Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದರೆ ಯಾಕೋಬನು ಯೋಸೇಫನ ತಮ್ಮನಾದ ಬೆನ್ಯಾಮೀನನಿಗೆ “ಕೇಡು ಉಂಟಾದೀತೆಂದು” ಹೇಳಿ ಅಣ್ಣಂದಿರ ಜೊತೆಯಲ್ಲಿ ಕಳುಹಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆದರೆ ಜೋಸೆಫನ ಒಡಹುಟ್ಟಿದ ತಮ್ಮನಾದ ಬೆನ್ಯಾಮೀನನನ್ನು ಯಕೋಬನು ಅವರ ಸಂಗಡ ಕಳಿಸಲಿಲ್ಲ. ಏಕೆಂದರೆ, ಅವನಿಗೆ ಏನಾದರೂ ಆಪತ್ತು ಒದಗೀತೆಂಬ ಹೆದರಿಕೆ ಅವನದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆದರೆ ಯಾಕೋಬನು ಯೋಸೇಫನ ಒಡಹುಟ್ಟಿದ ತಮ್ಮನಾದ ಬೆನ್ಯಾಮೀನನನ್ನು ಅವನಿಗೆ ಕೆಡುಕುಂಟಾದೀತೆಂದು ಹೇಳಿ ಅಣ್ಣಂದಿರ ಜೊತೆಯಲ್ಲಿ ಕಳುಹಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯಾಕೋಬನು ಬೆನ್ಯಾಮೀನನನ್ನು ಕಳುಹಿಸಲಿಲ್ಲ. (ಬೆನ್ಯಾಮೀನನು ಯೋಸೇಫನ ಒಡಹುಟ್ಟಿದ ಒಬ್ಬನೇ ತಮ್ಮನಾಗಿದ್ದನು.) ಬೆನ್ಯಾಮೀನನಿಗೆ ಏನಾದರೂ ಕೇಡಾಗಬಹುದೆಂಬ ಭಯ ಯಾಕೋಬನಿಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ಯೋಸೇಫನ ಸಹೋದರನಾದ ಬೆನ್ಯಾಮೀನನನ್ನು ಕಳುಹಿಸಲಿಲ್ಲ. ಏಕೆಂದರೆ ಅವನಿಗೆ ಕೇಡು ಬಂದೀತೆಂದು ಹೇಳಿ, ಯಾಕೋಬನು ಅವನನ್ನು ಅವನ ಸಹೋದರರ ಸಂಗಡ ಕಳುಹಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:4
11 ತಿಳಿವುಗಳ ಹೋಲಿಕೆ  

ಆದರೆ ಯಾಕೋಬನು ಅವರಿಗೆ, “ನನ್ನ ಮಗನು ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದವನು ಸತ್ತು ಹೋದನು. ಇವನೊಬ್ಬನೇ ಉಳಿದಿದ್ದಾನೆ. ಮಾರ್ಗದಲ್ಲಿ ಇವನಿಗೇನಾದರೂ ಕೇಡಾದರೆ ಈ ಮುದಿ ತಲೆ ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ” ಎಂದು ಹೇಳಿದನು.


ಆಗ ಅವನು ಕಣ್ಣೆತ್ತಿ ತನ್ನ ಒಡಹುಟ್ಟಿದ ತಮ್ಮನಾದ ಬೆನ್ಯಾಮೀನನನ್ನು ನೋಡಿ, “ನೀವು ಹೇಳಿದ ನಿಮ್ಮ ಕಿರಿಯ ತಮ್ಮನು ಇವನೋ?” ಎಂದು ಕೇಳಿ ಅವನಿಗೆ, “ಮಗನೇ, ದೇವರ ದಯೆ ನಿನ್ನ ಮೇಲೆ ಇರಲಿ” ಎಂದು ಹೇಳಿದನು.


ಸರ್ವಶಕ್ತನಾದ ದೇವರು ನಿಮ್ಮ ಇನ್ನೊಬ್ಬ ಅಣ್ಣನನ್ನೂ, ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿಕೊಡುವಂತೆ ನಿಮ್ಮ ಮೇಲೆ ಕರುಣೆ ತೋರುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಿರಬೇಕು ಎಂದರೆ ಹಾಗೆಯೇ ಆಗಲಿ” ಎಂದು ಹೇಳಿದನು.


ಅವರು, “ಬನ್ನಿರಿ, ಒಂದು ಪಟ್ಟಣವನ್ನು ಕಟ್ಟೋಣ, ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಸಂಪಾದಿಸಿಕೊಳ್ಳೋಣ; ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಾಗುವುದಿಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ಯೆಹೋವ ದೇವರು “ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು” ಎಂದು ಆಜ್ಞಾಪಿಸಿದನು.


ರಾಹೇಲಳಲ್ಲಿ ಹುಟ್ಟಿದವರು: ಯೋಸೇಫನು ಮತ್ತು ಬೆನ್ಯಾಮೀನನು.


ಯೋಸೇಫನ ಹತ್ತು ಮಂದಿ ಅಣ್ಣಂದಿರು ಧಾನ್ಯವನ್ನು ಖರೀದಿಸಿಕೊಂಡು ತರುವುದಕ್ಕಾಗಿ ಐಗುಪ್ತ ದೇಶಕ್ಕೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು