ಆದಿಕಾಂಡ 42:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಧಾನ್ಯವನ್ನು ಕೊಂಡುಕೊಳ್ಳುವುದಕ್ಕೋಸ್ಕರ ಐಗುಪ್ತ ದೇಶಕ್ಕೆ ಬಂದವರಲ್ಲಿ ಇಸ್ರಾಯೇಲನ ಮಕ್ಕಳೂ ಇದ್ದರು, ಏಕೆಂದರೆ ಕಾನಾನ್ ದೇಶದಲ್ಲಿಯೂ ಬರವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಕಾನಾನ್ ನಾಡಿನಲ್ಲೂ ಬರವಿತ್ತು. ಧಾನ್ಯ ಕೊಂಡುಕೊಳ್ಳಲು ಅಲ್ಲಿಂದ ಈಜಿಪ್ಟಿಗೆ ಬಂದವರಲ್ಲಿ ಯಕೋಬನ (ಇಸ್ರಯೇಲನ) ಮಕ್ಕಳೂ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಧಾನ್ಯವನ್ನು ಕೊಂಡುಕೊಳ್ಳುವದಕ್ಕೋಸ್ಕರ ಐಗುಪ್ತದೇಶಕ್ಕೆ ಬಂದವರಲ್ಲಿ ಇಸ್ರಾಯೇಲನ ಮಕ್ಕಳೂ ಇದ್ದರು; ಕಾನಾನ್ ದೇಶದಲ್ಲಿಯೂ ಬರವಿತ್ತಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಕಾನಾನಿನಲ್ಲಿ ಬರಗಾಲ ಭೀಕರವಾಗಿತ್ತು. ಆದ್ದರಿಂದ ದವಸಧಾನ್ಯಗಳನ್ನು ಕೊಂಡುಕೊಳ್ಳಲು ಅನೇಕ ಜನರು ಕಾನಾನಿನಿಂದ ಈಜಿಪ್ಟಿಗೆ ಹೋದರು; ಇಸ್ರೇಲನ ಗಂಡುಮಕ್ಕಳೂ ಅವರೊಂದಿಗೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಕಾನಾನ್ ದೇಶದಲ್ಲಿ ಬರವಿದ್ದುದರಿಂದ ಧಾನ್ಯವನ್ನು ಕೊಂಡುಕೊಳ್ಳುವುದಕ್ಕೆ ಬರುವವರೊಂದಿಗೆ ಇಸ್ರಾಯೇಲನ ಪುತ್ರರೂ ಬಂದರು. ಅಧ್ಯಾಯವನ್ನು ನೋಡಿ |