರಿಗೆ - ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಇವನ ಒಡಹುಟ್ಟಿದವನು ಸತ್ತು ಹೋದನು; ಇವನೊಬ್ಬನೇ ಉಳಿದಿದ್ದಾನೆ; ಮಾರ್ಗದಲ್ಲಿ ಇವನಿಗೇನಾದರೂ ಕೇಡಾದರೆ ಈ ಮುದಿತಲೆ ದುಃಖದಿಂದಲೇ ಪಾತಾಳಕ್ಕೆ ಸೇರಲು ನೀವು ಕಾರಣವಾಗುವಿರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಯಾಕೋಬನು, “ನಾನು ನಿಮ್ಮೊಂದಿಗೆ ಬೆನ್ಯಾಮೀನನನ್ನು ಕಳುಹಿಸಿಕೊಡುವುದಿಲ್ಲ. ಅವನ ಸಹೋದರನು ಸತ್ತುಹೋದನು; ನನ್ನ ಹೆಂಡತಿಯಾದ ರಾಹೇಲಳಲ್ಲಿ ಹುಟ್ಟಿದ ಗಂಡುಮಕ್ಕಳಲ್ಲಿ ಇವನೊಬ್ಬನೇ ಉಳಿದಿರುವುದು. ಈಜಿಪ್ಟಿಗೆ ಪ್ರಯಾಣ ಮಾಡುವಾಗ ಇವನಿಗೆ ಅಪಾಯ ಸಂಭವಿಸಿದರೆ ವಯಸ್ಸಾದ ನಾನು ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣವಾಗುವಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಆದರೆ ಯಾಕೋಬನು, “ನನ್ನ ಮಗನು ನಿಮ್ಮ ಸಂಗಡ ಹೋಗಬಾರದು, ಅವನ ಅಣ್ಣ ಸತ್ತು ಹೋಗಿ, ಇವನೊಬ್ಬನೇ ಉಳಿದಿದ್ದಾನೆ. ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ, ನನ್ನ ಮುದಿ ತಲೆಯನ್ನು ದುಃಖದಿಂದ ಸಮಾಧಿಗೆ ಇಳಿಸುವಿರಿ,” ಎಂದನು. ಅಧ್ಯಾಯವನ್ನು ನೋಡಿ |